Asianet Suvarna News Asianet Suvarna News

ಉಕ್ಕಿ ಹರಿಯುತ್ತಿದೆ ನೇತ್ರಾವತಿ, ಕುಮಾರಧಾರ: ಪ್ರವಾಹದ ಆತಂಕ

ಕರಾವಳಿಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ. ಸುಬ್ರಹ್ಮಣ್ಯ ಕುಲ್ಕುಂದದ ಪರಿಶಿಷ್ಟ ಕಾಲನಿಗೆ ಕುಮಾರಧಾರಾ ನದಿ ನೀರು ನುಗ್ಗಿದ್ದು ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಒಂದು ಮನೆ ಜಲಾವೃತವಾಗಿದ್ದು, ಇನ್ನುಳಿದ ಮನೆಗಳೂ ಜಲಾವೃತವಾಗುವ ಲಕ್ಷಣಗಳು ಗೋಚರಿಸಲಾರಂಭಿಸಿದೆ.

Kumaradhara Netravathi river swells in Mangalore
Author
Bangalore, First Published Aug 8, 2019, 11:05 AM IST

ಮಂಗಳೂರು(ಆ.08): ದಕ್ಷಿಣಕನ್ನಡ ಜಿಲ್ಲೆ ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ,ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.

ಸುಬ್ರಹ್ಮಣ್ಯ ಕುಲ್ಕುಂದದ ಪರಿಶಿಷ್ಟ ಕಾಲನಿಗೆ ಕುಮಾರಧಾರಾ ನದಿ ನೀರು ನುಗ್ಗಿದ್ದು ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಒಂದು ಮನೆ ಜಲಾವೃತವಾಗಿದ್ದು, ಇನ್ನುಳಿದ ಮನೆಗಳೂ ಜಲಾವೃತವಾಗುವ ಲಕ್ಷಣಗಳು ಗೋಚರಿಸಲಾರಂಭಿಸಿದೆ.

Kumaradhara Netravathi river swells in Mangalore

ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಇನ್ನಷ್ಟೇ ಆಗಬೇಕಿದೆ. ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ಚರ ರಾಜ್ಯ ಹೆದ್ದಾರಿಗು ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ನಿಶೇಧಿಸಲಾಗಿದೆ.

ನೇತ್ರಾವತಿಯಲ್ಲಿ ನೀರಿನ ಮಟ್ಟ ಏರಿಕೆ, ದ.ಕದಲ್ಲಿ ಹೈ ಅಲರ್ಟ್‌

ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.

Follow Us:
Download App:
  • android
  • ios