ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಿರಂತರ ಮಳೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ

ಸುಬ್ರಹ್ಮಣ್ಯ (ಜು.18): ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಿರಂತರ ಮಳೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. 

ಘಟ್ಟ ಪ್ರದೇಶ ಮತ್ತು ಕುಮಾರಧಾರ ಪರ್ವತಗಳಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕುಮಾರಧಾರ ನದಿಯಲ್ಲಿ ನೀರಿನ ಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

4 ದಿನ ರಾಜ್ಯದಲ್ಲಿ ಭಾರೀ ಮಳೆ : ಯಾವ ಜಿಲ್ಲೆಗಳಿಗೆ ಅಲರ್ಟ್..?

ಸದ್ಯ ಭಾರೀ ಮಳೆಯಿಂದಾಗಿ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಸ್ನಾನಘಟ್ಟ ಮುಳುಗಡೆ ಹಿನ್ನೆಲೆ ನದಿಗಿಳಿಯದೇ ಭಕ್ತರು ಹಿಂದಿರುಗುತ್ತಿದ್ದಾರೆ. 

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ಅಲ್ಲದೇ ನೀರಿನ ಸೆಳೆದ ಅಬ್ಬರ ಏರಿದ ಪರಿಣಾಮ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾಧಿಗಳಿಗೆ ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿ ಬಳಿ ರಬ್ಬರ್ ಬೋಟ್ ಸನ್ನದ್ದವಾಗಿ ಇಡಲಾಗಿದೆ. ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.