ಮಲೆನಾಡಿನಲ್ಲಿ ಮೂಲ ಸೌಕರ್ಯ ಕೊರತೆ: ಹಲವು ಗ್ರಾಮಗಳಿಂದ ಚುನಾವಣಾ ಬಹಿಷ್ಕಾರ

ರಸ್ತೆ ಹದಗೆಟ್ಟ ಕಾರಣ ಚುನಾವಣಾ ಬಹಿಷ್ಕಾರದ ಕೂಗು
ಚುನಾವಣೆ ಘೋಷಣೆಗೂ ಮೊದಲೇ ಬಹಿಷ್ಕಾರದ ಕೂಗು 
ಶೃಂಗೇರಿ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡ ವಿರುದ್ದ ಆಕ್ರೋಶ

Lack of infrastructure in the Malnad Election boycott from many villages sat

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಮಾ.25): ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಹಿಷ್ಕಾರದ ಕೂಗು  ಜೋರಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಬಹಿಷ್ಕಾರದ ಕೂಗು ಕೇಳಿಬರುತ್ತಿರುವುದು ಅಧಿಕಾರಿಗಳಿಗೆ ತಲೆನೋವು ತರಿಸಿದೆ. ಅದರಲ್ಲೂ ಮೂಲಭೂತ ಸೌಲಭ್ಯಕ್ಕಾಗಿ ಜನರು ಮತದಾನ ಬಹಿಷ್ಕಾರದ ಅಸ್ರ್ತ ಹಿಡಿದ್ದು ಬಹಿಷ್ಕಾರದ ಬ್ಯಾನರ್ ಹಾಕಿದ ತಕ್ಷಣ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಭರವಸೆಗಳನ್ನು ನೀಡಿ ಮನವೊಲಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಕಳೆದ 25 ವರ್ಷಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟ ಕಾರಣ ಚುನಾವಣಾ ಬಹಿಷ್ಕಾರ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ರಸ್ತೆ ಹದಗೆಟ್ಟಿರುವ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳ ಹತ್ತಿರ ಸುಮಾರು ಇಪ್ಪತ್ತು ವರ್ಷಗಳಿಂದ ಸರಿ ಮಾಡಿಸಿಕೊಡುವಂತೆ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲವೆಂದು ಸ್ಥಳೀಯ ಶಾಸಕರ ವಿರುದ್ದ ಕಿಡಿಕಾರಿದ್ದಾರೆ. 

Chikkamagaluru: ಮಲೆನಾಡಿನ 30ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಹೆಚ್ಚಾಗುತ್ತಿದೆ ಚುನಾವಣಾ ಬಹಿಷ್ಕಾರದ ಕೂಗು

ಕಾಲ್ನಡಿಗೆಯಲ್ಲಿ ಹೋಗುವುದೂ ಕಷ್ಟಕರ: ಹೀರೇಕೊಡಿಗೆ ಗ್ರಾಮ ಪಂಚಾಯಿತಿಯಲ್ಲಿರುವ ಗಣಪತಿಕಟ್ಟೆ ಗೋಳಾಪುರ ಹೊಕ್ಕಳಿಕೆಗೆ ಸಂಪರ್ಕಿಸುವ 4 ಕಿ. ಮೀ ರಸ್ತೆಯು ಸಂಪೂರ್ಣ ಹದಗೆಟ್ಟ ಕಾರಣ ಕಾಲ್ನಡಿಗೆಯಲ್ಲೂ ಹೋಗುವುದು ಕಷ್ಟಕರವಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಯಾವ ಆಟೋ ಚಾಲಕರು, ಎಲ್.ಪಿ.ಜಿ ವಾಹನಗಳು, ಶಾಲಾ ವಾಹನಗಳು, ಈ ರಸ್ತೆಯಲ್ಲಿ ಬರಲು ಒಪ್ಪದೆ ಇರುವುದರಿಂದ ನಿತ್ಯ ಸಂಕಷ್ಟದಲ್ಲಿ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕು ಸಾಮಾನುಗಳನ್ನು ತಲೆ ಮೇಲೆ ಹೊತ್ತುಕೊಂಡು ಹೋಗುವ ಪರಿಸ್ಥಿತಿ ಇಲ್ಲಿಂದಾಗಿದೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ: ರಸ್ತೆ ಹದಗೆಟ್ಟಿರುವ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳ ಹತ್ತಿರ ಸುಮಾರು ಇಪ್ಪತ್ತು ವರ್ಷಗಳಿಂದ ಸರಿ ಮಾಡಿಸಿಕೊಡುವಂತೆ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ.ಸದ್ಯ ಗ್ರಾಮದ ಮುಂದೆ ಹಾಕಿರುವ ಚುನಾವಣಾ ಬಹಿಷ್ಕಾರ  ಬ್ಯಾನರ್ ನೋಡಿ ಗ್ರಾಮ ಪಂಚಾಯಿತಿ, ತಾಲ್ಲೂಕ್ ಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಮನವೊಲಿಸುವ ಕೆಲಸದಲ್ಲಿ ನಿತರಾಗಿದ್ದಾರೆ. 

Political Express: ಮಾಜಿ ಸಚಿವ ಈಶ್ವರಪ್ಪ ಕ್ಷೇತ್ರದಲ್ಲಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆ!

ನಿವೇಶನ ರಹಿತರಿಂದ ಚುನಾವಣಾ ಬಹಿಷ್ಕಾರ: ಒಂದಡೆ ರಸ್ತೆಗಾಗಿ ಮತದಾನ ಬಹಿಷ್ಕಾರ ಹಾಕಿದ್ರೆ ಮತ್ತೊಂದಡೆ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿಗಾಗಿ ಬಹಿಷ್ಕಾರವನ್ನು ಹಾಕಿದ್ದಾರೆ.  ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ನಿವೇಶನ ರಹಿತರಿಗೆ ಸರ್ಕಾರದಿಂದ ನಿವೇಶನ ನೀಡದೆ ಇರುವುದರಿಂದ ಈ ಬಾರಿ ಚುನಾವಣಾ ಬಹಿಷ್ಕಾರವನ್ನು ಹಾಕಿದ್ದಾರೆ. 152 ಕುಟುಂಬಗಳಿಗೆ ಈವರೆಗೂ ಕಳೆದ ಹತ್ತಾರು ವರ್ಷಗಳಿಂದ ನಿವೇಶನವನ್ನು ನೀಡಿಲ್ಲವೆಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಅಲ್ಲದೆ ಈ  ಬಾರಿ ಚುನಾವಣಾ ಬಹಿಷ್ಕಾರ ಮಾಡುವುದಾಗಿ ಗ್ರಾಮದಲ್ಲಿ  ಬ್ಯಾನರ್ ನ್ನು ಗ್ರಾಮಸ್ಥರು ಹಾಕಿದ್ದಾರೆ.

Latest Videos
Follow Us:
Download App:
  • android
  • ios