ತುಮಕೂರು: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ 1.5 ಲಕ್ಷ ಜನರ ನಿರೀಕ್ಷೆ
ತುಮಕೂರಿನಲ್ಲಿ ನಡೆಯಲಿರುವ ರೈತ ಸಮಾವೇಶಕ್ಕೆ ಒಂದೂವರೆ ಲಕ್ಷ ಜನ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಣಿಪುರ್, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು, ಉತ್ತರಾಖಂಡ ರಾಜ್ಯಪಾಲರು ಸೇರಿದಂತೆ ವಿವಿಧ ರಾಜ್ಯಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ತುಮಕೂರು(ಜ.01): ಜ.2ರಂದು ತುಮಕೂರಿನಲ್ಲಿ ನಡೆಯಲಿರುವ ರೈತ ಸಮಾವೇಶಕ್ಕೆ ಒಂದೂವರೆ ಲಕ್ಷ ಜನ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ತುಮಕೂರಿನ ಸಿದ್ಧಗಂಗಾ ಮಠ, ಹೆಲಿಪ್ಯಾಡ್ ಹಾಗೂ ರೈತ ಸಮಾವೇಶ ನಡೆಯುವ ಕಾರ್ಯಕ್ರಮಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಅವರು ತುಮಕೂರು ನಗರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ರೈತ ಕಾರ್ಯಕ್ರಮದಲ್ಲಿ ರಾಜ್ಯ ಮೂವರು ಪ್ರಗತಿಪರ ರೈತರು ಸೇರಿ 28 ಮಂದಿಗೆ ‘ಕೃಷಿ ಕರ್ಮಣ್ಯೆ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದಿದ್ದಾರೆ.
'ಪಂಪ್‌ವೆಲ್ ಫ್ಲೈಓವರ್ ಉದ್ಘಾಟನೆ ಆಗಿಲ್ಲ, ಟೋಲ್ ಕೊಡಲ್ಲ'..!
ಹಾಗೆಯೇ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಲಿದ್ದಾರೆ ಎಂದು ತಿಳಿಸಿದ ಅವರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಲಿದೆ ಎಂದು ಹೇಳಿದ್ದಾರೆ.
ಸಿದ್ಧಗಂಗಾ ಮಠಕ್ಕೆ ಭೇಟಿ:
ಅಂದು ಮಧ್ಯಾಹ್ನ 2.15ಕ್ಕೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಅವರು, ಡಾ.ಶಿವಕುಮಾರಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ನಂತರ ಶ್ರೀಗಳ ವಸ್ತು ಪ್ರದರ್ಶನ ಭವನಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಠದ ಕಾರ್ಯಕ್ರಮದ ನಂತರ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸುವ ಅವರು, ಸಂಜೆ ಐದರವರೆಗೆ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಮಣಿಪುರ್, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು, ಉತ್ತರಾಖಂಡ ರಾಜ್ಯಪಾಲರು ಸೇರಿದಂತೆ ವಿವಿಧ ರಾಜ್ಯಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ತುಮಕೂರಿಗೆ ಮೋದಿ: ಸಿದ್ಧಗಂಗಾ ಮಠಕ್ಕೆ ಭೇಟಿ, ಖಾಸಗಿ ಕಾರ್ಯಕ್ರಮದಲ್ಲಿ ಭಾಗಿ!
ಈ ವೇಳೆ ಸಚಿವರಾದ ಮಾಧುಸ್ವಾಮಿ, ವಿ.ಸೋಮಣ್ಣ, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜ್ಯೋತಿಗಣೇಶ್, ಬಿ.ಸಿ.ನಾಗೇಶ್, ಮಸಾಲೆಜಯರಾಂ, ಮಾಜಿ ಶಾಸಕ ಸುರೇಶ್‌ಗೌಡ, ಮಾಜಿ ಎಂಎಲ್‌ಸಿ ಹುಲಿನಾಯ್ಕರ್, ಮುಖಂಡರಾದ ಹಾಲನೂರು ಲೇಪಾಕ್ಷಿ, ದಿಲೀಪ್ ಕುಮಾರ್ ಸೇರಿದಂತೆ ಇತರರಿದ್ದರು.