Asianet Suvarna News Asianet Suvarna News

ಲಕ್ಕುಂಡಿ ಉತ್ಸವ-2023: ಸಚಿವ ಸಿ.ಸಿ.ಪಾಟೀಲರಿಂದ ಲೋಗೋ, ಪ್ರೋಮೊ ಬಿಡುಗಡೆ

ಲಕ್ಕುಂಡಿ ಉತ್ಸವದ ಯಶಸ್ವಿಗೆ ರಚಿಸಲಾದ ವಿವಿಧ ಸಮಿತಿಗಳ ಸಭೆಗಳನ್ನು ಜರುಗಿಸಿ ವ್ಯವಸ್ಥಿತ ಕಾರ್ಯಕ್ರಮ ಆಯೋಜನೆಗೆ ಅಗತ್ಯದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದ ಸಚಿವ ಸಿ.ಸಿ.ಪಾಟೀಲ. 

Lakkundi Utsav Logo and Promo Launched by Minister CC Patil grg
Author
First Published Feb 1, 2023, 12:00 AM IST

ಗದಗ(ಫೆ.01): ಫೆ. 10 ರಿಂದ 12ರ ವರೆಗೆ ಮೂರು ದಿನ ಜರುಗಲಿರುವ ಐತಿಹಾಸಿಕ ಲಕ್ಕುಂಡಿ ಉತ್ಸವವನ್ನು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಶಸ್ವಿಗೊಳಿಸಬೇಕೆಂದು ಲೋಕೊಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಹೇಳಿದರು. ನಿನ್ನೆ(ಮಂಗಳವಾರ) ಲಕ್ಕುಂಡಿಯ ಅನ್ನದಾನಿಶ್ವರ ಸಮುದಾಯ ಭವನದಲ್ಲಿ ಜರುಗಿದ ಲಕ್ಕುಂಡಿ ಉತ್ಸವದ ಲಾಂಛನ, ಪ್ರೊಮೊ ಹಾಗೂ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಲಕ್ಕುಂಡಿ ಉತ್ಸವದ ಯಶಸ್ವಿಗೆ ರಚಿಸಲಾದ ವಿವಿಧ ಸಮಿತಿಗಳ ಸಭೆಗಳನ್ನು ಜರುಗಿಸಿ ವ್ಯವಸ್ಥಿತ ಕಾರ್ಯಕ್ರಮ ಆಯೋಜನೆಗೆ ಅಗತ್ಯದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು. 

ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವ ಹಿನ್ನಲೆಯಲ್ಲಿ ಸಮಯ ಹೊಂದಾಣಿಕೆ ಮಾಡಲಾಗಿದೆ, ಖ್ಯಾತ ಕಲಾವಿದರು, ಸಾಹಿತ್ಯಕಾರರಿಗೂ ಆದ್ಯತೇ ನೀಡಲಾಗಿದೆ. ಫೆ. 10 ರಂದು ಮಧ್ಯಾಹ್ನ ಜರುಗಲಿರುವ ಮೆರವಣಿಗೆಗೆ ಹೆಚ್ಚಿನ ಮೆರಗು ನೀಡುವ ಉದ್ದೇಶದಿಂದ ಸ್ಥಳೀಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಕಲಾತಂಡಗಳನ್ನು ಕರೆ ತರಲಾಗುತ್ತಿದೆ.  ಉತ್ಸವದ ಉದ್ಘಾಟನಾ ಕಾರ್ಯಕ್ರಮದ ನಂತರ ರಂಗಾಯಣ ಕಲಾವಿದರಿಂದ ವೀರ ರಾಣಿ ಕಿತ್ತೂರ ರಾಣಿ ಚನ್ನಮ್ಮ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ನಮ್ಮ ವಾಹನಕ್ಕೆ ನಾವೇ ಕಲ್ಲು ಒಗೆದು ಗಲಾಟೆ ಮಾಡೋಣ ಎಂದಿದ್ದ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ!

ಕಾರ್ಯಕ್ರಮವನ್ನು ಹಸರೀಕರಣದ ಮಹತ್ವಾಕಾಂಕ್ಷೆಯೊಂದಿಗೆ ಸಸಿ ನೆಡುವ ಮೂಲಕ ಉದ್ಘಾಟಿಸಲಾಗುವದು. ಉತ್ಸವದ ಯಶಸ್ವಿಗಾಗಿ ಎಲ್ಲರ ಸಹಕಾರ ಅಗತ್ಯವಾಗಿದ್ದು ಲಕ್ಕುಂಡಿಯ ವೈಭವವನ್ನು ನಾಡಿನಾದ್ಯಂತ ಪಸರಿಸಲು ಎಲ್ಲರ ಪಾಲ್ಗೊಳ್ಳುವಿಕೆ ಹಾಗೂ ಸಹಕಾರ ಅಗತ್ಯವಾಗಿದೆ ಎಂದರು. ಉತ್ಸವಕ್ಕೆ ಆಗಮಿಸುವ ಎಲ್ಲರಿಗೂ ಮೂರು ದಿನಗಳ ಕಾಲ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಉತ್ಸವದ ಸಾಂಸ್ಕೃತಿ ಕಾರ್ಯಕ್ರಮಗಳಿಗಾಗಿ ರಾಷ್ಟ್ರ ಮಟ್ಟದ ಕಲಾವಿದರನ್ನು ಆಯ್ಕೆ ಮಾಡಲಾಗಿದೆ ಎಂದರು. ಉತ್ಸವದ ಹಿನ್ನಲೆಯಲ್ಲಿ ಗ್ರಾಮಸ್ಥರು ತಮ್ಮ ಮನೆಗಳ ಮುಂದೆ ರಂಗೋಲಿ ಹಾಗೂ ಬಾಳೆ ಕಂಬಗಳನ್ನು ಹಚ್ಚುವದರ ಮೂಲಕ ಗ್ರಾಮದ ಸೌಂದರ್ಯವನ್ನು ಹೆಚ್ಚಿಸಲು ಗ್ರಾಮಸ್ಥರಲ್ಲಿ ಮನವಿ ಮಾಡಿದ ಅವರು ಸದರಿ ಉತ್ಸವವನ್ನು ಪಕ್ಷಾತೀತವಾಗಿ ಆಚರಿಸಲಾಗುತ್ತಿದ್ದು ಸರ್ವರೂ ಭಾಗಿಯಾಗುವಂತೆ ಸಚಿವ ಸಿ.ಸಿ.ಪಾಟೀಲ ಕೋರಿದರು.

ಫೆ. 11 ರಂದು ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ಖ್ಯಾತ ಗಾಯಕಿ ಅನನ್ಯ ಭಟ ತಂಡದಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ. ಫೆ.12 ರಂದು ಸಾಯಂಕಾಲ ಸಮಾರೋಪ ಸಮಾರಂಭ ನಂತರ ಸಿಡಿಮದ್ದು ಪ್ರದರ್ಶನ ಕೊನೆಯಲ್ಲಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಅವರಿಂದ ಸಂಗೀತ ರಸದೌತಣ ಏರ್ಪಡಿಸಿದೆ. ಈ ನಡುವೆ ಬೆಳಗಿನಿಂದ ಮಧ್ಯಾಹ್ನದವರೆಗೆ ವಿವಿಧ ವಿಷಯಗಳ ಕುರಿತು ಗೋಷ್ಠಿಗಳು ಜರುಗಲಿವೆ.

ಸಚಿವ ಸಿ.ಸಿ.ಪಾಟೀಲ ಅವರಿಂದ ಲಕ್ಕುಂಡಿ ಉತ್ಸವ ವೇದಿಕೆ ಸ್ಥಳ ಪರೀಶಿಲನೆ 

ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಇದೇ ಫೆ. 10 ರಿಂದ 12ರ ವರೆಗೆ ಮೂರು ದಿನಗಳ ಕಾಲ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ  ಐತಿಹಾಸಿಕ ಲಕ್ಕುಂಡಿ ಉತ್ಸವದ ಪೂರ್ವ ಸಿದ್ಧತೆಗಳನ್ನು ದಾನಚಿಂತಾಮಣಿ ಅತ್ತಿಮಬ್ಬೆ ಮುಖ್ಯ ವೇದಿಕೆಯ ಸ್ಥಳ ಪರಿಶೀಲನೆಯನ್ನು ಮಂಗಳವಾರ ಲಕ್ಕುಂಡಿಯಲ್ಲಿ ಲೋಕೊಪಯೋಗಿ ಇಲಾಖೆ ಸಚಿವರಾದ ಸಿ.ಸಿ.ಪಾಟೀಲ ಪರಿಶೀಲಿಸಿದರು.

Anganwadi Workers: ಮುಷ್ಕರದಲ್ಲಿ ಕಾರ್ಯಕರ್ತೆಯರು, ಬೀದಿಯಲ್ಲಿ ಮಕ್ಕಳು!

ನಂತರ ಮಾತನಾಡಿದ ಅವರು ಸ್ಥಳ ಪರಿಶೀಲನಾ ವೇಳೆ ಲಕ್ಕುಂಡಿ ಉತ್ಸವದಲ್ಲಿ ಲಕ್ಕುಂಡಿಯ ಇತಿಹಾಸ, ಪರಂಪರೆ, ಐತಿಹಾಸಿಕವಾಗಿಸುವದು ಈ ನಿಟ್ಟಿನಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಕಲಾವಿದರಿಗೆ, ಸಾರ್ವಜನಿಕರಿಗೆ ಗ್ರಾಮಸ್ಥರು, ಕಾರ್ಯಕ್ರಮ ಆಯೋಜಕರು ಸೂಕ್ತ ಸಹಕಾರ, ವ್ಯವಸ್ಥೆ ಕಲ್ಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಲಕ್ಕುಂಡಿ ಗ್ರಾಮ ಪಂಚಾಯತ ಅಧ್ಯಕ್ಷೆ ಲಲಿತಾ ಗದಗಿನ, ಉಪಾಧ್ಯಕ್ಷ ಸಿದ್ದು ಮುಳಗುಂದ, ಗ್ರಾಮ ಪಂಚಾಯತ ಸದಸ್ಯರು, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿ.ಪಂ. ಸಿ.ಇ.ಓ ಡಾ.ಸುಶೀಲಾ ಬಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡರ, ಡಿ.ಎಫ್.ಓ ದೀಪಿಕಾ ಬಾಜಪೇಯಿ, ಉಪ ವಿಭಾಗಾಧಿಕಾರಿ ಅನ್ನಪೂರ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು, ವಿವಿಧ ಸಮಿತಿಗಳ ಸದಸ್ಯರುಗಳು ಹಾಜರಿದ್ದರು.

Follow Us:
Download App:
  • android
  • ios