ಬೆಳಗಾವಿ [ಆ.29]: ಕೇಂದ್ರ ಸರ್ಕಾರದಿಂದ ಪ್ರವಾಹದ ಪರಿಹಾರವಾಗಿ ಒಂದು ರುಪಾಯಿ ಕೂಡ ಬಂದಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗರಂ ಆಗಿದ್ದಾರೆ. 

ಸರ್ಕಾರ ಸೇರಿದಂತೆ ಯಾವ ಜನಪ್ರತಿನಿಧಿಗಳಿಂದಲೂ ಜನರಿಗೆ ಸ್ಪಂದನೆ ವ್ಯಕ್ತವಾಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಾಹುಕಾರ್ ಕ್ಷೇತ್ರದಲ್ಲಿ ಪಾರುಪತ್ಯ ಸಾಧಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. 

ಬರಗಾಲ ಇದೆ ಎಂದು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಇದಕ್ಕೆ ಒಂದು ಸಾವಿರ ಬಿಡುಗಡೆಯಾಗಿದ್ದು, ಆ ಹಣದಲ್ಲಿ ನಿಮಗೆ ಹತ್ತು ಸಾವಿರ ಕೊಟ್ಟು ದಿಕ್ಕು ತಪ್ಪಿಸುತ್ತಿದ್ದಾರೆ. ಇದರ ಬಗ್ಗೆ ಪ್ರತಿಭಟನೆ ಮಾಡಿ ಬೆಂಗಳೂರಿನಲ್ಲಿ ಭಿಕ್ಷೆ ಎತ್ತುತ್ತೇನೆ ಎಂದು ಹೇಳಿದ್ದಾರೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ದೇವರ ಮೇಲೆ ಆಣೆ ನಾನು ಬೆಂಗಳೂರಿನಲ್ಲಿ ಭಿಕ್ಷೆ ಎತ್ತುತ್ತೇನೆ. ಕೇಂದ್ರ ಸರ್ಕಾರದ ಕಣ್ಣು ತೆರೆಸಲು ಬೆಂಗಳೂರಿಗೆ ಭಿಕ್ಷೆಗೆ ಹೋಗುತ್ತೇನೆ. ಸಂಘದಿಂದ ಸಾಲ ತುಂಬಿ ಅಂತಾ ಯಾರಾದರೂ ಕೇಳಿದರೆ ನೀವು ಸಾಲ ತುಂಬಬೇಡಿ ಅವರ ಹೆಸರು ಬರೆದಿಟ್ಟು ವಿಷ ತೆಗೆದುಕೊಳ್ಳುತ್ತೇವೆ ಎಂದು ಹೇಳಿ ಎಂದು ಗೋಕಾಕ್ ನೆರೆ ಪೀಡಿತ ಪ್ರದೇಶಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.