Flower Show 2023: ಆ.4ರಿಂದ 15ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಕುರಿತಾದ ಪರಿಕಲ್ಪನೆಯಡಿ ಪ್ರದರ್ಶನ ಏರ್ಪಡಿಸಲು ನಿರ್ಧರಿಸಲಾಗಿದೆ.
ಬೆಂಗಳೂರು (ಜು.13): ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಕುರಿತಾದ ಪರಿಕಲ್ಪನೆಯಡಿ ಪ್ರದರ್ಶನ ಏರ್ಪಡಿಸಲು ನಿರ್ಧರಿಸಲಾಗಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, 10 ಲಕ್ಷ ಜನಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ. ಕಳೆದ ಬಾರಿಯಂತೆ ಈ ಬಾರಿಯೂ ಮೈಸೂರು ಉದ್ಯಾನ ಕಲಾ ಸಂಘವನ್ನು ಹೊರಗಿಟ್ಟು, ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕೆ ಇಲಾಖೆ ಸುಮಾರು .2 ಕೋಟಿ ವೆಚ್ಚದಲ್ಲಿ ಪ್ರದರ್ಶನ ಆಯೋಜಿಸುತ್ತಿದೆ.
ಆ.4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ವಿಧಾನಸೌಧ ನಿರ್ಮಾಣ ಸೇರಿದಂತೆ ಕರ್ನಾಟಕಕ್ಕೆ ಸಾಕಷ್ಟುಕೊಡುಗೆ ನೀಡಿದ ಕೆಂಗಲ್ ಹನುಮಂತಯ್ಯ ಅವರ ಕುರಿತಾದ ಪರಿಕಲ್ಪನೆಯಡಿ ಪ್ರದರ್ಶನ ನಡೆಸಲು ತೋಟಗಾರಿಕೆ ಇಲಾಖೆ ಚರ್ಚೆ ನಡೆಸಿದೆ. ಜತೆಗೆ ಮೈಸೂರು ರಾಜ್ಯ ‘ಕರ್ನಾಟಕ’ ಎಂದು ನಾಮಕರಣವಾಗಿ 50 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಹೆಸರಿನಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ವರ್ಷವಿಡೀ ಕನ್ನಡ ನಾಡಿನ ಇತಿಹಾಸ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇದಕ್ಕೆ ಪೂರಕವಾಗಿ ಫಲಪುಷ್ಪ ಪ್ರದರ್ಶನದಲ್ಲೂ ಛಾಪು ಮೂಡಿಸಲಿದೆ.
ವರ್ಗಾವಣೆ ದಂಧೆ: ಸ್ಪೀಕರ್‌ಗೆ ‘ದಾಖಲೆ’ ಸಲ್ಲಿಸಿದ ಎಚ್‌ಡಿಕೆ
ಪ್ರದರ್ಶನದಲ್ಲಿ ಬಗೆ ಬಗೆಯ ಗುಲಾಬಿ ಹೂಗಳು, ಆಂಥೋರಿಯಂ ಹೂಗಳು, ಜರ್ಬೇರಾ, ಆರ್ಕಿಡ್, ನಂದಿ ಗಿರಿಧಾಮದ ಇಂಪೇಷನ್ಸ್ ಹೂಗಳು, ರೆಡ್‌ಹಾಟ್ ಪೋಕರ್, ಆಲ್‌ಸ್ಟೊ್ರೕಮೇರಿಯನ್ ಲಿಲ್ಲಿ, ಪೂಷಿಯಾ, ಅಗಪಾಂಥಸ್, ಸೈಕ್ಲೋಮನ್, ಕ್ಯಾಲಾಲಿಲ್ಲಿ, ಸುಗಂಧರಾಜ ಸೇರಿದಂತೆ ಶೀತ ವಲಯದ ಹೂಗಳು ಕಣ್ಮನ ಸೆಳೆಯಲಿವೆ. ಇಕೆಬಾನ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಗಳ ಪ್ರದರ್ಶನವೂ ನಡೆಯಲಿದೆ.
ಆ.4ರಿಂದ ವಿವಿಧ ಸ್ಪರ್ಧೆ ತರಬೇತಿ ಆಯೋಜನೆ: ಲಾಲ್‌ಬಾಗ್‌ನಲ್ಲಿ ಆ.4ರಿಂದ 15ರವರೆಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯಲಿರುವ ಫಲಪುಷ್ಪ ಪ್ರದರ್ಶನದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇಕೆಬಾನ್, ಥಾಯ್ ಆರ್ಚ್, ಜಾನೂರ್, ತರಕಾರಿ ಕೆತ್ತನೆ ಕಲೆಗಳಿಗೆ ಸಂಬಂಧಿಸಿದ ತರಬೇತಿ ಕಾರ್ಯಕ್ರಮ ಆ.5ರಿಂದ 6ರವರೆಗೆ ತೋಟಗಾರಿಕೆ ಮಾಹಿತಿ ಕೇಂದ್ರದಲ್ಲಿ ನಡೆಯಲಿದೆ. ಜುಲೈ 15ರಿಂದ 24ರೊಳಗೆ ತೋಟಗಾರಿಕೆ ಜಂಟಿ ನಿರ್ದೇಶಕರಲ್ಲಿ (99162 10474) ನೋಂದಾಯಿಸಿಕೊಳ್ಳಬಹುದು.
ಬಿಬಿಎಂಪಿ ಸಿಬ್ಬಂದಿಯ ವರ್ಗಕ್ಕೂ ಮುನ್ನ ನನಗೆ ತಿಳಿಸಿ: ಡಿಕೆಶಿ
ವಿವಿಧ ಉದ್ಯಾನವನಗಳು ಮತ್ತು ತೋಟಗಳ ಸ್ಪರ್ಧೆಗೆ ಜುಲೈ 20ರಿಂದ 27ರವರೆಗೆ ನೋಂದಾಯಿಸಿ ಕೊಳ್ಳಬಹುದು. ಮೊಬೈಲ್: 99802 76242 ಸಂಪರ್ಕಿಸಬಹುದು. ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯು ಆ.9ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ತೋಟಗಾರಿಕೆ ಮಾಹಿತಿ ಕೇಂದ್ರದಲ್ಲಿ ನಡೆಯಲಿದೆ. ತೋಟಗಾರಿಕೆ, ಕೃಷಿ ಉತ್ಪನ್ನಗಳು ಮತ್ತು ಇತರೇ ಪರಿಸರ ಸ್ನೇಹಿ ವಸ್ತುಗಳನ್ನು ಪ್ರದರ್ಶಿಸುವ ಮಳಿಗೆಗಳನ್ನು ಆ.4ರಿಂದ 15ರವರೆಗೆ ತೆರೆಯಬಹುದಾಗಿದೆ.