Asianet Suvarna News Asianet Suvarna News

ಕುಸಿಯುತ್ತಿರುವ ದತ್ತಪೀಠ, ಮುಳ್ಳಯ್ಯನ ಗಿರಿ : ವಾಹನ ಸಂಚಾರಕ್ಕೆ ನಿರ್ಬಂಧ

ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಿಂದ ನಿರ್ಮಾಣವಾಗಿದ್ದು ಇದರಿಂದ ಹಲವೆಡೆ ಭೂ ಕುಸಿತ ಉಂಟಾಗಿದೆ. ಇದೀಗ ಚಿಕ್ಕಮಗಳೂರು ಮುಳ್ಳಯ್ಯನಗಿರಿಯಲ್ಲಿ ಭು ಕುಸಿತ ಉಂಟಾಗಿದ್ದು ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. 

Landslide in Mullayanagiri Datta Peeta
Author
Bengaluru, First Published Aug 15, 2019, 12:50 PM IST
  • Facebook
  • Twitter
  • Whatsapp

ಚಿಕ್ಕಮಗಳೂರು (ಆ.15) : ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಇದರಿಂದ ಎಲ್ಲೆಡೆ  ತೀವ್ರ ಪ್ರಮಾಣದಲ್ಲಿ ಹಾನಿಯುಂಟಾಗಿದೆ.  ಚಿಕ್ಕಮಗಳೂರಿನ ದತ್ತ ಪೀಠ ಹಾಗೂ ಮುಳ್ಳಯ್ಯನ ಗಿರಿಯ ಗುಡ್ಡ ಕುಸಿತವಾಗಿದ್ದು, ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಆಗಸ್ಟ್ 30ರ ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್  ಆದೇಶ ನೀಡಿದ್ದಾರೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭಾರೀ ಮಳೆ ಸುರಿದ ಪರಿಣಾಮ ಗುಡ್ಡ ಕುಸಿತ, ಭೂ ಕುಸಿತವು ಮಲೆನಾಡಿನ ಭಾಗದಲ್ಲಿ ಹೆಚ್ಚಗಿದೆ. ಗಿರಿ ಪ್ರದೇಶಗಳಲ್ಲಿ ಕುಸಿತವಾಗುತ್ತಿದ್ದು, ಮುಳ್ಳಯ್ಯನಗಿರಿ, ದತ್ತಪೀಠ, ಹಿನ್ನಮ್ಮನಹಳ್ಳ ರಸ್ತೆಯಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿದೆ. 

ದತ್ತ ಪೀಠ ಹಾಗೂ ಮುಳ್ಳಯ್ಯನ ಗಿರಿಗೂ ಪ್ರವಾಸಿಗರು ತೆರಳದಂತೆ ನಿರ್ವಂಧ ವಿಧಿಸಲಾಗಿದೆ.

Follow Us:
Download App:
  • android
  • ios