Asianet Suvarna News Asianet Suvarna News

ಬೆಳಗಾವಿ ರಾಜಕಾರಣ ಬದಲು ಮಾಡಿ ತೋರಿಸ್ತೇನೆ: ಲಕ್ಷ್ಮೀ ಹೆಬ್ಬಾಳಕರ

ಇವತ್ತು ಹಾಲು ಕುಡಿದ ಮಕ್ಕಳು ಬದುಕುತ್ತಿಲ್ಲ| ಇನ್ನು ಇವರು ವಿಷ ಕುಡಿದವರು ಇವರು ಬದುಕುತ್ತಾರಾ?| ಜನ್ಮಕೊಟ್ಟ ತಾಯಿ ಒಬ್ಬರಿದ್ರೆ  ಜಗತನ್ನು ತೋರಿಸಿದ ತಾಯಿ ನಮ್ಮ ಕಾಂಗ್ರೆಸ್ ಪಕ್ಷವಾಗಿದೆ| ಅಂತಹ ಪಕ್ಷಕ್ಕೆ ಮಹೇಶ್ ಕುಮಟಳ್ಳಿ ದ್ರೋಹ ಮಾಡಿ ಹೋಗಿದ್ದಾರೆ ಎಂದ ಲಕ್ಷ್ಮೀ ಹೆಬ್ಬಾಳಕರ|

Laxmi Hebbalkar Said I will Change Belagavi Politics
Author
Bengaluru, First Published Nov 24, 2019, 10:23 AM IST

ಅಥಣಿ(24): ಅನರ್ಹ ಶಾಸಕ ಮಹೇಶ ಕುಮಟಳ್ಳಿ ಮಳ್ಳ ಮಳ್ಳ ಮಂಚಕ್ಕೆ ಎಷ್ಟು ಕಾಲು ಅಂದ್ರೆ ಮೂರು ಮತ್ತೊಂದು ಅನ್ನೋವಂತಹ ಮಳ್ಳರಾಗಿದ್ದಾರೆ. 2013 ಮತ್ತು 2018ರ ಚುನಾವಣೆಗೆ ಟಿಕೆಟ್ ಕೊಡಿಸಲು ನಾನೂ ಸಹಾಯ ಮಾಡಿದ್ದೆ, ಒಳ್ಳೆಯವರು, ಸುಸಂಸ್ಕೃತರು ಇದಾರೆ ಅಂದಕೊಂಡಿದ್ವಿ ಆದ್ರೆ ಅವರು ದ್ರೋಹ ಮಾಡಿದ್ದಾರೆ. ಪಕ್ಷವೆನ್ನುವ ಹೆತ್ತ ತಾಯಿಗೆ ದ್ರೋಹ ಮಾಡಿದ್ದಾರೆ ಎಂದು ಶಾಸಕಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಕುಮಟಳ್ಳಿ ವಿರುದ್ಧ ಗುಡುಗಿದ್ದಾರೆ. 

ಶನಿವಾರ ಅಥಣಿ ಕ್ಷೇತ್ರದ ಕಕಮರಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಮಾತನಾಡಿರುವ ಹೆಬ್ಬಾಳಕರ ಅವರು, ಇವತ್ತು ಹಾಲು ಕುಡಿದ ಮಕ್ಕಳು ಬದುಕುತ್ತಿಲ್ಲ. ಇನ್ನು ಇವರು ವಿಷ ಕುಡಿದವರು ಇವರು ಬದುಕುತ್ತಾರಾ? ಜನ್ಮಕೊಟ್ಟ ತಾಯಿ ಒಬ್ಬರಿದ್ರೆ  ಜಗತನ್ನು ತೋರಿಸಿದ ತಾಯಿ ನಮ್ಮ ಕಾಂಗ್ರೆಸ್ ಪಕ್ಷವಾಗಿದೆ. ಅಂತಹ ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದಾರೆ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಅನುದಾನ ಕೊಡದಿದ್ದಕ್ಕೆ ಇವರೆಲ್ಲ ಪಕ್ಷ ಬಿಟ್ಟು ಹೋಗಿದ್ದಾರಂತೆ. ಲಕ್ಷ್ಮೀ ಹೆಬ್ಬಾಳಕರಗೆ ಕೊಟ್ಟಷ್ಟು ಅನುದಾನ ನಮಗೆ ಕೊಡಲಿಲ್ಲ ಅಂತಾ ಹೇಳುತ್ತಾರೆ. ಅನುದಾನ ಕೇಳೋಕೆ ಆಗದೇ ಇವರೇನು ಬಾಯಲ್ಲಿ ಕಡಬು ಇಟ್ಟುಕೊಂಡಿದ್ರಾ?ಮಂತ್ರಿಗಳ‌ ಕಾಲು, ಕೈ ಹಿಡಿದು ಕೇಳಿ ಅನುದಾನ ಪಡೆಯಬಹುದಿತ್ತು. ನಾನು ಹೆಣ್ಣು ಮಗಳಾಗಿ 12 ನೂರು ಕೋಟಿ ಅನುದಾನ ತಂದಿದ್ದೇನೆ. ಅಂದ್ರೆ ನೀವು ಗಂಡಸರಾಗಿ‌ ತರೋಕೆ ಆಗಲಿಲ್ವಾ? ಎಂದು ಪ್ರಶ್ನಿಸಿದ್ದಾರೆ. 

ಇನ್ನೊಬ್ಬರು ಊಟ ಮಾಡಿದ್ದಾರೆ ಅಂತಾ ನಾವು ಉಪವಾಸ ಇರೋದು ತಪ್ಪು. ಇನ್ನೊಬ್ಬರ ದುಡಿದು ಊಟ ಮಾಡಿದ್ದಾರೆ ಅಂದ್ರೆ ನಾವು ದುಡಿದು ಊಟ ಮಾಡಬೇಕೆನ್ನುವುದು ಗಂಡಸ್ಥನ ಇರಬೇಕು. ಕೊಟ್ಟ ಕುದುರೆ ಏರಲು ಆಗದವನು ಇನ್ನೊಂದು ಕುದುರೆ ಏರುತ್ತೇನೆ ಅನ್ನೋನು ವೀರನೂ ಅಲ್ಲ ಶೂರನೂ ಅಲ್ಲ ಡ್ಯಾಷ್ ಡ್ಯಾಷ್... ಕೂಡ ಅಲ್ಲ.... ಎಂದು ಕುಮಟಳ್ಳಿ ವಿರುದ್ಧ ತೀವ್ರವಾಗಿ ತೆಗಳಿದ್ದಾರೆ. 

ಕುಮಟಳ್ಳಿ ಮಳ್ಳ ನಂಗ ಸೋಗು ಹಾಕುವುದು ಕೈ ಮುಗಿಯೋದು ಮಾಡತ್ತಾರೆ. ಆದ್ರೆ ಇವರದು ಅತೀ ವಿನಯಂ ಚೋರ್ ಲಕ್ಷಣಂ ತರ ಆಗಿದೆ. ನನ್ನ ಮಾತು ಬಿರುಸು, ಗುಂಡು ಹೊಡೆದಂಗೆ ಇರಬಹುದು ಆದ್ರೆ ಯಾವತ್ತಿಗೂ ಸತ್ಯಕ್ಕೆ‌ ತಲೆಬಾಗುವೆ. ನಾನು ಅಥಣಿ ಜನರಿಗೆ ಏನೂ ಮಾಡಲು ಆಗದಿದ್ರು ಬೆಳಗಾವಿ ರಾಜಕಾರಣ ಬದಲು ಮಾಡಿ ತೋರಿಸುತ್ತೇನೆ ಎಂದು ಹೇಳಿದ್ದಾರೆ. 

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.
 

Follow Us:
Download App:
  • android
  • ios