ಸ್ವಾಮೀಜಿ ಮುಟ್ಟಿದರೆ ಹುಷಾರ್: ಸಿದ್ದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅಶೋಕ್!
ವಾಲ್ಮೀಕಿ ಹಗರಣ, ದಲಿತರ ಹಣ ದುರ್ಬಳಕೆಯಿಂದ ಹಿಂದುಳಿದ ವರ್ಗದವರು, ದಲಿತರ ಶಕ್ತಿಯನ್ನು ಕಳೆದುಕೊಂಡಿರುವ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ನಿಂತಿದ್ದಾರೆ. ಮೈಸೂರಿನಲ್ಲಿ 101 ಕುರುಬರ ಮನೆಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್ ಜಾರಿ ಮಾಡಿದ್ದರೂ ರಕ್ಷಣೆಗೆ ನಿಂತಿಲ್ಲವೆಂದು ದೂರಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್
ಮಂಡ್ಯ(ಡಿ.03): ಸಿದ್ದರಾಮಯ್ಯ ಈಗ ಅಹಿಂದ ನಾಯಕರಲ್ಲ. ಹಿಂದುಳಿದವರು ಮತ್ತು ದಲಿತರ ಅವರು ಕೇವಲ ಅಲ್ಪಸಂಖ್ಯಾತರ ನಾಯಕರಾಗಷ್ಟೇ ಉಳಿದು ಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಾಲ್ಮೀಕಿ ಹಗರಣ, ದಲಿತರ ಹಣ ದುರ್ಬಳಕೆಯಿಂದ ಹಿಂದುಳಿದ ವರ್ಗದವರು, ದಲಿತರ ಶಕ್ತಿಯನ್ನು ಕಳೆದುಕೊಂಡಿರುವ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ನಿಂತಿದ್ದಾರೆ. ಮೈಸೂರಿನಲ್ಲಿ 101 ಕುರುಬರ ಮನೆಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್ ಜಾರಿ ಮಾಡಿದ್ದರೂ ರಕ್ಷಣೆಗೆ ನಿಂತಿಲ್ಲವೆಂದು ದೂರಿದರು.
ಮಂಡ್ಯ: ಮತ್ತೆ ಸನ್ಯಾಸ ದೀಕ್ಷೆಯತ್ತ ಅಪರ ಜಿಲ್ಲಾಧಿಕಾರಿ ನಾಗರಾಜು
ರೈತರ ಜಮೀನನ್ನು ಅಕ್ರಮವಾಗಿ ವಕ್ಫ್ ಕಬಳಿಕೆ ಮಾಡುತ್ತಿರುವ ಬಗ್ಗೆ ವಿಧಾನ ಮಂಡಲದ ಅಧಿವೇಶನದಲ್ಲಿ ನಿಲುವಳಿ ಸೂಚನೆಯಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ಒತ್ತಡ ಹಾಕಲಾಗುವುದು. ಕಾಂಗ್ರೆಸ್ ಸರ್ಕಾರ ಮುಸ್ಲಿಮರ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಸಮುದಾಯದ ಕಣ್ಣಿಗೆ ಬೆಣ್ಣೆ ಹಿಂದೂ ಸಮುದಾಯದ ಕಣ್ಣಿಗೆ ಸುಣ್ಣ ಹಚ್ಚುವ ಮಾದರಿಯಲ್ಲಿ ಆಡಳಿತ ನಡೆಸುತ್ತಿದೆ. ಮುಸ್ಲಿಮರಿಗೆ ಪೂರ್ತಿ ಅಧಿಕಾರ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಂಧ್ರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ವಕ್ಫ್ ಮಂಡಳಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸದನದಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರಲ್ಲದೆ, ವಕ್ಫ್ ಮಂಡಳಿ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನೂ ಒತ್ತಾಯಿಸಲಾಗುವುದು ಎಂದು ಹೇಳಿದರು.
ಸಾವಿನ ಭಾಗ್ಯ:
ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚಾಗಿದೆ. ಕಾಂಗ್ರೆಸ್ ಸರ್ಕಾರ ಸಾವಿನ ಭಾಗ್ಯ ನೀಡುತ್ತಿದೆ. 111 ಶಿಶುಗಳ ಮಾರಣ ಹೋಮ ನಡೆದಿದೆ. ಒಂದು ಕಡೆ ಸರ್ಕಾರಿ ಆಸತ್ರೆಗಳಲ್ಲಿ ಔಷಧಗಳ ಕೊರತೆಯ ಜೊತೆಗೆ ಕಳಪೆ ಔಷಧಗಳು ಸರ್ಕಾರಿ ಆಸ್ಪತ್ರೆಗಳಿಗೆ ಸರ ಬರಾಜಾಗುತ್ತಿವೆ. ಇದು ಮೆಡಿಕಲ್ ಮಾಫಿಯಾವಾಗಿದೆ. ಈ ಬಗ್ಗೆಯೂ ಸದನದಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ನಾನು ಅರಣ್ಯ ಸಚಿವನೇ ಆಗಿಲ್ಲ:
ಶ್ರೀ ಬಾಲ ಗಂಗಾಧರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿದವರು ಯಾರು ಎನ್ನುವುದನ್ನು ಮಠದವರು ಹೇಳಬೇಕು, ನಾನೇನಾದರೂ ಅವರ ವಿರುದ್ದ ಎಫ್‌ಐಆರ್‌ದಾಖಲಿಸಿದ್ದೇನೆ ಎಂದು ಹೇಳಿಕೆ ನೀಡಿದರೆ ಇಂದೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಚಲುವರಾಯಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು.
ನನ್ನ ರಾಜಕೀಯ ಜೀವನದಲ್ಲಿ ನಾನು ಅರಣ್ಯ ಸಚಿವನಾಗಿಯೇ ಇಲ್ಲ. ಅಂದು ಚೆನ್ನಿ ಗಪ್ಪ ಅರಣ್ಯ ಸಚಿವರಾಗಿದ್ದವರು. ಅವರನ್ನು ಕೇಳಲಿ. ಅದು ಬಿಟ್ಟು ನನ್ನ ಮೇಲೆ ಹೇಳಿದರೆ ಹೇಗೆ ಎಂದು ಪ್ರಶ್ನಿಸಿದರು.
ಮೈಸೂರಿನ ಮುಡಾ ಪ್ರಕರಣ ಮುಚ್ಚಿ ಹಾಕಲು ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದಾರೆ. ಈಗ ಇ.ಡಿ. ತನಿಖೆ ಶುರು ಮಾಡಿದೆ. ಸಿಬಿಐ ಕೂಡ ತನಿಖೆಗೆ ಮುಂದಾಗುವ ಸಾಧ್ಯ ತೆಗಳಿವೆ. ಸಿದ್ದರಾಮಯ್ಯನವರಿಗೆ ಭಯ ಕಾಡುತ್ತಿದ್ದು ಅದಕ್ಕಾಗಿ ಹಾಸನದಲ್ಲಿ ಮುಡಾ ಉತ್ಸವ ಮಾಡುತ್ತಿದ್ದಾರೆ ಎಂದು ಜರಿದರು.
ರೈತ ವಿರೋಧಿ ಸರ್ಕಾರ:
ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ರಾಜ್ಯ ದಲ್ಲಿ ಆಡಳಿತ ನಡೆಸುತ್ತಿರುವುದು ರೈತ ವಿರೋಧಿ ಸರ್ಕಾರ. ಕೃಷಿ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ ರೈತರಿಗೆ 6 ಸಾವಿರ ರು. ರಾಜ್ಯ ಸರ್ಕಾರ 4 ಸಾವಿರ ರು.ನೀಡುತ್ತಿದ್ದೆವು. ಆದರೆ ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ 4 ಸಾವಿರ ರು. ಹಣ ನೀಡುವುದನ್ನು ನಿಲ್ಲಿಸಿದೆ ಇದು ರೈತ ವಿರೋಧಿಯಲ್ಲವೇ ಎಂದು ಪ್ರಶ್ನಿಸಿದರು.
ಯೋಗೇಶ್ವರ್‌ಗೆ ತಾಕತ್ತಿದ್ದರೆ ಜೆಡಿಎಸ್ ಶಾಸಕರನ್ನು ಸೆಳೆಯಲಿ: ಪುಟ್ಟರಾಜು ಸವಾಲು
ಹಾಲು ಉತ್ಪಾದಕರಿಗೆ 9 ತಿಂಗಳ ಪ್ರೋತ್ಸಾಹ ಧನ ನೀಡಿಲ್ಲ, ನೀರಾವರಿ ಯೋಜನೆಗೆ 1 ರು. ನೀಡಿಲ್ಲ. ರೈತರು ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದಾರೆ. ಹೇಳೋರಿಲ್ಲ, ಕೇಳೋರಿಲ್ಲ ಎಂಬಂತಾಗಿದೆ. ಅಲ್ಪಸಂಖ್ಯಾತರ ತುಷ್ಟೇ ಕರಣ ಪರಾಕಾಷ್ಠೆಯಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರು., ದಲಿತರ 25 ಸಾವಿರ ಕೋಟಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಾರೆ. ಒಳ ಮೀಸಲಾತಿ ನೀಡಿಲ್ಲ. ಎಸ್‌ಸಿಪಿ, ಟಿಎ ಸ್‌ಪಿ ಅನುದಾನ ನೀಡಿಲ್ಲ. ಮಕ್ಕಳಿಗೆ ಪ್ರತಿ ವರ್ಷ 2 ಜೊತೆ ಸಮವಸ್ತ್ರ ನೀಡಲಾಗುತ್ತಿತ್ತು. ಈಗ ಕೇವಲ ಒಂದು ಸಮವಸ್ತ್ರ ನೀಡುತ್ತಿದೆ. ವೈಧ್ಯಕೀಯ ವಿದ್ಯಾರ್ಥಿಗಳ ಶುಲ್ಕ ಶೇ. 10ರಷ್ಟು ಹೆಚ್ಚಳ ಮಾಡಿದ್ದಾರೆ. ವಿದ್ಯಾರ್ಥಿ ವೇತನ ಕೊಡುತ್ತಿಲ್ಲ. ಇದೊಂದು ಎಟಿಎಂ ಸರ್ಕಾರವಾಗಿದೆ ಎಂದು ಆರೋಪಿಸಿದರು. ಮುಖಂಡರಾದ ಎಸ್. ಸಚ್ಚಿದಾನಂದ, ಎಚ್.ಆರ್. ಅಶೋಕ್ ಕುಮಾರ್ ಸೇರಿದಂತೆ ಇತರರು ಇದ್ದರು.
ಸ್ವಾಮೀಜಿ ಮುಟ್ಟಿದರೆ ಹುಷಾರ್
ಶ್ರೀಕುಮಾರ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದೇ ನೆಪವೊಡ್ಡಿ ಸ್ವಾಮೀಜಿಯವರನ್ನು ಮುಟ್ಟಿದರೆ ಹುಷಾರ್ ಎಂದು ಎಚ್ಚರಿಕೆ ನೀಡಿದ ಅವರು, ವಕ್ಫ್ ರೈತರ ಜಮೀನುಗಳನ್ನು ನುಂಗುತ್ತಿರುವುದನ್ನು ಕಂಡು ನೋವಿನಿಂದ ಆ ಮಾತನ್ನು ಹೇಳಿದ್ದಾರೆ. ವಿಧಾನ ಸೌಧದ ಮೊಗಸಾಲೆಯಲ್ಲೇ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದರು. ಅವರಿಗೆ ಬಿರಿಯಾನಿ ಹಾಕಿ ಕಳುಹಿಸಿದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಕರಿಯ ಎಂದು ನಿಂದಿಸಿದರು. ಆದರೂ ಕ್ರಮ ಕೈಗೊಂಡಿಲ್ಲ. ಮುಸಲ್ಮಾನರು ಏನು ಬೇಕಾದರೂ ಹೇಳಬಹುದು, ಕೂಗಬಹುದು. ಹಿಂದೂಗಳು ಬಾಯಿಬಿಟ್ಟರೆ ಮಾತ್ರ ಕೇಸ್. ಇದು ಕಾಂಗ್ರೆಸ್ ಸರ್ಕಾರದ ನೀತಿ ಎಂದು ದೂರಿದರು.