ದಾವಣಗೆರೆ ತಾಲೂಕಿನ ತೋಳಹುಣಸೆ ಸಮೀಪದ ಶಿವಗಂಗೋತ್ರಿಯ ದಾವಣಗೆರೆ ವಿವಿ ಕ್ಯಾಂಪಸ್‌ನಲ್ಲಿ ನಡೆದ ಇತ್ತೀಚೆಗೆ ಅಂತಿಮ ವರ್ಷದ ಬಿಪಿಇಡಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಪ್ರಸಂಗ ನಡೆದಿದೆ. 

ದಾವಣಗೆರೆ(ಸೆ.07): ದಾವಣಗೆರೆ ವಿವಿ ಕ್ಯಾಂಪಸ್‌ನಲ್ಲಿ ಅತಿಥಿ ಉಪನ್ಯಾಸಕರೊಬ್ಬರು ತಮ್ಮ ಬೆನ್ನ ಮೇಲೆ ವಿದ್ಯಾರ್ಥಿನಿ ಒಬ್ಬರನ್ನು ಹೊತ್ತು ಡ್ಯಾನ್ಸ್ ಮಾಡುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಟೀಕೆಗೆ ಗುರಿಯಾಗಿದೆ. 

ದಾವಣಗೆರೆ ತಾಲೂಕಿನ ತೋಳಹುಣಸೆ ಸಮೀಪದ ಶಿವಗಂಗೋತ್ರಿಯ ದಾವಣಗೆರೆ ವಿವಿ ಕ್ಯಾಂಪಸ್‌ನಲ್ಲಿ ನಡೆದ ಇತ್ತೀಚೆಗೆ ಅಂತಿಮ ವರ್ಷದ ಬಿಪಿಇಡಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಪ್ರಸಂಗ ನಡೆದಿದೆ. 

ಗಣೇಶೋತ್ಸವಕ್ಕೆ ಪೊಲೀಸರೇ ವಿಘ್ನ; ಇಫ್ತಿಯಾರ್ ಕೂಟಕ್ಕಿಲ್ಲದ ನಿಯಮ ಗಣಪತಿ ಪ್ರಸಾದಕ್ಕೇಕೆ? ರಾಜನಹಳ್ಳಿ ಶಿವಕುಮಾರ ಪ್ರಶ್ನೆ

ಗುರು-ಶಿಷ್ಯಯ ನೃತ್ಯದ ಅಸಭ್ಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ದಾವಣಗೆರೆ ವಿವಿ ಅತಿಥಿ ಬೋಧಕನಿಗೆ ನೋಟಿಸ್ ಜಾರಿ ಮಾಡಿದೆ. ಅತಿಥಿ ಬೋಧಕ ಸಹ ಕ್ಷಮಾಪಣಾ ಪತ್ರ ಬರೆದುಕೊಟ್ಟಿದ್ದು, ಮುಂದೆ ಹೀಗಾಗದಂತೆ ಜಾಗ್ರತೆ ವಹಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.