ಮಂಡ್ಯ(ಫೆ.11): ಜೆಡಿಎಸ್‌ ಶಾಸಕನಾಗಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದರು ನೀಡಿದ ಕಿರುಕುಳದಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಎಂದು ಪೌರಾಡಳಿತ ಮತ್ತು ತೋಟಗಾರಿಕೆ ಸಚಿವ ಕೆ.ಸಿ. ನಾರಾಯಣಗೌಡ ಹೇಳಿದ್ದಾರೆ.

ಮದ್ದೂರು ಮಾನಸೋತ್ಸವ ಸಮಾರಂಭದ ನಂತರ ಅಭಿನಂದನೆ ಸ್ವೀಕರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಶಾಸಕನಾಗಿದ್ದ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮತ್ತವರ ಕುಟುಂಬದ ಕಿರುಕುಳದಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಮುಖ್ಯಮಂತ್ರಿ ಯಡಿಯೂರಪ್ಪ ನನಗೆ ಬಿಜೆಪಿ ಟಿಕೆಟ್‌ ನೀಡಿ, ಮುಖ್ಯಮಂತ್ರಿಗಳು ಮತ್ತು ಎಲ್ಲಾ ಸಚಿವರು ನನ್ನನ್ನು ಗೆಲ್ಲಿಸಿಕೊಂಡು ಸಚಿವ ಸ್ಥಾನ ನೀಡಿದ್ದಾರೆ. ಹೀಗಾಗಿ ಜಿಲ್ಲೆಯ ಅಭಿವೃದ್ಧಿ ಹಾಗೂ ಬಿಜೆಪಿ ಬಲವರ್ಧನೆಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.

ಸ್ಥಗಿತಗೊಂಡ ಸಕ್ಕರೆ ಕಾರ್ಖಾನೆಗಳಿಗೆ ಮರುಜೀವ!

ನಾನು ಸಚಿವನಾದ ನಂತರ ಜಿಲ್ಲೆ ಎರಡು ಸಕ್ಕರೆ ಕಾರ್ಖಾನೆಗಳ ಪುನಶ್ಚೇತನ ಮತ್ತು ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ನನ್ನದೇ ಆದ ಕನಸನ್ನು ಹೊಂದಿದ್ದೇನೆ. ಮುಂದಿನ ದಿನಗಳಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಶಾಸಕರೆಂಬ ಭೇದ-ಭಾವವಿಲ್ಲದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯದಲ್ಲಿ ತೊಡಗುತ್ತೇನೆ ಎಂದು ಭರವಸೆ ನೀಡಿದರು.

ಫೆಬ್ರವರಿ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ