ರಾಮನಗರ(ಮೇ.09):  ಮಲಗಿದ್ದ ಮಗುವನ್ನು ಚಿರತೆಯೊಂದು ಹೊತ್ತುಯ್ದು ತಿಂದು ಸಾಯಿಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯದಲ್ಲಿ ಗ್ರಾಮದಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. ಈ ಘಟನೆಯಿಂದ ಗ್ರಾಮಸ್ಥರು ಮನೆಬಿಟ್ಟು ಹೊರಗಡೆ ಬರುವುದಕ್ಕೂ ಹೆದರುತ್ತಿದ್ದಾರೆ.  

ಬೇಸಿಗೆ ಕಾಲವಾದ ಕಾರಣ ಸೆಕೆ, ಧಗೆ ಹೆಚ್ಚಾಗಿದ್ದರಿಂದ ಬಾಗಿಲನ್ನ ತೆಗೆದು ಮಲಗಿದ್ದರು. ಈ ವೇಳೆ ಆಗಮಿಸಿದ ಚಿರತೆ ಮೂರು ವರ್ಷದ ಗಂಡು ಮಗುವನ್ನ ಹೊತ್ತುಯ್ದು ದೂರದ ಅರಣ್ಯ ಪ್ರದೇಶದಲ್ಲಿ ಅರ್ಧ ತಿಂದು ಬಿಟ್ಟು ಹೋಗಿದೆ. 

ಕಲಬುರಗಿ: ಕೊರೋನಾ ಆತಂಕದ ಮಧ್ಯೆ ಚಿರತೆ ಪ್ರತ್ಯಕ್ಷ, ಬೆಚ್ಚಿಬಿದ್ದ ಗ್ರಾಮಸ್ಥರು..!

ವಿಷಯ ತಿಳಿದ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಅರಣ್ಯದಲ್ಲಿ ಪರಿಶೀಲಿಸಿದಾಗ ಮಗುವಿನ ಶವ ಸಿಕ್ಕಿದೆ. ಈ ವೇಳೆ ಮಗುವಿನ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.