Asianet Suvarna News Asianet Suvarna News

ಮೈಸೂರು: ಚಿರತೆ ದಾಳಿಗೆ ಯುವತಿ ಸಾವು, ಒಂದೇ ತಿಂಗಳಲ್ಲಿ ಇಬ್ಬರು ಬಲಿ, ಹೆಚ್ಚಿದ ಜನಾಕ್ರೋಶ

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ ಎಂಬ ಯುವತಿಯು ಚಿರತೆ ದಾಳಿಗೆ ತುತ್ತಾಗಿದ್ದು, ಹಿತ್ತಲಿಗೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ. 

Leopard Killed 22 Year Old Girl T. Narasipura in Mysuru grg
Author
First Published Dec 2, 2022, 6:46 AM IST

ಮೈಸೂರು(ಡಿ.02):  ಒಂದೇ ತಿಂಗಳ ಅಂತರದಲ್ಲಿ ಒಂದೇ ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಹೌದು, ಚಿರತೆ ಉಪಟಳದಿಂದ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಜನ ಭಯಭೀತಿಗೊಂಡಿದ್ದಾರೆ. ಗುರುವಾರ ರಾತ್ರಿ ಮನೆ ಮುಂದೆ ಕುಳಿತಿದ್ದ ಯುವತಿ ಮೇಲೆ‌ ದಾಳಿ ಮಾಡಿದ ಚಿರತೆ ಆಕೆಯನ್ನು ಕೊಂದು ಬಿಸಾಕಿದೆ. ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಟಿ.ನರಸೀಪುರ ತಾಲೂಕಿನ ಎಂ.ಎಲ್.ಹುಂಡಿಯ ಯುವಕನೊಬ್ಬ ಬಲಿಯಾದ. ಅದರ ಕರಾಳ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ (22) ಎಂಬ ಯುವತಿಯು ಚಿರತೆ ದಾಳಿಗೆ ತುತ್ತಾಗಿದ್ದು, ಹಿತ್ತಲಿಗೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ. ಯುವತಿ ಮೇಲೆ ದಾಳಿ ಮಾಡಿದ ಚಿರತೆ ಆಕೆಯ ಕುತ್ತಿಗೆ ಹಾಗೂ ಮುಖದ ಭಾಗಕ್ಕೆ ತೀರ್ವ ಗಾಯಗೊಳಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಚಿರತೆ ಹಿಡಿಯುವಂತೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದರೂ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈಗ ಮತ್ತೊಂದು ಬಡ ಜೀವ ಜೀವ ಕಳೆದುಕೊಂಡಂತಾಗಿದೆ.

Mysuru : ' ಕಾಮನ್‌ ಪುಟಕ್ಕೆ ನಾನು ಕೆ.ಆರ್‌. ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ'

ಸಾರ್ವಜನಿಕರ ಆಕ್ರೋಶ

ಕಳೆದ ತಿಂಗಳಷ್ಟೇ ಚಿರತೆ ದಾಳಿಯಿಂದ ಯುವಕ ಸಾವನ್ನಪ್ಪಿದ್ದು, ಈಗ ಯುವತಿಯ ಬಲಿ ಪಡೆದಿದೆ. ಚಿರತೆ ದಾಳಿಯಿಂದ ನಿರಂತರ ದಾಳಿ ನಡೆಯುತ್ತಿದ್ದರೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ವಿಫಲತೆ ಕಂಡಿದೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶ್ವಿನ್‌ಕುಮಾರ್ ದುರ್ಘಟನೆಗೆ ಸಂತಾಪ ಸೂಚಿಸಿದರು. ಸ್ಥಳದಲ್ಲೇ ಪ್ರತಿಭಟನಾ ನಿರತ  ಜೊತೆ ಧರಣಿಗೆ ಕೂತ ಶಾಸಕರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಬೇಕು ಎಂದು ಪಟ್ಟುಹಿಡಿದರು. ಸ್ಥಳದಲ್ಲಿ ಡಿವೈಎಸ್ಪಿ  ಗೋವಿಂದರಾಜು, ಪಿಎಸ್ಐ ತಿರುಮಲ್ಲೇಶ್, ಡಾ .ಭಾರತಿ, ಡಾ.ರೇವಣ್ಣ ಇತರರು ಹಾಜರಿದ್ದರು.

ಪರಿಹಾರದ ಜೊತೆಗೆ ಮನೆಯವರಿಗೆ ಕೆಲಸದ ಭರವಸೆ

ಮಧ್ಯರಾತ್ರಿ 12ರ ತನಕ ನರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಸ್ಥಳಕ್ಕೆ ಸಚಿವರು ಬರಲೆಬೇಕೆಂದು ಪಟ್ಟು ಹಿಡಿದಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡರು. ಅಂತಿಮವಾಗಿ ಗ್ರಾಮಸ್ಥರ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾದರು. ಮೃತ ಯುವತಿ ಕುಟುಂಬಕ್ಕೆ 7.5ಲಕ್ಷ ಪರಿಹಾರ ಘೋಷಣೆ ಮಾಡಿ ಸ್ಥಳದಲ್ಲೇ 5ಲಕ್ಷ ಪರಿಹಾರ ಚೆಕ್ ವಿತರಣೆ ಮಾಡಲಾಯಿತು. ಯುವತಿ ಕುಟುಂಬದ ಓರ್ವರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಲಾಯಿತು. ಇನ್ನು ಟ. ನರಸೀಪುರ ತಾಲ್ಲೂಕಿನಲ್ಲಿ 15 ತಜ್ಞರ ತಂಡ ನೇಮಕ ಮಾಡಿ ಚಿರತೆ ಸೆರೆ ಸಿಕ್ಕಲ್ಲಿ ಗುಂಡು ಹಾರಿಸಿ ಕೊಲ್ಲುವುದಾಗಿ ಭರವಣೆ ನೀಡಲಾಯಿತು. ಮೈಸೂರು ಡಿಸಿಎಫ್ ಕಮಲ ಕರಿಕಾಳನ್ ಈ ಭರವಸೆಗಳನ್ನು ನೀಡಿದ ಮೇಲೆ ಗ್ರಾಮಸ್ಥರು ಪ್ರತಿಭಟನೆ ಕೈ ಬಿಟ್ಟರು.

Follow Us:
Download App:
  • android
  • ios