ಚನ್ನಪಟ್ಟಣದಲ್ಲಿ ಡಿಕೆಶಿ ಜತೆ ಇನ್ನೂ 4 ಜನ ಸ್ಪರ್ಧೆ ಮಾಡಲಿ: ಎಚ್‌ಡಿಕೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಾದರೂ ಸ್ಪರ್ಧಿಸಲಿ ಅಥವಾ ಅವರೊಂದಿಗೆ ಇನ್ನೂ ನಾಲ್ಕು ಜನ ಸ್ಪರ್ಧೆ ಮಾಡಲಿ ತಮ್ಮದೇನೂ ಅಭ್ಯಂತರವಿಲ್ಲ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಾದರೂ ಸ್ಪರ್ಧಿಸಲಿ ಅಥವಾ ಅವರೊಂದಿಗೆ ಇನ್ನೂ ನಾಲ್ಕು ಜನ ಸ್ಪರ್ಧೆ ಮಾಡಲಿ ತಮ್ಮದೇನೂ ಅಭ್ಯಂತರವಿಲ್ಲ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಿವಕುಮಾರ್ ಅವರು ಸ್ಪರ್ಧಿಸಲಿದ್ದಾರೆ ಎಂಬುದಕ್ಕೆ ದೊಡ್ಡ ಮಹತ್ವ ನೀಡುವ ಅಗತ್ಯ ಇಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು. ಉಪಚುನಾವಣೆಯಲ್ಲಿ ಯಾರನ್ನಾದರೂ ನಾವು ನಿಲ್ಲಬೇಡಿ ಎಂದು ಹೇಳಲಾಗುವುದಿಲ್ಲ ಎಂದರು.
ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಯಾರಾಗಲಿದ್ದಾರೆ ಎಂಬುದನ್ನು ಕಾಲವೇ ತೀರ್ಮಾನಿಸಲಿದೆ. ಉಪಚುನಾವಣೆ ವಿಚಾರಕ್ಕೆ ಈಗ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಈಗ ರಾಜ್ಯದ ಅಭಿವೃದ್ಧಿ ಕಡೆ ಗಮನಹರಿಸೋಣ ಎಂದರು.
ಇದೇ ವೇಳೆ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಮೇಲಿನ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಇಂತಹ ವಿಚಾರಗಳನ್ನು ನನ್ನ ಬಳಿ ಚರ್ಚೆ ಮಾಡಲು ಬರಬೇಡಿ. ರಾಜ್ಯದ ಸಮಸ್ಯೆಗಳಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತ್ರ ಚರ್ಚೆ ಮಾಡಿ ಎಂದು ತಿಳಿಸಿದರು.
ಮಾಗಡಿ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಶಿವಕುಮಾರ ಸ್ಪರ್ಧಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ, ಆ ಕುರಿತು ನನ್ನ ಬಳಿ ಚರ್ಚೆ ಆಗಿಲ್ಲ. ಪಕ್ಷ ತೀರ್ಮಾನ ಮಾಡಿ ಒಳ್ಳೆಯ ಅಭ್ಯರ್ಥಿಯನ್ನ ಚುನಾವಣೆಗೆ ನಿಲ್ಲಿಸುತ್ತದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದರು
ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ನಾನು ಕೂಡ ಒಬ್ಬ ಕಾರ್ಯಕರ್ತನಾಗಿ ಚುನಾವಣೆಯಲ್ಲಿ ಕೆಲಸ ಮಾಡ್ತೀನಿ. ಚನ್ನಪಟ್ಟಣಕ್ಕೆ ರಾಜೀನಾಮೆ ಕೊಟ್ಟು ಈಗಾಗಲೇ ಒಂದು ವಾರ ಆಗಿದೆ. ಈ ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಗಿ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಡಿಕೆ ಶಿವಕುಮಾರ ಅವರು ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ಮಾಡ್ತಾ ಇದ್ದಾರೆ ಎಂದರು.
ಸಿ.ಟಿ.ರವಿ, ಯತೀಂದ್ರ ಸೇರಿ 17 ಎಂಎಲ್‌ಸಿಗಳ ಪ್ರಮಾಣ ಇಂದು
ಇನ್ನು ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಸುರೇಶ್ ಸ್ಪರ್ಧೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್ ಅವರು, ನಾನು ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದೆಲ್ಲವೂ ಮಾಧ್ಯಮಗಳ ಊಹಾಪೋಹವಷ್ಟೇ. ಚುನಾವಣೆ ಸೋಲಿನಿಂದ ನಾನು ಒತ್ತಡದಲ್ಲಿದ್ದೆ, ಸದ್ಯ ಅದರಿಂದ ಹೊರಗಡೆ ಬಂದಿದ್ದೇನೆ. ಜನರು ನನಗೆ ರೆಸ್ಟ್ ಕೊಟ್ಟಿದ್ದಾರೆ ಬೇರೆಯವರು ಹೇಗೆ 20 ದಿನಗಳಲ್ಲಿ ಚುನಾವಣೆ ಮಾಡಿದ್ರೂ ಅದೇ ರೀತಿ ಚುನಾವಣೆ ಮಾಡ್ತೇನೆ ಎಂದರು.