Asianet Suvarna News Asianet Suvarna News

ಸ್ವಚ್ಛತೆಯ ಅಭಿಯಾನವು ನಿರಂತರವಾಗಿರಲಿ

ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದು, ಯುವಕರು, ಸಂಘ ಸಂಸ್ಥೆಗಳು ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಅಭಿಯಾನವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ನಿತ್ಯ ಒಂದು ಗಂಟೆಯನ್ನು ಸ್ವಚ್ಛತೆಗೆ ಮೀಸಲಿಡಬೇಕು. ಆಗ ಮಾತ್ರ ಗಾಂಧಿಜಿ ಕಂಡ ಸ್ವಚ್ಛ ಭಾರತ ಕನಸು ನನಸಾಗಲಿದೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

Let the cleanliness drive continue snr
Author
First Published Oct 2, 2023, 6:02 AM IST

  ಶಿರಾ :  ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದು, ಯುವಕರು, ಸಂಘ ಸಂಸ್ಥೆಗಳು ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಅಭಿಯಾನವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ನಿತ್ಯ ಒಂದು ಗಂಟೆಯನ್ನು ಸ್ವಚ್ಛತೆಗೆ ಮೀಸಲಿಡಬೇಕು. ಆಗ ಮಾತ್ರ ಗಾಂಧಿಜಿ ಕಂಡ ಸ್ವಚ್ಛ ಭಾರತ ಕನಸು ನನಸಾಗಲಿದೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಅಭಿಯಾನದಲ್ಲಿ ಅವರು ಮಾತನಾಡಿದರು. ಬೆಂಗಳೂರಿನ ಯುವಕರು, ಸಂಘ ಸಂಸ್ಥೆಗಳು ವಾರಕ್ಕೊಮ್ಮೆ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳುತ್ತಾರೆ. ಅದೇ ರೀತಿ ಹಳ್ಳಿಗಳ ಯುವಕರು ಸ್ವಚ್ಛತಾ ಅಭಿಯಾನ ನಡೆಸುವ ಮೂಲಕ ತಮ್ಮ ಗ್ರಾಮಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿನಿತ್ಯ ನಗರವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕ ಸೇವೆ ಶ್ಲಾಘನೀಯ. ನಗರಸಭೆಯಲ್ಲಿ ಪೌರಕಾರ್ಮಿಕ ಸಿಬ್ಬಂದಿಗಳ ಕೊರತೆ ಬಗ್ಗೆ ಮಾಹಿತಿ ಪಡೆದು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಾಥ್ ಮಾತನಾಡಿ, ಮನುಷ್ಯನ ಆರೋಗ್ಯಕ್ಕೆ ಸ್ವಚ್ಛತೆ ಬಹುಮುಖ್ಯವಾಗಿದೆ. ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿದ್ದರೆ ರೋಗಗಳು ಬಾರದಂತೆ ತಡೆಗಟ್ಟಬಹುದು. ವಿಧಾನಪರಿಷತ್ ಸದಸ್ಯರಾದ ಚಿದಾನಂದ್ ಎಂ.ಗೌಡ ಅವರು ಇಂದು ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ಶ್ರಮದಾನದಲ್ಲಿ ಭಾಗವಹಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.

ಸ್ವಚ್ಛತಾ ಸೇವಾ ಅಭಿಯಾನದಲ್ಲಿ ಪ್ರೆಸಿಡೆನ್ಸಿ ಶಾಲೆಯ ಎನ್ ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡು ಶ್ರಮದಾನ ಮಾಡಿದರು. ನಗರಸಭೆ ಪ್ರಭಾರಿ ಪೌರಾಯುಕ್ತೆ ಪಲ್ಲವಿ, ಮಾಜಿ ತಾ.ಪಂ. ಸದಸ್ಯ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷ ಈರಣ್ಣ ಪಟೇಲ್, ವೈದ್ಯರಾದ ಡಾ.ಗಿರೀಶ್, ಡಾ.ಡಿ.ಎಂ.ಗೌಡ, ಡಾ.ನರೇಂದ್ರ, ಹಿರಿಯ ಶುಶ್ರೂಷಕಿ ಶ್ರೀರಂಗಮ್ಮ, ಬುಡೇನ್ ಅಲಿ, ಆರೋಗ್ಯ ನಿರೀಕ್ಷಕರಾದ ಮಾರೇಗೌಡ, ಮಹಮದ್ ಗೌಸ್, ಮುಖಂಡರಾದ ವಿಜಯರಾಜ್, ನೇರಲಗುಡ್ಡ ಶಿವಕುಮಾರ್, ಮೂಗನಹಳ್ಳಿ ರಾಮು, ಸಂತೇಪೇಟೆ ನಟರಾಜ್ ಸೇರಿದಂತೆ ಹಲವರು ಹಾಜರಿದ್ದರು. 

Follow Us:
Download App:
  • android
  • ios