Tumakuru: ಅಪರಾಧ ಚಟುವಟಿಕೆಗೆ ಪೊಲೀಸರು ಕಡಿವಾಣ ಹಾಕಲಿ
ತಿಪಟೂರು ಪೊಲೀಸ್ ಉಪವಿಭಾಗದಲ್ಲಿ ಮನೆಗಳ್ಳತನ, ಕ್ರೈಂಗಳು, ಅಕ್ರಮ ಮದ್ಯ ಮಾರಾಟ, ಮಟ್ಕಾ, ಇಸ್ಪೀಟ್ ದಂಧೆ ಸೇರಿದಂತೆ ಹಲವು ಅಪರಾಧ ಚಟುವಟಿಕೆಗಳು ಎಡಬಿಡದೆ ನಡೆಯುತ್ತಿದ್ದು ಪೊಲೀಸ್ ಇಲಾಖೆ ನಿರ್ಲಕ್ಷ್ಯ ತಾಳಿದ್ದು ಇವುಗಳಿಗೆ ಕೂಡಲೆ ಕಡಿವಾಣ ಹಾಕಬೇಕೆಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಡಿವೈಎಸ್‌ಪಿಯವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಒತ್ತಾಯಿಸಿದರು.
ತಿಪಟೂರು (ಸೆ.04): ತಿಪಟೂರು ಪೊಲೀಸ್ ಉಪವಿಭಾಗದಲ್ಲಿ ಮನೆಗಳ್ಳತನ, ಕ್ರೈಂಗಳು, ಅಕ್ರಮ ಮದ್ಯ ಮಾರಾಟ, ಮಟ್ಕಾ, ಇಸ್ಪೀಟ್ ದಂಧೆ ಸೇರಿದಂತೆ ಹಲವು ಅಪರಾಧ ಚಟುವಟಿಕೆಗಳು ಎಡಬಿಡದೆ ನಡೆಯುತ್ತಿದ್ದು ಪೊಲೀಸ್ ಇಲಾಖೆ ನಿರ್ಲಕ್ಷ್ಯ ತಾಳಿದ್ದು ಇವುಗಳಿಗೆ ಕೂಡಲೆ ಕಡಿವಾಣ ಹಾಕಬೇಕೆಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಡಿವೈಎಸ್‌ಪಿಯವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಒತ್ತಾಯಿಸಿದರು. ನಗರದ ಡಿವೈಎಸ್‌ಪಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಪೊಲೀಸ್ ಇಲಾಖೆಯ ವಿರುದ್ಧ ಸಾರ್ವಜನಿಕರ ಹತ್ತು ಹಲವು ಸಮಸ್ಯೆಗಳ ಬಗ್ಗೆ ಡಿವೈಎಸ್‌ಪಿ ಸಿದ್ದಾರ್ಥ ಗೋಯಲ್ ಬಳಿ ಮಾಧ್ಯಮದವರ ಎದುರು ಚರ್ಚಿಸಿದರು.
ಚಿಕ್ಕನಾಯಕನಹಳ್ಳಿ, ತುರುವೇಕೆರೆ, ತಿಪಟೂರು ತಾಲೂಕುಗಳಲ್ಲಿ ಸಾಕಷ್ಟುಕ್ರೈಂಗಳು ಎಗ್ಗಿಲ್ಲದೆ ನಡೆಯುತ್ತಿದ್ದು ಚಿಕ್ಕ ವಯಸ್ಸಿನ ಮಕ್ಕಳೇ ಕುಡಿತ, ಮಟ್ಕಾದ ದಾಸರಾಗುತ್ತಿದ್ದಾರೆ. ನಗರದ ಗಲ್ಲಿಗಲ್ಲಿಗಳು ಹಾಗೂ ಬಹುತೇಕ ಹಳ್ಳಿಗಳಲ್ಲಿ ಅಕ್ರಮ ಮದ್ಯಮಾರಾಟ ಜೋರಾಗಿದ್ದು ದುಡಿದ ಹಣವನ್ನು ಕುಡಿತಕ್ಕೆ ಖರ್ಚುಮಾಡುತ್ತಿರುವುದರಿಂದ ಸಂಸಾರಗಳು ಅನಾಥವಾಗುತ್ತಿವೆ. ಹಳ್ಳಿಗಳಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಇಲ್ಲದಂತಾಗಿದ್ದು ಕಳ್ಳತನಗಳು ಎಗ್ಗಿಲ್ಲದೆ ನಡೆಯುತ್ತಿವೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವುದೇ ಕ್ರಮ ವಹಿಸುತ್ತಿಲ್ಲ ಎಂದರು.
ಬಿಜೆಪಿ ಬಾಗಿಲು ತಟ್ಟಿದ ಕಾಂಗ್ರೆಸ್ ಮಾಜಿ ಸಂಸದ, ಯಡಿಯೂರಪ್ಪ ಜತೆ ಗುಪ್ತ್-ಗುಪ್ತ್ ಮಾತು
ಡಿವೈಎಸ್‌ಪಿ ಸಿದ್ದಾಥ್‌ರ್ ಗೋಯಲ್ ಮಾತನಾಡಿ, ತಿಪಟೂರು ನಗರದಲ್ಲಿ ವೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಈ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ರಂಗಾಪುರ, ಬಿದರೆಗುಡಿ, ರಾಷ್ಟ್ರೀಯ ಹೆದ್ದಾರಿ ಹೀಗೆ ಐದು ಕಡೆ ಸ್ಥಳಗಳನ್ನು ಗುರ್ತಿಸಿ ಎಚ್ಚರಿಕೆ ಕೊಟ್ಟಿದ್ದೇವೆ. ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವುದು ನಿಜ. ಈ ಬಗ್ಗೆ 21 ಪ್ರಕರಣಗಳನ್ನು ದಾಖಲಿಸಿ ಎಚ್ಚರಿಸಲಾಗಿದ್ದು ಇವರಿಗೆ ಮದ್ಯ ಸರಬರಾಜು ಮಾಡುವ ಮೂರು ಅಂಗಡಿಗಳ ಪರವಾನಿಗೆಗಳನ್ನು ರದ್ದು ಮಾಡಲಾಗಿದೆ. ಬೆಳೆಯುತ್ತಿರುವ ಜನಸಂಖ್ಯೆಯಿಂದ ನಗರದಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು ಸಿಗ್ನಲ್ ವ್ಯವಸ್ಥೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು.
ಕಳ್ಳತನ ಪ್ರಕರಣಗಳ ಕಡಿವಾಣಕ್ಕೆ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಈಗಾಗಲೇ ನಗರಸಭೆಗೆ ತಿಳಿಸಲಾಗಿದೆ. ಪೊಲೀಸ್ ಠಾಣೆಗೆ ಯಾವುದೇ ರೀತಿಯ ಪ್ರಕರಣಗಳು ಬಂದರೂ ನಾವು ತಪ್ಪದೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು. ಈ ಸಂದರ್ಭದಲ್ಲಿ ಹುಳಿಯಾರು ಜಿ.ಪಂ ಮಾಜಿ ಸದಸ್ಯ ಸಿದ್ದರಾಮಯ್ಯ, ಚಿಕ್ಕನಾಯಕನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಕಾಂತರಾಜು, ತಾಪಂ ಮಾಜಿ ಅಧ್ಯಕ್ಷ ಸುರೇಶ್, ನಗರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಸೈಫುಲ್ಲಾ, ಚಿ.ನಾ.ಹಳ್ಳಿ ಕೃಷ್ಣಮೂರ್ತಿ, ಬಜಗೂರು ಮಂಜುನಾಥ್, ಸುಜಿತ್‌ಭೂಷಣ್, ಲೋಕನಾಥಸಿಂಗ್ ಮತ್ತಿತರರಿದ್ದರು.
ನಾನು ಮುಂದೆನೂ ಮುರುಘಾ ಮಠಕ್ಕೆ ಹೋಗ್ತೀನಿ; ಮಾಜಿ ಸಚಿವ ಎಂ.ಬಿ.ಪಾಟೀಲ್
ಮಹಿಳಾ ಪೊಲೀಸ್ ಠಾಣೆಯನ್ನು ನಗರದಲ್ಲಿ ಸ್ಥಾಪಿಸಿ: ಮಾಜಿ ಶಾಸಕ ಕೆ. ಷಡಕ್ಷರಿ ಮಾತನಾಡಿ, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮಟ್ಕಾ, ಇಸ್ಪಿಟ್ ದಂಧೆ ಹಾಗೂ ಅಕ್ರಮ ಮದ್ಯ ಮಾರಾಟ ಹೆಚ್ಚುತ್ತಿದೆ. ಪೊಲೀಸ್ ಬೀಟ್ ವ್ಯವಸ್ಥೆ ಸರಿಯಾಗಿಲ್ಲದ ಕಾರಣ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಮನೆಗಳ್ಳತನ, ಅಂಗಡಿ, ವಾಹನ ಕಳ್ಳತನಗಳು ಹೆಚ್ಚುತ್ತಿವೆ. ರಸ್ತೆಗಳಲ್ಲಿ ವಾಹನ ಸೂಚನಾ ಫಲಕಗಳಿಲ್ಲದೆ ಅಪಘಾತಗಳು ಹೆಚ್ಚುತ್ತಿವೆ. ಟ್ರಾಫಿಕ್ ಪೊಲೀಸ್ ಠಾಣೆ ಮತ್ತು ಸಿಗ್ನಲ್‌ಗಳ ಅಳವಡಿಕೆಯನ್ನು ಪೊಲೀಸ್ ಇಲಾಖೆ ಮಾಡಬೇಕು. ನಗರದಲ್ಲಿ ಅಪ್ರಾಪ್ತ ಯುವಕರು ಬೈಕ್ ವೀಲಿಂಗ್ ಮಾಡುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ಮಹಿಳಾ ಪೊಲೀಸ್ ಠಾಣೆಯನ್ನು ನಗರದಲ್ಲಿ ಸ್ಥಾಪಿಸಬೇಕು. ಪ್ರತಿ ತಿಂಗಳು ಇಲಾಖೆಯಿಂದ ಸಾರ್ವಜನಿಕ ಸಭೆ ನಡೆಸಬೇಕೆಂದು ತಿಳಿಸಿದರು.