ಭಾರತೀಯ ಸಂಸ್ಕೃತಿ, ಸಂಪ್ರದಾಯ ಉಳಿಸುವ ಕಾರ್ಯವಾಗಲಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತೀಯ ಸಂಪ್ರದಾಯದಲ್ಲಿ ಸಂಕ್ರಾಂತಿಗೆ ವಿಶೇಷ ಸ್ಥಾನಮಾನವಿದೆ. ಅದನ್ನು ಉಳಿಸಿ-ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. 

Lets work to preserve Indian culture and tradition Says Union Minister Pralhad Joshi

ಹುಬ್ಬಳ್ಳಿ (ಜ.15): ಭಾರತೀಯ ಸಂಪ್ರದಾಯದಲ್ಲಿ ಸಂಕ್ರಾಂತಿಗೆ ವಿಶೇಷ ಸ್ಥಾನಮಾನವಿದೆ. ಅದನ್ನು ಉಳಿಸಿ-ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಇಲ್ಲಿನ ದಿ ಸಿಲ್ವರ್ ಓಕ್ ಫಾರ್ಮ್‌ನಲ್ಲಿ ಹು-ಧಾ, ವಿಜಯಪುರ ಗೆಳೆಯರ ಬಳಗದಿಂದ ಹಮ್ಮಿಕೊಳ್ಳಲಾಗಿದ್ದ ಸಂಕ್ರಾಂತಿ ಸಂಭ್ರಮ 20ನೇ ವರ್ಷದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಎಲ್ಲೆಡೆ ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ವಿಜಯಪುರ ಗೆಳೆಯರ ಬಳಗವು ಸಾಂಪ್ರದಾಯಿಕ ಶೈಲಿಯಲ್ಲಿ ಸಂಕ್ರಾಂತಿ ಹಬ್ಬ ಆಚರಿಸುತ್ತಿರುವುದು ಖುಷಿಯ ಸಂಗತಿ ಎಂದರು.

ವಿಪ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, ವಿಜಯಪುರದ ಜನರು ಯಾವುದೇ ಜಿಲ್ಲೆ ಅಥವಾ ರಾಜ್ಯಕ್ಕೆ ಹೋದರು ಅಲ್ಲಿನ ಸ್ಥಳೀಯರ ಜತೆ ಬೆರೆಯುವ ಗುಣ ಹೊಂದಿರುವುದು ಅವರಲ್ಲಿನ ವಿಶೇಷತೆಯಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ವಿಜಯಪುರ ಗೆಳೆಯರ ಬಳಗದ ಅಧ್ಯಕ್ಷ ಸಿ.ಜಿ. ಝಳಕಿ ಹಾಗೂ ಕಾರ್ಯದರ್ಶಿ ಡಾ. ಮೋಹನ ನುಚ್ಚಿ ಮಾತನಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬಳಗದ ಸದಸ್ಯರು ಸಾಂಪ್ರದಾಯಕ ಉಡುಪು ಧರಿಸಿ ಭೂಮಿಪೂಜೆ ಹಾಗೂ ಗೋ ಪೂಜೆ ನೆರವೇರಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನದಿಂದ ಮತಾಂತರ ಹಾವಳಿ ಹೆಚ್ಚಳ: ಕೇಂದ್ರ ಸಚಿವ ಜೋಶಿ

ಈ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಎಂ.ಎಂ. ಜೋಶಿ, ವಿಪ ಸದಸ್ಯ ಪ್ರದೀಶ ಶೆಟ್ಟರ, ಮೇಜರ್ ಸಿದ್ದಲಿಂಗ ಹಿರೇಮಠ, ಅನುರಾಧ ವಸ್ತ್ರದ, ನಿಂಗಣ್ಣ ಬಿರಾದಾರ, ಬಾಳಾಸಾಹೇಬ ಪಾಟೀಲ, ರಮೇಶ ಯಾದವಾಡ, ಶಿವರಾಯ ಹಳಗುಣಕಿ, ಚಂದ್ರಶೇಖರ ಢವಳಗಿ, ಪ್ರಭುಲಿಂಗ ನಾಟಿಕಾರ, ಮಲ್ಲಿಕಾರ್ಜುನ ಹಿರೊಳ್ಳಿ, ದೇಶಭೂಷನ್ ಜಗಶೆಟ್ಟಿ, ಶಾಂತೇಶ ದೇಸಾಯಿ, ಸುರೇಶ ಪಿ, ಕೇದಾರ ಎಸ್, ಡಾ. ಸೋಮಶೇಖರ ಹುದ್ದಾರ, ನಿರ್ಮಲಾ ಜಳಕಿ, ಡಾ. ರಾಜೇಶ್ವರಿ ಪತ್ತಾರ ಸೇರಿದಂತೆ ಹಲವರಿದ್ದರು.

ಜನರ ಸುರಕ್ಷತೆ, ಕಾಳಜಿಯೇ ಕೇಂದ್ರ ಸರ್ಕಾರದ ಧ್ಯೇಯ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜನರ ಸುರಕ್ಷತೆ ಹಾಗೂ ಕಾಳಜಿಗೆ ಹೆಚ್ಚಿನ ಒತ್ತು ನೀಡುವ ಜತೆಗೆ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಇಲ್ಲಿನ ಪೂನಾ ಬೆಂಗಳೂರು ಹೆದ್ದಾರಿಯ ನೂಲ್ವಿ-ಬೆಳಗಲಿ ಕ್ರಾಸ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ₹12.5 ಕೋಟಿ ವೆಚ್ಚದಲ್ಲಿ ರಸ್ತೆಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ತಾಲೂಕಿನ ನೂಲ್ವಿ ಕ್ರಾಸ್ ಬಳಿ ಕಳೆದ ಐದಾರು ವರ್ಷಗಳಲ್ಲಿಯೇ ನೂರಾರು ಸಾವು-ನೋವು ಸಂಭವಿಸಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಕೆಳ ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿರುವುದು ಹೆಮ್ಮೆಯ ಸಂಗತಿ. ಲಾರಿ, ಟ್ರ್ಯಾಕ್ಟರ್ ಸೇರಿದಂತೆ ಖಾಸಗಿ ವಾಹನಗಳು ಸರಾಗವಾಗಿ ಸಂಚರಿಸುವಂತಾಗಲು ಐದೂವರೆ ಮೀಟರ್ ವಿಶಾಲವಾದ ಕೆಳ ಸೇತುವೆ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ಯಾರಂಟಿ ಹೆಸರಲ್ಲಿ ಜನರಿಗೆ ಮೋಸ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಜೋಶಿ

ಶೇ. 60ರಷ್ಟು ಹೆದ್ದಾರಿ ನಿರ್ಮಾಣ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರದ ಅವಧಿಯಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಹೊಸ ಅರ್ಥ ಬಂದಿದೆ. 60 ವರ್ಷದ ಯುಪಿಎ ಆಡಳಿತದಲ್ಲಿ ಕೇವಲ ಶೇ. 40ರಷ್ಟು ಮಾತ್ರ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಮಾಡಲಾಗಿದೆ. ಆದರೆ, ಎನ್‌ಡಿಎ ಅವಧಿಯಲ್ಲಿ ಶೇ. 60ರಷ್ಟು ಹೆದ್ದಾರಿಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಅವಧಿಯಲ್ಲಿ ಪ್ರತಿದಿನ ಕನಿಷ್ಠ 30 ಕಿಮೀ ಉದ್ದದ ರಸ್ತೆ ನಿರ್ಮಿಸಲಾಗುತ್ತಿದೆ. ಆ ಮೂಲಕ ಇಲ್ಲಿಯ ವರೆಗೆ 63 ಸಾವಿರ ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿ ದಾಖಲೆ ಬರೆಯಲಾಗಿದೆ ಎಂದು ಜೋಶಿ ಹೇಳಿದರು.

Latest Videos
Follow Us:
Download App:
  • android
  • ios