ಶಿವಕುಮಾರ್ ಇಡಿ ಪ್ರಕರಣವನ್ನು ಸಿಬಿಐ ತನಿಖೆ ಮಾಡಲು ರಾಜ್ಯ ಸರ್ಕಾರ ಕ್ಯಾಬಿನೆಟ್ ಠರಾವ್ ಪಾಸ್ ಮಾಡಬೇಕು ಎಂದ ಹಿರೇಮಠ| ಪ್ರಧಾನಮಂತ್ರಿ ಮೋದಿ ಅವರು ಕಪ್ಪು ಹಾಗೂ ಭ್ರಷ್ಟಾಚಾರದ ಮೇಲೆ ಸಮರ ಸಾರಿದ್ದೇವೆ ಎಂದಿದ್ದಾರೆ| ಆದ್ರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಡಿ.ಕೆ. ಶಿವಕುಮಾರ್ ಅವರ ಇಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ ಹಿರೇಮಠ| 

ಧಾರವಾಡ(ನ.22): ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಇಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು ಹೇಳಿದ್ದಾರೆ. 

ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ಇಡಿ ಪ್ರಕರಣವನ್ನು ಸಿಬಿಐ ತನಿಖೆ ಮಾಡಲು ರಾಜ್ಯ ಸರ್ಕಾರ ಕ್ಯಾಬಿನೆಟ್ ಠರಾವ್ ಪಾಸ್ ಮಾಡುವಂತೆ‌ ಇದೇ ವೇಳೆ ಒತ್ತಾಯಿಸಿದ್ದಾರೆ. 
ಪ್ರಧಾನಮಂತ್ರಿ ಮೋದಿ ಅವರು ಕಪ್ಪು ಹಾಗೂ ಭ್ರಷ್ಟಾಚಾರದ ಮೇಲೆ ಸಮರ ಸಾರಿದ್ದೇವೆ ಎಂದಿದ್ದಾರೆ. ಆದ್ರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಡಿ.ಕೆ. ಶಿವಕುಮಾರ್ ಅವರ ಇಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಭ್ರಷ್ಟಾಚಾರ ವಿರುದ್ಧವಾಗಿ ಜನೆವರಿಯಲ್ಲಿ ಕಾಗಿನೆಲೆಯಿಂದ ಕೂಡಲಸಂಗಮವರೆಗೆ ಶರಣ ಸಂತರ ಬೃಹತ್ ಜಾಗೃತಿ ಜಾಥಾ ನಡೆಸುತ್ತಿದ್ದೇವೆ ಎಂದು ಇದೇ ವೇಳೆ ತಿಳಿಸಿದ್ದಾರೆ.