Asianet Suvarna News Asianet Suvarna News

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ : ಹೆಚ್ಚು ಚಳಿ

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇದ್ದು, ಇದರೊಂದಿಗೆ ಚಳಿಯೂ ಕೂಡ ಸೇರಿದೆ. ಕೆಲವೊಮ್ಮೆ ಮಳೆಯೂ ಜಿನುಗುತ್ತಿದೆ. 

Light Rain Lashes in Bengaluru
Author
Bengaluru, First Published Dec 1, 2019, 8:54 AM IST

ಬೆಂಗಳೂರು [ಡಿ.01]:  ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮೋಡ ಮುಸುಕಿದ ವಾತಾವರಣ ಇರುವುದರಿಂದ ಸಾರ್ವಜನಿಕರಿಗೆ ಕೊಂಚ ಚಳಿ ಅನುಭವಾಗತೊಡಗಿದೆ.

ಶನಿವಾರ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯಾದ ಪರಿಣಾಮ ಚಳಿ ಇತ್ತು. ನಗರದ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 27.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.1 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಮೂಲಕ ಸರಾಸರಿ ಕನಿಷ್ಠ ಉಷ್ಠಾಂಶಕ್ಕಿಂತ 0.2ರಷ್ಟುಕಡಿಮೆ ಉಷ್ಣಾಂಶ ದಾಖಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಶೀತಗಾಳಿ ಹಾಗೂ ಮೋಡ ಮುಸುಕಿದ ವಾತಾವರಣ ಇರುವುದರಿಂದ ಚಳಿಯ ಅನುಭವಾಗುತ್ತಿದೆ. ಇನ್ನೂ ನಾಲ್ಕೈದು ದಿನ ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮಳೆ ಸಾಧ್ಯತೆ ತೀರ ಕಡಿಮೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು ಹೇಳಿದರು.

Follow Us:
Download App:
  • android
  • ios