Karnataka Rains: 'ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ, ಅಗತ್ಯ ಸಿದ್ಧತೆ ಮಾಡಿಕೊಳ್ಳಿ'

ಮಳೆ, ಪ್ರವಾಹದಿಂದ ಅಹಿತಕರ ಘಟನೆಯಾಗದಂತೆ ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ 

Likely Heavy Rain in the Coming Days Make Necessary Preparations in Raichur grg

ರಾಯಚೂರು(ಸೆ.08):  ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯ ಕೃಷ್ಣ ನದಿ ಹಾಗೂ ತುಂಗಾಭದ್ರಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಕೂಡಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿ, ಜನರ ತುರ್ತು ರಕ್ಷಣೆಗೆ ಬೋಟ್‌ ಹಾಗೂ ಪುನರ್ವಸತಿಗೆ ಪರಿಹಾರ ಕೇಂದ್ರಗಳ ಸ್ಥಾಪನೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಉಪ ವಿಭಾಗ ಮಟ್ಟದಲ್ಲೂ ಕೂಡಲೇ ಪೊಲೀಸ್‌, ಅಗ್ನಿಶಾಮಕ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿ ಈ ಕುರಿತು ಅಗತ್ಯ ಕ್ರಮ ವಹಿಸಿಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Karnataka Floods: ನೂರಾರು ಗ್ರಾಮಗಳಿಗೆ ಜಲದಿಗ್ಬಂಧನ

ಜಿಲ್ಲೆಗೆ ಈಗಾಗಲೇ ಎನ್‌ಡಿಆರ್‌ಎಫ್‌ ತಂಡ ಬೀಡು ಬಿಟ್ಟಿದ್ದು, ಪರಿಸ್ಥಿತಿಯ ಅವಲೋಕನ ಮಾಡಲಿದ್ದಾರೆ. ಜಿಲ್ಲೆಗೆ ಅಗತ್ಯವಿರುವ ಬೋಟ್‌ಗಳನ್ನು ಈಗಾಗಲೇ ಸರ್ಕಾರ ಜಿಲ್ಲೆಗೆ ನೀಡಿದೆ. ನದಿ ದಂಡೆಯಲ್ಲಿ ಇರುವ ಗ್ರಾಮಗಳಲ್ಲಿ ಜನರ ತುರ್ತು ರಕ್ಷಣೆಗೆ ಅಗತ್ಯವಿರುವ ಬೋಟ್‌ ಮತ್ತು ಅವುಗಳ ಆಪರೇಟರ್‌ಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲಾ ಅಥವಾ ತಾಲೂಕುಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು, ಪ್ರವಾಹ ಅಥವಾ ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಅಲ್ಲದೆ ನದಿಯಲ್ಲಿ ತೆಪ್ಪದ ಮೂಲಕ ಪ್ರಯಾಣಿಸುವುದನ್ನು ನಿಷೇಧಿಸುವುದು ಹಾಗೂ ತೆಪ್ಪದಲ್ಲಿ ಪ್ರಯಾಣಿಸುವವರನ್ನು ಮನಹೊಲಿಸಿ ತೆಪ್ಪವನ್ನು ವಶಕ್ಕೆ ಪಡಯಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನದಿ, ಹಳ್ಳ ಅಥವಾ ಕೆರೆ ದಡದಲ್ಲಿ ಬಟ್ಟೆತೊಳೆಯುವುದು, ಈಜಾಡುವುದು, ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಭಾರಿ ಮಳೆ ಅಥವಾ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸಬೇಕು. ಭಾರಿ ಮಳೆ ಅಥವಾ ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

Bengaluru rain : ಬೊಮ್ಮನಹಳ್ಳಿಯಲ್ಲಿ 2000 ಜನ ಸಂಕಷ್ಟದಲ್ಲಿ!

ಸಭೆಯಲ್ಲಿ ಎಡಿಸಿ ದುರಗೇಶ, ಎಸಿ ರಜನಿಕಾಂತ, ಎಲ್ಲಾ ತಹಸೀಲ್ದಾರರು, ಸಮಿತಿ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

ಉಭಯ ನದಿಗಳಿಗೆ ಲಕ್ಷಾಂತರ ಕ್ಯುಸೆಕ್‌ ನೀರು

ಎಲ್ಲೆಡೆ ಭಾರಿ ಮಳೆಯಾಗುತ್ತಿರುವುದರಿಂದ ಜಲಾಶಯಗಳು ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಿಗೆ ಲಕ್ಷಾಂತರ ಕ್ಯುಸೆಕ್‌ ನೀರನ್ನು ಹರಿಸಲಾಗಿದ್ದು, ನದಿಪಾತ್ರದ ಪ್ರದೇಶದಲ್ಲಿ ಮತ್ತೆ ಪ್ರವಾಹ ಭೀತಿ ಶುರುವಾಗಿದೆ.

ನಾರಾಯಣಪುರ ಜಲಾಶಯದಿಂದ ದಕ್ಷಿಣ ಕಾಶಿ ಕೃಷ್ಣಾ ನದಿಗೆ 1 ಲಕ್ಷ 44 ಸಾವಿರ ಕ್ಯುಸೆಕ್‌ ನೀರನ್ನು ಬಿಡಲಾಗಿದೆ. ಅದೇ ರೀತಿ ಮುನಿರಾಬಾದ್‌ ಜಲಾಶಯದಿಂದ ತುಂಗಭದ್ರಾ ನದಿಗೆ 1 ಲಕ್ಷ 50 ಸಾವಿರ ಕ್ಯುಸೆಕ್‌ ನೀರನ್ನು ಬಿಡಲಾಗಿದೆ. ಇದರಿಂದಾಗಿ ಕೃಷ್ಣಾ ನದಿ ವ್ಯಾಪ್ತಿಯ ಜಿಲ್ಲೆ ಲಿಂಗಸುಗೂರು, ದೇವದುರ್ಗ, ರಾಯಚೂರು ತಾಲೂಕುಗಳು ಅದೇ ರೀತಿ ತುಂಗಭದ್ರಾ ನದಿ ವ್ಯಾಪ್ತಿಯ ಸಿಂಧನೂರು, ಮಾನ್ವಿ ಹಾಗೂ ರಾಯಚೂರು ತಾಲೂಕುಗಳ ನದಿಪಾತ್ರದಲ್ಲಿ ಪ್ರವಾಹದ ಆತಂಕ ಉಂಟಾಗಿದ್ದು, ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಜಾರಿಗೊಳಿಸುವುದರ ಜೊತೆಗೆ ನದಿ ಸಮೀಪ ಹೋಗದಂತೆ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಸಹ ನೀಡಲಾಗುತ್ತಿದೆ.
 

Latest Videos
Follow Us:
Download App:
  • android
  • ios