ನೀರು..ನೀರು.. ಶರಾವತಿ ಕೆಳದಂಡೆ ಜನರಿಗೆ 2ನೇ ಎಚ್ಚರಿಕೆ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 13, Aug 2018, 8:05 PM IST
linganamakki-dam-almost-full-kpcl-issues-awareness-notification 2nd time
Highlights

ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜತೆಗೆ ಶರಾವತಿ ಕೆಳದಂಡೆಯ ಜನರಿಗೆ ಸುರಕ್ಷತಾ ಸ್ಥಳಕ್ಕೆ ತೆರಳಲು ಕೆಪಿಸಿಎಲ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕಾರವಾರ[ಆ.13]  ಶರಾವತಿ ಕೆಳದಂಡೆಯ ಜನರಿಗೆ ಸುರಕ್ಷತಾ ಸ್ಥಳಕ್ಕೆ ತೆರಳಲು ಕೆಪಿಸಿಎಲ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಹೊನ್ನಾವರ ತಾಲ್ಲೂಕು ವ್ಯಾಪ್ತಿಯ ಶರಾವತಿ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಲಿಂಗನಮಕ್ಕಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಣೆಕಟ್ಟಿನ ಕೆಳದಂಡೆಯಲ್ಲಿರುವವರು ಸುರಕ್ಷತಾ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಎರಡನೇ ಬಾರಿ ಸೂಚನೆ ಹೊರಡಿಸಿದೆ.

ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1,819 ಅಡಿ ಇದ್ದು, ಈಗಾಗಲೇ ಸೋಮವಾರ ಬೆಳಿಗ್ಗೆ 1812.75 ಅಡಿ ಭರ್ತಿಯಾಗಿದೆ. ಜಲಾಶಯದಲ್ಲಿ ಒಳಹರಿವು 41,645 ಕ್ಯೂಸೆಕ್ ಇದ್ದು, ಇದೇ ರೀತಿ ನೀರಿನ ಒಳಹರಿವು ಮುಂದುವರಿದಲ್ಲಿ ಗರಿಷ್ಠ ಮಟ್ಟವನ್ನು ಮೀರುವ ಸಾಧ್ಯತೆ ಇದೆ. ಹೀಗಾಗಿ, ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ನೀರನ್ನು ಹೊರ ಬಿಡಲಾಗುವುದು ಎಂದು ಕೆಪಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟ ನೀರು ಗೇರುಸೊಪ್ಪ ಜಲಾಶಯಕ್ಕೆ ಹರಿದು ಬರಲಿದೆ. ಆದರೆ, ಈ ಹೊರ ಬಿಡುವ ಹೆಚ್ಚುವರಿ ನೀರನ್ನು ಸಂಗ್ರಹಿಸುವ ಅವಕಾಶ ಗೇರುಸೊಪ್ಪದಲ್ಲಿ ಇಲ್ಲದ ಕಾರಣ ಇಲ್ಲಿನ ಅಣೆಕಟ್ಟಿನಿಂದ ಹೊರ ಬಿಡಲಾಗುವುದು ಎಂದು ತಿಳಿಸಿದೆ.  

loader