Asianet Suvarna News Asianet Suvarna News

ಲಿಂಗಾಯತ ಧರ್ಮ ಅರ್ಥೈಸಿಕೊಳ್ಳುವ ಅಗತ್ಯವಿದೆ: ಸಚಿವ ಸತೀಶ ಜಾರಕಿಹೊಳಿ

ಕರ್ನಾಟಕದ ಸಾಂಸ್ಕೃತಿಕ ರಾಯಬಾರಿ ಬಸವಣ್ಣನವರು ಕಟ್ಟಿರುವ ಲಿಂಗಾಯತ ಧರ್ಮವನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕಿರುವ ಅಗತ್ಯವಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು. 
 

Lingayatism needs to be understood Says Minister Satish Jarkiholi gvd
Author
First Published Jun 3, 2024, 4:43 PM IST

ಹುಕ್ಕೇರಿ (ಜೂ.03): ಕರ್ನಾಟಕದ ಸಾಂಸ್ಕೃತಿಕ ರಾಯಬಾರಿ ಬಸವಣ್ಣನವರು ಕಟ್ಟಿರುವ ಲಿಂಗಾಯತ ಧರ್ಮವನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕಿರುವ ಅಗತ್ಯವಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು. ತಾಲೂಕಿನ ಬೆಳವಿ ಗ್ರಾಮದ ಚರಮೂರ್ತಿ ಚರಂತೇಶ್ವರ ವಿರಕ್ತಮಠದಲ್ಲಿ ರಾತ್ರಿ ನಡೆದ ಬಸವ ಜಯಂತಿ ಸಂಭ್ರಮೋತ್ಸವ ಮತ್ತು ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದರು.

ಸ್ವತಂತ್ರ ಧರ್ಮ ಎನಿಸಿರುವ ಲಿಂಗಾಯತ ಧರ್ಮದ ಬೆಳವಣಿಗೆಗೆ ಕೆಲ ಪಟ್ಟಭದ್ರ ಸಾಂಪ್ರದಾಯಿಗಳಿಂದ ಹಿನ್ನಡೆಯಾಗಿದೆ ಎಂದರು. ಪ್ರಸ್ತುತ ದಿನಗಳಲ್ಲಿ ಬಸವಣ್ಣನವರ ವಿಚಾರಧಾರೆ, ಕಾಯಕ ತತ್ವದ ಅಧ್ಯಯನ ಮಾಡಬೇಕಿರುವ ಅಗತ್ಯವಿದೆ. ಇಂದಿನ ಜಾತಿ ವ್ಯವಸ್ಥೆ ಹೋಗಲಾಡಿಸಲು ಬಸವೇಶ್ವರರ ಸಿದ್ಧಾಂತದ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಮಹಾನ್ ಪುರುಷರು ತೋರಿರುವ ಸನ್ಮಾರ್ಗದಲ್ಲಿ ನಾವೆಲ್ಲ ಸಾಗಬೇಕು ಎಂದು ಅವರು ಹೇಳಿದರು. ಶರಣ ಬಸವ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. 

ರಾಜ್ಯದಲ್ಲಿ ಹೂಡಿಕೆ ಇಳಿಕೆಗೆ ಕೇಂದ್ರ, ಬಿಜೆಪಿ ಕಾರಣ: ಸಚಿವ ಎಂ.ಬಿ ಪಾಟೀಲ್‌

ಇಳಕಲ್ ಗುರು ಮಹಾಂತ ಸ್ವಾಮೀಜಿ, ಮುಖಂಡ ಮಹಾವೀರ ಮೋಹಿತೆ, ನಿವೃತ್ತ ಪ್ರಾಧ್ಯಾಪಕ ಡಾ.ಗುರುಪಾದ ಮರೆಗುದ್ದಿ, ಡಾ.ಜಯಪ್ರಕಾಶ ಕರಜಗಿ, ಮಹಾಂತೇಶ ತಾಂವಶಿ, ಸಂಗಪ್ಪ ಸರಿಕರ, ರಾಜಶೇಖರ ಯಂಕಚಿ, ವಿಜಯ ರವದಿ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಬಸವ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಮಕೃಷ್ಣ ಪಾನಬುಡೆ ನಿರೂಪಿಸಿದರು. ಶ್ರೀಶೈಲ ಮಠಪತಿ ವಂದಿಸಿದರು. ಇದಕ್ಕೂ ಮೊದಲು ಶೂನ್ಯ ಲಿಂಗ ವಿವೇಚನೆ, ವಚನ ಶಾಸ್ತ್ರ ಭಾಗ-1ರ ವಿಶ್ಲೇಷಣೆ ನಡೆಯಿತು.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ: ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ ನನಗೇನೂ ಗೊತ್ತಿಲ್ಲ. ಅದು ಪಕ್ಷಕ್ಕೆ ಬಿಟ್ಟ ವಿಚಾರ. ನಾನಂತೂ ಅಧ್ಯಕ್ಷ ಸ್ಥಾನದ ಸ್ಪರ್ಧಿಯಲ್ಲ. ಬದಲಾವಣೆ ಮಾಡುವುದಾದರೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವ ಸಾಮರ್ಥ್ಯ ಇರುವವರಿಗೆ ಅಧ್ಯಕ್ಷ ಸ್ಥಾನ ನೀಡಿ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಮಾತು ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತೆ. ಅಧ್ಯಕ್ಷ ಸ್ಥಾನದ ಬದಲಾವಣೆ ಆಗಬೇಕೆಂದರೆ ಮೊದಲು ಆ ಸ್ಥಾನ ಖಾಲಿ ಆಗಬೇಕಲ್ವಾ? ಬದಲಾವಣೆ ಬದಲು ಅಧಿಕಾರ ವಿಸ್ತರಣೆಯೂ ಆಗಬಹುದಲ್ವಾ ಎಂದರು.

ಜು.13ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ: ನ್ಯಾಯಾಧೀಶೆ ಕೆ.ಜಿ.ಶಾಂತಿ

ಕುಮಾಸ್ವಾಮಿಗೆ ತಿರುಗೇಟು: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಫೋನ್‌ ಕದ್ದಾಳಿಕೆ ಆರೋಪ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ, ಕೇಂದ್ರದಲ್ಲಿ ಅವರ ಮೈತ್ರಿ ಪಕ್ಷ ಬಿಜೆಪಿಯವರದ್ದೇ ಸರ್ಕಾರ ಇದೆಯಲ್ಲಾ. ತನಿಖೆ ಮಾಡಬಹುದಲ್ಲವಾ? ಇದರಲ್ಲಿ ರಾಷ್ಟ್ರೀಯ ಭದ್ರತಾ ವಿಚಾರ ಬರುತ್ತೆ. ಕದ್ದಾಲಿಕೆ ಮಾಡಿದ್ರೆ ತನಿಖೆ ನಡೆಸಲಿ, ಬೇಡ ಅಂದವರು ಯಾರು ಎಂದರು.

Latest Videos
Follow Us:
Download App:
  • android
  • ios