ಬೆಂಗಳೂರು[ಜ.30] ಕೆಂಪೇಗೌಡ ಬಸ್ ನಿಲ್ದಾಣದ ಸುತ್ತ ಮುತ್ತ ಟ್ರಾಫಿಕ್ ಜಾಮ್ ಆಗಿದೆ. ಈ ಜಾಮ್ ಸಂಜೆ 7 ಗಂಟೆವರೆಗೂ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಹಿಳೆಯರನ್ನು ಸ್ವಾತಂತ್ರ್ಯ ಉದ್ಯಾನದ ಬಳಿ ತಡೆಯಲಾಗಿದೆ. ಆದರೆ ಸಾವಿರಾರು ಮಹಿಳೆಯರು ಆಗಮಿಸಿ ಧರಣಿ ನಿರತರಾಗಿರುವುದರಿಂದ ಮೆಜೆಸ್ಟಿಕ್ ಸುತ್ತ ಮುತ್ತ ಅಂದರೆ, ಗೂಡ್ಸ್ ಶೆಡ್ ರಸ್ತೆ, ಶಿವಾನಂದ ವೃತ್ತ, ರೇಸ್ ಕೋರ್ಸ್ ರಸ್ತೆ, ಆನಂದರಾವ್ ವೃತ್ತ, ಫ್ರೀಂಡಂ ಪಾರ್ಕ್, ಗಾಂಧಿನಗರ, ಮೈಸೂರು ಬ್ಯಾಂಕ್ ವೃತ್ತ, ರೈಲ್ವೆ ನಿಲ್ದಾಣ, ಶ್ರೀರಾಮಪುರ ವ್ಯಾಪ್ತಿಯಲ್ಲಿ ಜಾಮ್ ಆಗಿದೆ.

ತ್ರಿಕೋನ ಲವ್ ಸ್ಟೋರಿ: ಬೆಂಗಳೂರು ಕಾಲೇಜಿನಲ್ಲೇ ವಿದ್ಯಾರ್ಥಿ ಬರ್ಬರ ಹತ್ಯೆ!

ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ಆಗಿದ್ದು ವಾಹನಗಳು ಮುಂದೆ ಸಾಗಲು ಸಾಧ್ಯವಾಗದೆ ನಿಂತಲ್ಲೇ ಇವೆ. ಸವಾರರು ಪರಿತಪಿಸುತ್ತಿದ್ದಾರೆ. ಹಾಗಾಗಿ ಈ ರಸ್ತೆಗಳನ್ನು ಆದಷ್ಟು ಅವಾಯ್ಡ್ ಮಾಡುವುದು ಉತ್ತಮ.  ಟ್ರಾಫಿಕ್ ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.