ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಗಣೇಶ ಉತ್ಸವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. 

ತುಮಕೂರು(ಸೆ.14) : ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ರೀತಿಯ ಗಲಾಟೆಗಳು ಆಗದಂತೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿರಾ ನಗರದಲ್ಲಿ ಸೆ.15ರಂದು ನಡೆಯಲಿರುವ ಗಣಪತಿ ಮೂರ್ತಿಗಳ ವಿಸರ್ಜನಾ ಮಹೋತ್ಸವದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ನಗರದ 5 ಕಿಮೀ ವ್ಯಾಪ್ತಿಯಲ್ಲಿ ಒಣ ದಿನವೆಂದು ಘೋಷಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ಮದ್ಯ ಮಾರಾಟ, ಸಾಗಣೆ ನಿಷೇಧಿಸಿ ಡಿಸಿ ಡಾ.ಕೆ.ರಾಕೇಶ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಸೆ.14ರ ಸಂಜೆ 6 ರಿಂದ ಸೆ.16ರ ಬೆ. 6ರವರೆಗೆ ಜಾರಿಯಲ್ಲಿರುತ್ತದೆ.