ಶಿವಮೊಗ್ಗ [ಜ.14]: ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮದಲ್ಲಿ ಇರುವ ಪ್ರಸಿದ್ಧ ಅಯ್ಯಪ್ಪ ಸ್ವಾಮಿ  ದೇಗುಲದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಅದ್ದೂರಿ ಜಾತ್ರಾ ಮಹೋತ್ಸವ ನಡೆಯಲಿದೆ. 

ಪ್ರತೀ ವರ್ಷವೂ ಕೂಡ ಇಲ್ಲಿರುವ ಅಯ್ಯಪ್ಪ ಸ್ವಾಮೀ ದೇಗುಲದಲ್ಲಿ ಸಾವಿರಾರು ಭಕ್ತರು ಸೇರಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುತ್ತಾರೆ. 

ಈ ಬಾರಿಯೂ ಇಲ್ಲಿ ಅಯ್ಯಪ್ಪ ಸ್ವಾಮಿ ಧಾರ್ಮಿಕ ಉತ್ಸವ ನಡೆಯಲಿದ್ದು,  ಇದರ ಅಂಗವಾಗಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ಇಂದು ರಾತ್ರಿ 10ರವರೆಗೆ ಮದ್ಯ  ಮಾರಾಟ ಹಾಗೂ ಪ್ರಾಣಿವಧೆ ನಿಷೇಧಿಸಿ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.