ತುಳು ಅಧಿಕೃತ ಭಾಷೆ ಆಗಿಸಲು ಸಾಹಿತಿಗಳ ಬಂಬಲ ಅಗತ್ಯ: ಕತ್ತಲ್‌ಸಾರ್
ಸಾಹಿತ್ಯ ಕ್ಷೇತ್ರದಲ್ಲಿ ಚುಟುಕು ಸಾಹಿತ್ಯವೂ ತನ್ನದೇ ಆದ ಮಹತ್ವ ಪಡೆದಿದೆ. ತುಳು ರಾಜ್ಯದ ಅಧಿಕೃತ ಭಾಷೆಯಾಗಲು ಚುಟುಕು ಸಾಹಿತಿಗಳೂ ಬೆಂಬಲ ನೀಡಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಮನವಿ ಮಾಡಿದೆರು
ಮಂಗಳೂರು,(ಜು.25) : ಸಾಹಿತ್ಯ ಕ್ಷೇತ್ರದಲ್ಲಿ ಚುಟುಕು ಸಾಹಿತ್ಯವೂ ತನ್ನದೇ ಆದ ಮಹತ್ವ ಪಡೆದಿದೆ. ವಿಡಂಬನೆಯ ಮೂಲಕ ಸಮಾಜದಲ್ಲಿರುವ ತಪ್ಪುಗಳನ್ನು ಹೇಳುವ ಕೆಲಸವನ್ನೂ ಚುಟುಕಗÜಳು ಮಾಡುತ್ತವೆ. ತುಳುವನ್ನು ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿಸುವ ನಿಟ್ಟಿನಲ್ಲಿ ಚುಟುಕು ಸಾಹಿತಿಗಳೂ ಬೆಂಬಲ ನೀಡಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಹೇಳಿದ್ದಾರೆ.
ನಗರದ ಉರ್ವಸ್ಟೋರ್‌ನ ತುಳು ಭವನ(Tulu bhavan)ದಲ್ಲಿ ಭಾನುವಾರ ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಮಂಗಳೂರು(Mangaluru) ತಾಲೂಕು ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ತುಳು ಸಾಹಿತ್ಯ ಅಕಾಡೆಮಿ(Tulu Sahitya academy) ಸಹಯೋಗ ಮತ್ತು ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ಸಹಕಾರದಲ್ಲಿ ದ.ಕ ಜಿಲ್ಲಾ 9ನೇ ಚುಟುಕು ಸಾಹಿತ್ಯ ಸಮ್ಮೇಳನ, ವೈವಿಧ್ಯ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿಷತ್‌ನ ಲೋಗೋ ಅನಾವರಣಗೊಳಿಸಿ ಅವರು ಮಾತನಾಡಿದರು.
IndiGo Airlines Flight : ಇಂಡಿಗೋ ವಿಮಾನದಲ್ಲಿ ತುಳು ಅನೌನ್ಸ್‌ಮೆಂಟ್!
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅಲೆಮಾರಿ/ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ(Raveendra Shetty)ಉಳಿದೊಟ್ಟು, ಚುಟುಕುಗಳು ನಾಲ್ಕು ಸಾಲುಗಳಲ್ಲಿ ಮುಗಿಯುತ್ತದೆ. ಆದರೆ ಅದನ್ನು ಬರೆಯುವುದು ಬಹಳ ಕಷ್ಟದ ಕೆಲಸ. ಅಂತಹ ಕಲ್ಪನೆ, ಪ್ರಾಸ ಬರಲು ಸಾಕಷ್ಟುಓದು ಅಗತ್ಯ. ಆದರಿಂದಾಗಿ ನಾಲ್ಕು ಸಾಲಿನಲ್ಲಿ ಅರ್ಥಗರ್ಭಿತ ವಿಚಾರಗಳನ್ನು ಹೇಳಲು ಸಾಧ್ಯ ಎಂದರು.
ಸಾಹಿತಿ ಶ್ರೀಕೃಷ್ಣಯ್ಯ ಅನಂತಪುರ ಸಮ್ಮೇಳನಾಧ್ಯಕ್ಷತೆ ವಹಿಸಿದ್ದರು.
ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ನೀಡಿ: ತುಳುನಾಡಿನಲ್ಲಿ ಟ್ವಿಟ್ಟರ್ ಅಭಿಯಾನ
ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಸಂಚಾಲಕ ಡಾ. ಎಂ.ಜಿ.ಆರ್. ಅರಸ್, ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ಅಧ್ಯಕ್ಷ ಡಾ.ಮಂಜುನಾಥ ಎಸ್.ರೇವಣಕರ್, ಉದ್ಯಮಿ ನಾರಾಯಣ ಮೂಳೂರು, ಪರಿಷತ್ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ಚುಟುಕು ಸಾಹಿತ್ಯ ಪರಿಷತ್ ಮೈಸೂರು ಜಿಲ್ಲಾಧ್ಯಕ್ಷೆ ಡಾ.ರತ್ನಾ ಹಾಲಪ್ಪ, ಮೈಸೂರು ತಾಲೂಕು ಅಧ್ಯಕ್ಷ ನಟರಾಜ್, ಶ್ರೀ ವಿನಾಯಕ ಮಿತ್ರ ಮಂಡಳಿ ಅಧ್ಯಕ್ಷ ಚಂದ್ರಹಾಸ ಪಕ್ಷಿಕೆರೆ ಇದ್ದರು.
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಸ್ವಾಗತಿಸಿದರು. ಸಮ್ಮೇಳನ ಸದಸ್ಯ ಸಂಚಾಲಕ ನರೇಂದ್ರ ಕೆರೆಕಾಡು ವಂದಿಸಿದರು. ಮಂಜುಳಾ ಶೆಟ್ಟಿನಿರೂಪಿಸಿದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಗೌರವ ಸನ್ಮಾನ ನೆರವೇರಿಸಲಾಯಿತು. ಚುಟುಕು ಕವಿಗೋಷ್ಠಿ, ಬಹುಭಾಷಾ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುದ್ರೋಳಿ ಗಣೇಶ್ ಅವರಿಂದ ಹರಿಕಥಾ ಶೈಲಿಯ ಜಾದೂ ಪ್ರದರ್ಶನ, ಜಗದೀಶ್ ಡಿ.ಕೆ.ಅವರಿಂದ ಹಾಸ್ಯ ರಂಜನೆ, ಸನಾತನ ನಾಟ್ಯಾಲಯದಿಂದ ನಾಟ್ಯಾಂಜಲಿ ಕಾರ್ಯಕ್ರಮ ಪ್ರಸ್ತುತಗೊಂಡಿತು.