Asianet Suvarna News Asianet Suvarna News

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ : ಮತ ಎಣಿಕೆ ಆರಂಭ

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ರಾಜ್ಯ 409 ವಾರ್ಡುಗಳಲ್ಲಿ ಚುನಾವಣೆ ನಡೆದಿದೆ. 

Local Body Election Result To Announce Today
Author
Bengaluru, First Published Nov 14, 2019, 8:09 AM IST

ಬೆಂಗಳೂರು (ನ.14):  ದಾವಣಗೆರೆ, ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ  ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಒಟ್ಟು 409 ವಾರ್ಡ್‌ಗಳಿಗೆ ಮಂಗಳವಾರ ಮತದಾನ ನಡೆದಿದ್ದು, ಗುರುವಾರ ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. 

ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 8ರಿಂದ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಇದಕ್ಕಾಗಿ ರಾಜ್ಯ ಚುನಾವಣಾ ಆಯೋಗವು ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ತಾಲೂಕು ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ಇವಿಎಂಗಳನ್ನು ಇಡಲಾಗಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭದ್ರತೆಯ ನೇತೃತ್ವವನ್ನು ವಹಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಎರಡು ಮಹಾನಗರ ಪಾಲಿಕೆಯ 105, ಆರು ನಗರ ಸಭೆಗಳ 194, ಮೂರು ಪುರಸಭೆಗಳ 69, 3 ಪಟ್ಟಣ ಪಂಚಾಯಿತಿಗಳ 50 ಸೇರಿದಂತೆ 418  ವಾರ್ಡ್‌ಗಳ ಪೈಕಿ 409 ವಾರ್ಡ್‌ಗಳಿಗೆ ಚುನಾವಣೆ ನಡೆದಿದೆ.

Follow Us:
Download App:
  • android
  • ios