ರಾತ್ರಿ ರಾತ್ರಿ ತಲೆ ಎತ್ತಿದ ಅಂಬೇಡ್ಕರ್ ಪ್ರತಿಮೆ
ಅರಣ್ಯ ಭೂಮಿಯಲ್ಲಿ ರಾತ್ರೋ ರಾತ್ರಿ ಮೂಲ ನಿವಾಸಿಗಳು ಅಂಬೇಡ್ಕರ್ ಪ್ರತಿಮೆ ನಿರ್ಮಿಸಿ ಪ್ರತಿಭಟನೆ ಮಾಡುತ್ತಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು (ಡಿ.03): ರಾತ್ರೋ ರಾತ್ರಿ ಅರಣ್ಯ ಜಾಗದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
"
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯ ಅರಿಶಿಣಗುಪ್ಪೆ ಗ್ರಾಮದ ಸರ್ವೆ ನಂ 52ರಲ್ಲಿ ಗುಡಿಸಲು ನಿರ್ಮಿಸಿ ಅಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲಾಗಿದೆ.
ಅರಣ್ಯ ಇಲಾಖೆಯು ಇಲ್ಲಿನ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದೆ ಎಂದು ಆರೋಪಿಸಿ ಮೂಲ ನಿವಾಸಿಗಳಾದ ತಮಗೆ ಇಲ್ಲಿ ನಿವೇಶನ ಮಂಜೂರು ಮಾಡುವಂತೆ ಆಗ್ರಹಿಸಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸ್ಥಳದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಿದ್ದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಸ್ಥಳದಲ್ಲಿ ಪೊಲೀಸ್ ಇಲಾಖೆ ಬೀಡುಬಿಟ್ಟಿದ್ದು, ಜಿಲ್ಲಾಧಿಕಾರಿ, ಎಸ್ಪಿ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದ್ದಾರೆ.