Mysuru : ನ.12 ರಂದು ಬೃಹತ್ ಲೋಕ ಅದಾಲತ್
ಮೈಸೂರು ನಗರ ಮತ್ತು ಜಿಲ್ಲೆಯ ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಬಗೆಹರಿಸಲು ನ.12 ರಂದು ವರ್ಷದ ಕೊನೆಯ ಹಾಗೂ ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಲ್. ರಘುನಾಥ್ ತಿಳಿಸಿದರು.
ಮೈಸೂರು (ಅ.15): ಮೈಸೂರು ನಗರ ಮತ್ತು ಜಿಲ್ಲೆಯ ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಬಗೆಹರಿಸಲು ನ.12 ರಂದು ವರ್ಷದ ಕೊನೆಯ ಹಾಗೂ ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಲ್. ರಘುನಾಥ್ ತಿಳಿಸಿದರು.
ಜಯ ನಗರದಲ್ಲಿರುವ ನ್ಯಾಯಾಲಯದ (Court) ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನ್ಯಾಯಾಲಯಗಳಲ್ಲಿ ಒಟ್ಟು 112443 ಪ್ರಕರಣಗಳು ವಿಚಾರಣೆಗೆ ಬಾಕಿಯಿವೆ. ಈ ಪೈಕಿ 59555 ಸಿವಿಲ್ (Civil) ಪ್ರಕರಣಗಳು ಹಾಗೂ 52888 ಕ್ರಿಮಿನಲ್ ಪ್ರಕರಣಗಳಾಗಿವೆ. ಇವುಗಳಲ್ಲಿ 38752 ಪ್ರಕರಣಗಳು ಇತ್ಯರ್ಥವಾಗುವ ಸಾಧ್ಯತೆಯಿದೆ. ಈಗಾಗಲೆ 15852 ಪ್ರಕರಣಗಳನ್ನು ರಾಜಿ ಆಗುವ ಸಾಧ್ಯತೆ ಇರುವ ಪ್ರಕರಣಗಳೆಂದು ಗುರುತಿಸಲಾಗಿದೆ ಎಂದರು.
ರಾಜಿಯಾಗಬಲ್ಲ ಪ್ರಕರಣಗಳು:
ಮೋಟಾರು ವಾಹನ ಅಪಘಾತಕ್ಕೆ ಸಂಬಂಧಿಸಿದ 3954 ಪ್ರಕರಣಗಳು, ರಾಜಿಯಾಗಬಹುದಾದ 2533 ಕ್ರಿಮಿನಲ್ ಪ್ರಕರಣಗಳು, 22649 ಚೆಕ್ ಬೌನ್ಸ್ ಪ್ರಕರಣಗಳಿದ್ದು, ಇದರಲ್ಲಿ 4418 ಪ್ರಕರಣಗಳು ಹಾಗೂ 742 ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 11647 ಪ್ರಕರಣಗಳನ್ನು ರಾಜಿಯಾಗಬಲ್ಲ ಪ್ರಕರಣಗಳೆಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.
ಎಂಡಿಎ ಭೂ ಸ್ವಾದೀನಕ್ಕೆ ಸಂಬಂಧಿಸಿದ 250 ಪಕ್ರಕರಣಗಳಿದ್ದು, ಎಂಡಿಎ ಆಯುಕ್ತರು ಪರಿಹಾರ ನೀಡಲು ಸಿದ್ಧರಿದ್ದಾರೆ. 20 ಲಕ್ಷದೊಳಗೆ ಭೂ ಪರಿಹಾರ ನೀಡಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸರ್ಕಾರ ಸೂಚಿಸಿದ್ದು, ಅಂತಹ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಲೋಕ ಅದಾಲತ್‌ನಿಂದ ವ್ಯಾಜ್ಯವನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ, ಶೀಘ್ರವಾಗಿ ಪರಿಹರಿಸಿಕೊಳ್ಳಬಹುದು. ಇಲ್ಲಿ ರಾಜಿಯಾದ ಪ್ರಕರಣಗಳಲ್ಲಿ ಮಾಡಿದ ಆದೇಶಕ್ಕೆ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸುವ ಪ್ರಕರಣದಲ್ಲಿ ನೀಡಿದ ಆದೇಶದಷ್ಟೇ ಮಹತ್ವ ಇರುತ್ತದೆ. ಸಮಯ ಉಳಿಯುವ ಜತೆಗೆ ಕಕ್ಷಿದಾರರ ಮಧ್ಯದ ಸಂಬಂಧ ಚೆನ್ನಾಗಿ ಉಳಿಯುತ್ತದೆ. ಯಾವುದೇ ಕೋರ್ಚ್ ಫೀಸ್ ಕಟ್ಟಬೇಕಿಲ್ಲ. ಪಕ್ಷಗಾರರು ನೇರವಾಗಿ ಭಾಗವಹಿಸಬಹುದು. ಪ್ರಕರಣ ರಾಜಿಯಾದಲ್ಲಿ ಶೇ.100 ರಷ್ಟುನ್ಯಾಯಾಲಯ ಶುಲ್ಕ ಹಿಂದಿರುಗಿಸಲಾಗುವುದು. ಲೋಕ ಅದಾಲತ್ ಆದೇಶ ವಿರುದ್ಧ ಮೇಲ್ಮನವಿಗೆ ಅವಕಾಶ ಇರುವುದಿಲ್ಲ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ ಭೂತೆ, ವಕೀಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯದರ್ಶಿ ಎಸ್. ಉಮೇಶ್ ಇದ್ದರು.
ಚಪ್ಪಲಿ ತೋರಿದ :
ದಂಡ ವಿಧಿಸಿದ ಕಾರಣಕ್ಕೆ ನ್ಯಾಯಾಧೀಶರ ಮೇಲೆ ಚಪ್ಪಲಿ ತೂರಿದ ಆರೋಪಿಯೊಬ್ಬನನ್ನು ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ನಗರದ ಅರವಿಂದ ನಗರ ಬಡಾವಣೆ ನಿವಾಸಿ ಲೋಕೇಶ್ ಬಂಧಿತ ಆರೋಪಿಯಾಗಿದ್ದಾನೆ. ಮದ್ಯ ಸೇವಿಸಿದ್ದ ಆರೋಪಿ ಏಕಾಏಕಿ ಒಂದನೇ ಹೆಚ್ಚುವರಿ ಕಿರಿಯ ಶ್ರೇಣಿಯ ಕೋರ್ಟ್‌ಗೆ ನುಗ್ಗಿ ನ್ಯಾಯಾಧೀಶರತ್ತ ಚಪ್ಪಲಿ ತೂರಿದ್ದಾನೆ.
ಡ್ರಿಂಕ್ ಅಂಡ್ ಡ್ರೈವ್ ಕೇಸ್‌ನಲ್ಲಿ ದಂಡ ಕಟ್ಟಿದ್ದ ಆರೋಪಿ: ಕಳೆದ ಒಂದು ತಿಂಗಳ ಹಿಂದೆ ಡ್ರಿಂಕ್ ಅಂಡ್ ಡ್ರೈವ್ ಮಾಡುವಾಗ ಆರೋಪಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ. ಪೊಲೀಸರು ಆತನಿಗೆ ಕೋರ್ಟ್‌ನಲ್ಲಿ ದಂಡ ಕಟ್ಟುವಂತೆ ಸೂಚಿಸಿದ್ದರು. ಆತ ಕೋರ್ಟ್‌ನಲ್ಲಿ ದಂಡವನ್ನೂ ಕಟ್ಟಿದ್ದ. ಆದರೆ ಇದಾದ ಒಂದು ತಿಂಗಳ ಬಳಿಕ ಇಂದು ಕೋರ್ಟಿಗೆ ಕುಡಿದು ಬಂದಿದ್ದ ಆತ ಜಡ್ಜ್ ಮೇಲೆ ಚಪ್ಪಲಿ ತೂರಿದ್ದಾನೆ. ಈ ವೇಳೆ ನಾನೇನು ತಪ್ಪು ಮಾಡಿದ್ದೇನೆ, ದಂಡ ಹಾಕಿದ್ದು ಏಕೆ ಎಂದು ಕೂಗಾಡಿದ್ದಾನೆ. ಕೂಡಲೇ ಅಲ್ಲೇ ಇದ್ದ ನಗರ ಠಾಣೆ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಆರೋಪಿ ಲೋಕೇಶನ ಈ ವರ್ತನೆ ನೋಡಿದ ಕೂಡಲೇ ಕೋರ್ಟಿನಲ್ಲಿದ್ದ ವಕೀಲರು ಕೂಡ ಆತನ ವಿರುದ್ದ ಆಕ್ರೋಶ ಹೊರಹಾಕಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹಳಿಯೂರು ಸುಧಾಕರ್ ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ.
ಭ್ರಷ್ಟಮುಕ್ತ ಸಮಾಜ ನಿರ್ಮಾಣ ಆಗಬೇಕು: ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಸಲಹೆ
ಸರಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ: ಮನೆಕಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ ಆರೋಪಿಯನ್ನು ಮೈಸೂರಿನ ಅಶೋಕಪುರಂ ಠಾಣೆಯ ಪೊಲೀಸರು ಬಂಧಿಸಿ, . 18.16 ಲಕ್ಷ ಮೌಲ್ಯದ 305 ಗ್ರಾಂ ಚಿನ್ನದ ಆಭರಣಗಳು, 1200 ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಬೈಕ್ ಮತ್ತು ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ. ಅಶೋಕಪುರಂ ಠಾಣೆಯಲ್ಲಿ ದಾಖಲಾಗಿದ್ದ ಕನ್ನಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ ಪೊಲೀಸರು, ಒಬ್ಬ ಆರೋಪಿಯನ್ನು ಬಂಧಿಸಿ ವಿಚಾರಣೆ ಮಾಡಿದಾಗ ಆರೋಪಿಯು ತಾನು ಇತರೆ ತಲೆ ಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಜೊತೆಗೂಡಿ ಮೈಸೂರು ನಗರ ಹಾಗೂ ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಮನೆಕಳ್ಳತನ ಮತ್ತು ಸರಗಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.