ಪರೀತ ಬಿಸಿಲಿಗೆ ಚುನಾವಣಾ ಕರ್ತವ್ಯನಿರತ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯಲ್ಲಿ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.

ಬೀದರ್ (ಮೇ.6): ವಿಪರೀತ ಬಿಸಿಲಿಗೆ ಚುನಾವಣಾ ಕರ್ತವ್ಯನಿರತ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯಲ್ಲಿ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.

ನಿರ್ಣಾ ಗ್ರಾಮದ ರೈತ ಸಂಪರ್ಕ ಕಚೇರಿ ಸಹಾಯಕ ಕೃಷಿ ಅಧಿಕಾರಿ ಆನಂದ್(32) ಮೃತ ದುರ್ದೈವಿ. ಲೋಕಸಭಾ ಚುನಾವಣೆ ಹಿನ್ನೆಲೆ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದರು. ಇಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗಿನ ಶಿಫ್ಟ್‌ನಲ್ಲಿದ್ದ ಅಧಿಕಾರಿ. ವಿಪರೀತ ಬಿಸಿಲು ಬಿಸಿ ಗಾಳಿಗೆ ವಾಂತಿ ಆಗಿ ತೀವ್ರ ಅಸ್ವಸ್ಥಗೊಂಡಿದ್ದ ಅಧಿಕಾರಿ. ಅಸ್ವಸ್ಥರಾಗಿದ್ದ ಅಧಿಕಾರಿಯನ್ನ ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದ ಸಿಪಿಐ ಶ್ರೀನಿವಾಸ ಅಲ್ಲಾಪುರೆ. ಕೋಡಂಬಲ್ ಚೆಕ್‌ಪೋಸ್ಟ್‌ನಿಂದ ಹುಮನಾಬಾದ್ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತರಾಗಿದ್ದಾರೆ.

ವರನ ಸ್ನೇಹಿತರಿಗೆ ಊಟದಲ್ಲಿ ಸಿಗದ ಸ್ವೀಟ್, ಮುರಿದುಬಿತ್ತು ಮದುವೆ!

ಬೀದರ್‌ ಲೋಕಸಭಾ ಚುನಾವಣೆಗೆ ಸರ್ವ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿ

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಮತದಾನ ಇದೆ ಮೇ 7ರಂದು ನಡೆಯಲಿದ್ದು ಇದಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಶನಿವಾರ ಬೀದರ್‌ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ತಯಾರಿ ಕುರಿತಂತೆ ಅವರು ಮಾಹಿತಿ ನೀಡಿದರು.

ಭಾನುವಾರ ಸಂಜೆ 6 ಗಂಟೆಯಿಂದ ನಿಶಬ್ಧ ಅವಧಿ ಆರಂಭವಾಗುವುದರಿಂದ ಬಹಿರಂಗ ಪ್ರಚಾರ ಅಂತ್ಯಗೊಳ್ಳುತ್ತದೆ. ವೇದಿಕೆ ಕಾರ್ಯಕ್ರಮ, ಮೆರವಣಿಗೆ, ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಅಭ್ಯರ್ಥಿಯು ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದಾಗಿದೆ. ಅದಕ್ಕಾಗಿ ಕಲಂ 144 ಜಾರಿಯಲ್ಲಿ ಇರಲಿದ್ದು, ಇಂದು ಸಂಜೆ 6ರಿಂದ ಮದ್ಯದಂಗಡಿಗಳು ಮುಚ್ಚಲ್ಪಡುತ್ತವೆ. ಬೀದರ್‌ ಲೋಕಸಭಾ ಕ್ಷೇತ್ರದ ಮತದಾರರಲ್ಲದವರು ಪ್ರಚಾರಕ್ಕಾಗಿ ಬಂದವರು ಕ್ಷೇತ್ರಬಿಟ್ಟು ತೆರಳಬೇಕು ಎಂದು ಸೂಚಿಸಿದರು.

ನಿಶಬ್ಧ ಅವಧಿಯಲ್ಲಿ ಪತ್ರಿಕೆಯಲ್ಲಿ ಜಾಹೀರಾತು ನೀಡಬೇಕಾದಲ್ಲಿ ಜಿಲ್ಲಾ ಎಂಸಿಎಂಸಿ ತಂಡದ ಅನುಮತಿ ಪಡೆಯಬೇಕು. ಒಬ್ಬ ಅಭ್ಯರ್ಥಿಗೆ ಒಟ್ಟು ಹತ್ತು ವಾಹನಗಳಿಗೆ ಮಾತ್ರ ಪ್ರಚಾರಕ್ಕೆ ಅನುಮತಿ ನೀಡಲಾಗುತ್ತದೆ. ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಚೆಕ್‌ ಪೋಸ್ಟ್‌ಗಳು ನಿರಂತರವಾಗಿ ಕೆಲಸ ಮಾಡುತ್ತಿವೆ ಹಾಗೂ ಪ್ಲಾಯಿಂಗ್‌ ಸ್ಕ್ವಾಡ್‌ಗಳು ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ಬಿರು ಬಿಸಿಲಿನ ಮಧ್ಯೆ ಬಿಸಿ ಏರಿದ ಬೀದರ್ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಖೂಬಾಗೆ ಸಚಿವ ಖಂಡ್ರೆ ಮಗ ಸವಾಲ್!

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,92,962 ಜನ ಮತದಾರರಿದ್ದು, 18 ಅಭ್ಯರ್ಥಿಗಳು ಹಾಗೂ ಒಂದು ನೋಟಾ ಸೇರಿ ಒಟ್ಟು 19 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಸಖಿ ಪಿಂಕ್‌ ಮತಗಟ್ಟೆ, ಒಂದು ಯುವ ಮತಗಟ್ಟೆ, ಒಂದು ವಿಶೇಷ ಚೇತನರ ಮತಗಟ್ಟೆ ಹಾಗೂ ಒಂದು ವಿಷಯಾಧಾರಿತ ವಿಶೇಷ ಮತಗಟ್ಟೆ ಇರಲಿದೆ ಎಂದು ತಿಳಿಸಿದರು.
324 ಕ್ರಿಟಿಕಲ್‌ ಮತಗಟ್ಟೆ ಇರಲಿವೆ. 120 ವಿಡಿಯೋಗ್ರಾಫರ್‌ ಹಾಗೂ 150 ಮೈಕ್ರೊ ಅಬ್ಸರ್ವರ್‌ಗಳು ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.