ದ.ಕ ಜಿಲ್ಲೆಯ ಮರಳು ಅಡ್ಡೆಗಳಿಗೆ ಲೋಕಾಯುಕ್ತ ದಾಳಿ: 40 ಲಕ್ಷ ಮೌಲ್ಯದ ಸೊತ್ತು ವಶ
ದಕ್ಷಿಣ ಕನ್ನಡ ಜಿಲ್ಲೆಯ ಹಲವಡೆ ಅಕ್ರಮ ಮರಳು ಅಡ್ಡೆಗಳಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ದ.ಕ ಜಿಲ್ಲೆಯ ಮುಲ್ಕಿ, ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಮಂಗಳೂರು (ಡಿ.9): ದಕ್ಷಿಣ ಕನ್ನಡ ಜಿಲ್ಲೆಯ ಹಲವಡೆ ಅಕ್ರಮ ಮರಳು ಅಡ್ಡೆಗಳಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ದ.ಕ ಜಿಲ್ಲೆಯ ಮುಲ್ಕಿ, ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಲಾರಿ, ಟಿಪ್ಪರ್, ಜೆಸಿಬಿ ಮತ್ತು ಮರಳು ಸಹಿತ 40 ಲಕ್ಷ ಮೌಲ್ಯದ ಸೊತ್ತುಗಳು ವಶಕ್ಕೆ ಪಡೆಯಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸಿ ಮೂರು ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್ಪಿಗಳಾದ ಕಲಾವತಿ, ಚಲುವರಾಜು ಮತ್ತು ಇನ್ಸ್ಪೆಕ್ಟರ್ ಅಮಾನುಲ್ಲಾ ನೇತೃತ್ವದ 03 ತಂಡಗಳನ್ನು ರಚಿಸಿ ದಾಳಿ ನಡೆಸಲಾಗಿದೆ. ಇನ್ನು ಅನೇಕ ಕಡೆಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ಮತ್ತು ನಿಯಮ ಮಾಡುತ್ತಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅಕ್ರಮ ಮರಳುಗಾರಿಕೆಯಿಂದ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದ್ದು, ಗಣಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷತನದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಎಸ್ಪಿ ಲಕ್ಷ್ಮೀಗಣೇಶ್ ತಿಳಿಸಿದ್ದಾರೆ.
ಲೋಕಾಯುಕ್ತ ಫೋನ್ ಇನ್: ಹಲವು ದೂರಿನ ಕರೆ!
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಗೆ ಸರಕಾರಿ ಕೆಲಸಗಳಲ್ಲಿ ವಿಳಂಬ, ಲಂಚದ ಬೇಡಿಕೆ ಮತ್ತು ಭ್ರಷ್ಟಾಚಾರದ ಸಂಬಂಧ ದೂರುಗಳಿಗಾಗಿ “ನೇರ ಫೋನ್- ಇನ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರಿಂದ 25 ದೂರು ಕರೆಗಳು ಬಂದಿದ್ದು, ದೂರುಗಳಲ್ಲಿ ಪ್ರಮುಖವಾಗಿ ಕಂದಾಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಮೂಡ ಇಲಾಖೆಗೆ ಸಂಬಂಧಿಸಿದ ದೂರುಗಳು ಇದ್ದವು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
Udupi; ಅಕ್ರಮ ಮರಳು ಅಡ್ಡೆಗೆ ದಾಳಿ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶ
ಅಧಿಕಾರಿಗಳ ದಾಳಿ, ಅಕ್ರಮ ಮರಳು ವಶಕ್ಕೆ
ರಾಣಿಬೆನ್ನೂರು: ಖಚಿತ ಮಾಹಿತಿ ಮೇರೆಗೆ ಗುರುವಾರ ರಾತ್ರಿ ದಾಳಿ ನಡೆಸಿದ ತಹಸೀಲ್ದಾರ್ ಶಂಕರ್ ಜಿ.ಎಸ್. ನೇತೃತ್ವದ ಅಧಿಕಾರಿಗಳ ತಂಡ ತಾಲೂಕಿನ ವಿವಿಧ ಗ್ರಾಮಗಳ ತುಂಗಭದ್ರಾ ನದಿಪಾತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಮೆಡ್ಲೇರಿ ಗ್ರಾಮದಲ್ಲಿ ಸರ್ಕಾರದಿಂದ ಪರವಾನಗಿ ಪಡೆಯದೆ ಅಕ್ರಮವಾಗಿ ಸಂಗ್ರಹ ಮಾಡಲಾಗಿದ್ದ ಸುಮಾರು 14 ಸಾವಿರ ರು. ಮೌಲ್ಯದ 20 ಮೆಟ್ರಿಕ್ ಟನ್ ಮರಳು ಹಾಗೂ ಕೋಣನತಂಬಿಗಿ ಗ್ರಾಮದಲ್ಲಿ 28 ಸಾವಿರ ರು.ಮೌಲ್ಯದ 40 ಮೆಟ್ರಿಕ್ ಟನ್ ಅಕ್ರಮ ಮರಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸುವರ್ಣ ನ್ಯೂಸ್ ಇಂಪ್ಯಾಕ್ಟ್: ಉಳ್ಳಾಲದ ಮರಳು ದಂಧೆಕೋರರ ವಿರುದ್ದ ಎಫ್ಐಆರ್!
ಉಪ ತಹಸೀಲ್ದಾರ್ ಶಾಮ ಗೊರವರ, ಕಂದಾಯ ವೃತ್ತ ನಿರೀಕ್ಷಕ ವಾಗೀಶ ಮಳೇಮಠ, ಗ್ರಾಮ ಆಡಳಿತಾಧಿಕಾರಿಗಳಾದ ಕಿರಣ ಕುರವತ್ತಿ, ಅಕ್ಷತಾ ಎಂ. ದಾಳಿಯಲ್ಲಿ ಪಾಲ್ಗೊಂಡಿದ್ದರು.