5 ಬಾಣಂತಿಯರ ಬಲಿ ಪಡೆದ ಬಳ್ಳಾರಿ ಆಸ್ಪತ್ರೆಗೆ ಲೋಕಾಯುಕ್ತ ದಾಳಿ

ಬಾಣಂತಿಯರ ಸಾವಿನ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ದಾಳಿ ನಡೆಸಲಾಗಿದೆ. ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಜಿಲ್ಲಾಸತ್ರೆಗೆ, ಬಿಮ್‌ಗೆ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ್‌ ಹಾಗೂ ಸಿಪಿಐ ಮಹ್ಮದ್ ರಫೀಕ್ ನೇತೃತ್ವದ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

Lokayukta Raid on Ballari Hospital after 5 Maternal Death grg

ಬಳ್ಳಾರಿ(ಡಿ.08):  ಬಾಣಂತಿಯರ ಸರಣಿ ಸಾವಿನ ಪ್ರಕರಣದ ಮೂಲಕ ರಾಜ್ಯದ ಗಮನ ಸೆಳೆದಿರುವ ಸ್ಥಳೀಯ ಜಿಲ್ಲಾಸತ್ರೆ, ಬಿಮ್ಸ್‌ ಆಸತ್ರೆ ಹಾಗೂ ಜಿಲ್ಲಾ ಔಷಧಿ ಉಗ್ರಾಣಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಶನಿವಾರ ದಿಢೀರ್ ದಾಳಿ ನಡೆಸಿದೆ. 

ಬಾಣಂತಿಯರ ಸಾವಿನ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ದಾಳಿ ನಡೆಸಲಾಗಿದೆ. ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಜಿಲ್ಲಾಸತ್ರೆಗೆ, ಬಿಮ್‌ಗೆ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ್‌ ಹಾಗೂ ಸಿಪಿಐ ಮಹ್ಮದ್ ರಫೀಕ್ ನೇತೃತ್ವದ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

ಬಾಣಂತಿಯರ ಸಾವಿನ ಪ್ರಕರಣದ ದಾಖಲೆ ಪರಿಶೀಲಿಸಿ ಅದನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಬಾಣಂತಿಯರಿಗೆ ನೀಡಿರುವ ಔಷಧಿಯೂ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಅನೇಕ ದಾಖಲೆಗಳನ್ನು ಕೂಡಾ ಲೋಕಾಯುಕ್ತ ಅಧಿ ಕಾರಿಗಳು ಜಪ್ತಿ ಮಾಡಿದ್ದಾರೆ. ಅಲ್ಲದೆ ಬಾಣಂತಿಯರ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಲಾದ ನಿರ್ದಿಷ್ಟ ಬ್ಯಾಚ್‌ನ ಔಷಧಿ (ರಿಂಗರ್ ಲ್ಯಾಕ್ಟೇಟ್ ದ್ರಾವಣ) ಸ್ಯಾಂಪಲ್‌ಗಳನ್ನು ಕೂಡಾ ಅಧಿಕಾರಿಗಳು ಸಂಗ್ರಹಿಸಿದ್ದಾರೆ. 

ದಿಢೀರ್ ದಾಳಿ: 

ಬೆಳಗ್ಗೆ 10.30ರಿಂದ ಸಂಜೆ 4ರ ವರೆಗೆ ಬಿಮ್ಸ್ ಆಸ್ಪತ್ರೆಯಲ್ಲಿ ಅಧಿಕಾರಿಗಳ ಒಂದು ತಂಡ ಪರಿಶೀಲನಾ ಕಾರ್ಯದಲ್ಲಿ ತೊಡಗಿತ್ತು. ಮತ್ತೊಂದು ತಂಡ ಜಿಲ್ಲಾಸ್ಪತ್ರೆಯಲ್ಲಿ ಸಂಜೆ 6.30ರ ವರೆಗೆ ಪರಿಶೀಲನೆ ಹಾಗೂ ದಾಖಲಾತಿಗಳ ಸಂಗ್ರಹ ಕಾರ್ಯ ನಡೆಸಿತು. ಔಷಧಿ ಉಗ್ರಾಣದಲ್ಲಿನ ಮಾಹಿತಿ ಸಂಗ್ರಹ ಕಾರ್ಯ ಸಂಜೆ 7ರ ವರೆಗೂ ಮುಂದುವರಿದಿತ್ತು. 

20 ಜನರ ತಂಡದಿಂದ ದಾಳಿ: 

ಲೋಕಾಯುಕ್ತ ಮೂರು ತಂಡದಲ್ಲಿ ಎಸ್ಪಿ, ಡಿವೈಎಸ್ಪಿ, ನಾಲ್ವರು ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಒಟ್ಟು 20 ಜನ ಸಿಬ್ಬಂದಿ ಇದ್ದರು. ಹೊಸಪೇಟೆಯಿಂದ ಸಿಬ್ಬಂದಿ ಕರೆಸಿಕೊಳ್ಳಲಾಗಿತ್ತು. ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಬಸಾರೆಡ್ಡಿ, ಬಿಮ್ಸ್‌ ನಿರ್ದೇಶಕ ಡಾ. ಗಂಗಾಧರಗೌಡ ಸೇರಿ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್‌ನ ವೈದ್ಯಾ ಧಿಕಾರಿಗಳ ಸಮ್ಮುಖದಲ್ಲಿಯೇ ದಾಖಲೆ ಪರಿಶೀಲನೆ ಕಾರ್ಯ ನಡೆಯಿತು. 

ನಾಳೆ ವರದಿ ಸಲ್ಲಿಕೆ: 

ದಾಳಿ ಕುರಿತು 'ಕನ್ನಡಪ್ರಭ' ಜೊತೆ ಮಾತನಾಡಿದ ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿದ್ದರಾಜು, ಲೋಕಾಯುಕ್ತರಿಂದ ಶುಕ್ರವಾರ ವಾರೆಂಟ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ, ಜಿಲ್ಲಾಸ್ಪತ್ರೆ, ಬಿಮ್ಸ್ ಆಸ್ಪತ್ರೆ ಹಾಗೂ ಔಷಧಿ ಉಗ್ರಾಣಕ್ಕೆ ತೆರಳಿ ಮಾಹಿತಿ ಸಂಗ್ರಹಿಸಲಾಗಿದೆ. ಈ ಕುರಿತ ವರದಿಯನ್ನು ಸೋಮವಾರ ಲೋಕಾಯುಕ್ತರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: 

ಸಿಎಂ ಬಾಣಂತಿಯರ ಸಾವಿನ ಕುರಿತು ವರದಿ ನೀಡಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆ ಯಲ್ಲಿ ಸಮಿತಿ ರಚಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಕಳಪೆ ಗುಣ ಮಟ್ಟದ ಔಷಧ ಸರಬರಾಜು ಮಾಡಿದ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಿದ್ದು, ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಬಾಣಂತಿ ಸಾವಿನ ಕೇಸು ಮುಚ್ಚಿಹಾಕಲ್ಲ ಈ ವರ್ಷ 347 ಬಾಣಂತಿ ಯರು ಮೃತಪಟ್ಟಿದ್ದು ಯಾವ ಕಾರಣದಿಂದ ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಬಳ್ಳಾರಿ ಘಟನೆ ಕುರಿತು ಒಂದು ಸಮಿತಿ ಈಗಾಗಲೇ ತನಿಖೆ ನಡೆಸುತ್ತಿದ್ದು, ತನಿಖೆಗೆ ಇನ್ನೊಂದು ತಂಡ ಕಳಿಸಲಾಗುವುದು. ಬಾಣಂತಿಯರ ಸಾವು ಪ್ರಕರಣ ಮುಚ್ಚಿ ಹಾಕಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಕಳಪೆ ಔಷಧ ಯಾಕೆ ಕೊಟ್ರಿ, ಬಾಣಂತಿಯರ ಸಾವು ಸಾಮಾನ್ಯ ಸಂಗತಿ ಏನು?: ಸಿದ್ದರಾಮಯ್ಯ ಕಿಡಿ

ಆಸ್ಪತ್ರೆಯ ಮುಂದೆ ಬಿಜೆಪಿಗರ ಸತ್ಯಾಗ್ರಹ 

ಬಳ್ಳಾರಿ: ಬಾಣಂತಿಯರ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಜಿ. ಶ್ರೀರಾಮುಲು ನೇತೃತ್ವದಲ್ಲಿ ಜಿಲ್ಲಾಸ್ಪತ್ರೆ ಬಳಿ ಬಿಜೆಪಿ ಮುಖಂಡರು ಶನಿವಾರ ಉಪವಾಸ ಸತ್ಯಾಗ್ರಹ ನಡೆಸಿದರು. ಜೊತೆಗೆ ತಪ್ಪಿಸರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು

ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಕೂಡ್ಲಿಗಿ: ಬಳ್ಳಾರಿಯಲ್ಲಿ ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ 2 ಲಕ್ಷ ಪರಿಹಾರ ಘೋಷಿಸಿದ್ದು, ಹೆಚ್ಚಿನ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸ ಲಾಗುವುದು. ಈ ವಿಷಯವನ್ನು ಅಧಿವೇಶನ ದಲ್ಲೂ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದೇ ವೇಳೆ ಮೃತ ಸುಮಯ್ಯಾ ಬಾನು, ಮಹಾಲಕ್ಷ್ಮಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

Latest Videos
Follow Us:
Download App:
  • android
  • ios