ಯಾದಗಿರಿ(ಜ.10): ರಸ್ತೆ ಬದಿಗೆ ನಿಲ್ಲಿಸಲಾಗುವ ಭಾರೀ ವಾಹನಗಳಿಗೆ ಚಿಕ್ಕ ವಾಹನಗಳು ಡಿಕ್ಕಿ ಹೊಡೆದು ಅಪಘಾತವಾಗುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಯಾದಗಿರಿಯಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದಿದೆ.

ನಿಂತಿದ್ದ ಕಬ್ಬಿನ ಲಾರಿಗೆ ಆಟೋ ಡಿಕ್ಕಿಯಾಗಿದೆ. ಯಾದಗಿರಿ ಹೊರವಲಯದ ಗಡೇಸೂರ್ ಗೇಟ್ ಬಳಿ ಘಟನೆ ನಡೆದಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಗರದಲ್ಲಿದ್ದ ಜಿಹಾದಿಗಳ ಪತ್ತೆಗೆ ಸಿಸಿಬಿ ಬಲೆ

ಯಾದಗಿರಿ ನಗರದಿಂದ ವಡಗೇರಾಗೆ ತೆರಳುತ್ತಿದ್ದ ಆಟೋ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಗುದ್ದಿದೆ. ಹಾಲಗೇರಾ ಗ್ರಾಮದ ಪಾಷಾ ಸೇರಿದಂತೆ ಮೂವರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೌರಿ ಹತ್ಯೆ 18ನೇ ಆರೋಪಿ ಸೆರೆ, ಗನ್ ಎಸೆದ ಜಾಗ ಯಾವುದು?