ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದ್ದು, ಇದರಿಂದ ಕಿಲೋ ಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.
ಬಾಗಲಕೋಟೆ (ಡಿ.03): ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದು ಕಿಲೋ ಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ಬಾಗಲಕೋಟೆಯ ರಾಷ್ಟ್ರೀಯ ಹೆದ್ದಾರಿ 55ರಲ್ಲಾಗಿದೆ.
ಬಾಗಲಕೋಟೆಯ ಒಳಕಲ್ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದ್ದು, ಮಹಾರಾಷ್ಟ್ರದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಅಪಘಾತಕ್ಕೆ ಈಡಾಗಿದೆ.
ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅಪಘಾತವಾದ ಸ್ಥಳದಲ್ಲಿ ಲಾರಿಗಳನ್ನು ರಸ್ತೆಯಿಂದ ತೆರವುಗೊಳಿಸಲು ಕ್ರೇನ್ ಗಳನ್ನು ಬಳಸಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ತೆರಳಿದ್ದು, ಕಾರ್ಯಾಚರಣೆ ನಡೆಸಲಾಗಿದೆ.
ಅಪಘಾತದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟೆ ನಿಂತಿದ್ದು ಭಾರೀ ಟ್ರಾಫಿಕ್ ಜಾಮ್ ನಿಂದ ಸವಾರರು ಪರದಾಡುವಂತಾಗಿದೆ.