ಕೊಪ್ಪಳ (ನ.03): ಲಾರಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಘಟನೆ ಕೊಪ್ಪಳದಲ್ಲಾಗಿದೆ. 

ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೊಪ್ಪಳದಿಂದ ಹೊಸಪೇಟೆಗೆ ಹೊರಟಿದ್ದ ಬಸ್ ವೇಗವಾಗಿ ಬಂದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಈ ವೇಳೆ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. 

ಕೊಪ್ಪಳ: ಆಂಧ್ರ, ತೆಲಂಗಾಣಕ್ಕಿಲ್ಲದ ನೀರಿನ ಗೋಳು, ರಾಜ್ಯಕ್ಕೆ ಏಕೆ?...

ಬಸ್ ಹಾಗೂ ಲಾರಿ ನಡುವಿನ ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.