Mangaluru ವಿದ್ಯಾರ್ಥಿನಿ ಆತ್ಮಹತ್ಯೆಗೆ ಲವ್ ಜಿಹಾದ್ ಕಾರಣ: ವಿಎಚ್ ಪಿ ಆರೋಪ

ಬಂಟ್ವಾಳದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಲವ್ ಜಿಹಾದ್ ಕಾರಣ ಎಂದು ವಿಎಚ್ ಪಿ ವಿಭಾಗ ಮಾರ್ಗದರ್ಶಿ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ. 

Love Jihad is the reason for mangaluru  student suicide VHP allegations  gow

ವರದಿ: ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್  

ಮಂಗಳೂರು (ಮೇ.5): ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಲವ್ ಜಿಹಾದ್ ಕಾರಣ ಎಂದು ವಿಎಚ್ ಪಿ ( Vishva Hindu Parishad) ವಿಭಾಗ ಮಾರ್ಗದರ್ಶಿ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ. 

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಆಶ್ಮಿಕಾ ಮನೆಗೆ ವಿಎಚ್ ಪಿ‌ ಮುಖಂಡ ಶರಣ್ ಪಂಪ್ ವೆಲ್ ಭೇಟಿ ನೀಡಿದರು. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆಶ್ಮಿಕಾ(14) ಆತ್ಮಹತ್ಯೆ ಮಾಡಿಕೊಂಡಿದ್ದಳು‌. ಕುಟುಂಬದೊಂದಿಗೆ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

CHIKKAMAGALURU ಕಾರಿಗೆ ಅಪ್ಪಳಿಸಿದ ವಿದ್ಯುತ್ ಕಂಬ, ಕೂದಳೆಲೆ ಅಂತರದಲ್ಲಿ ಪ್ರಯಾಣಿಕರು ಪಾರು

ಬುಧವಾರ ಮನೆಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.‌ ಸ್ಥಳೀಯ ನಿವಾಸಿ ಶಾಹುಲ್ ಹಮೀದ್ ಎಂಬಾತನ ಕಿರುಕುಳದಿಂದ ಆತ್ಮಹತ್ಯೆ ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಶಾಹುಲ್ ಹಮೀದ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಸದ್ಯ ಆರೋಪಿ ಶಾಹುಲ್ ಹಮೀದ್ ತಲೆ ಮರೆಸಿಕೊಂಡಿದ್ದು, ಪೊಲೀಸರು ಬಾಲಕಿಯ ಮೊಬೈಲ್ ಸಹಿತ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಕೆಲ ಮಾಹಿತಿ ಪ್ರಕಾರ ಬಾಲಕಿಯ ಫೋನ್ ನಲ್ಲಿ ಆರೋಪಿಯ ನಂಬರ್ ಪತ್ತೆಯಾಗಿದ್ದು, ಈ ಬಗ್ಗೆ ಮನೆಯವರಿಗೆ ವಿಷಯ ತಿಳಿದಿತ್ತಂತೆ‌. ಇದೇ ಕಾರಣಕ್ಕೆ ಜಗಳ ನಡೆದು ಬಾಲಕಿಗೆ ತಂದೆ ಬೈದು ಬುದ್ದಿ ಹೇಳಿದ್ದರು ಎನ್ನಲಾಗಿದೆ. ಹೀಗಿದ್ದರೂ ಶಾಹುಲ್ ಹಮೀದ್ ಮನೆಗೆ ಬಂದು ಯಾರೂ ಇರದ ವೇಳೆ ಬಾಲಕಿಗೆ ಕಿರುಕುಳ ನೀಡಿದ್ದ ಎಂದು ದೂರಲಾಗಿದೆ. ಸದ್ಯ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಚಿಕ್ಕಬಳ್ಳಾಪುರ ಕ್ಷೇತ್ರದ ಜನರಿಗೆ ಮೇಗಾ ಆರೋಗ್ಯ ಶಿಬಿರ ಆಯೋಜಿಸಿದ ಡಾ.ಕೆ.ಸುಧಾಕರ್

ಆತ್ಮಹತ್ಯೆಗೆ ಲವ್ ಜಿಹಾದ್ ಕಾರಣ: ವಿಎಚ್ ಪಿ
ಸಾಹುಲ್ ಹಮೀದ್ ಪ್ರೀತಿಸುವಂತೆ ಪೀಡಿಸಿದ್ದು, ಕಾಟ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿಎಚ್ ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ದೂರಿದ್ದಾರೆ‌. ಅಪ್ರಾಪ್ತೆ ಮೇಲೆ ವಾಮಾಚಾರ ಪ್ರಯೋಗಿಸಿ, ಬೆದರಿಸಲಾಗಿದೆ. ಇದೊಂದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯ. ಸಾಹುಲ್ ಹಮೀದ್ ಮತ್ತು ಅವನ ಮನೆಯವರನ್ನ ಬಂಧಿಸಿ ಕೊಲೆ ಮೊಕ್ಕದ್ದಮೆ ದಾಖಲಿಸಿ ಉನ್ನತ ಮಟ್ಟದ ತನಿಖೆಗೆ ವಿಎಚ್ ಪಿ ಆಗ್ರಹಿಸಿದೆ.

Latest Videos
Follow Us:
Download App:
  • android
  • ios