ಕಲಬುರಗಿ[ಮೇ. 02]  ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗ್ಯಶ್ರೀ (17) ದಸ್ತಗೀರ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಅಂತರ ಧರ್ಮಿಯರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿ ಇನ್ನೂ ಅಪ್ರಾಪ್ತಳು ಅನ್ನುವ ಕಾರಣಕ್ಕೆ ಮನೆಯವರ ವಿರೋಧ ಇತ್ತು. ಇದರಿಂದ ಮನನೊಂದು ಒಂದೇ ಮರಕ್ಕೆ ಇಬ್ಬರೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನರೋಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.   ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.