Shivamogga: ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಚರ್ಮಗಂಟು ರೋಗ ಉಲ್ಬಣ
ಹೊಸನಗರ ತಾಲೂಕು ವ್ಯಾಪ್ತಿಯ ಹುಂಚ- ಕೆರೆಹಳ್ಳಿ- ಕಸಬ ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿನ ಮಲೆನಾಡು ಗಿಡ್ಡ ತಳಿಯಲ್ಲಿ ಚರ್ಮಗಂಟು ರೋಗ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು ರೈತ ಸಮೂಹ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ.
ರಿಪ್ಪನ್‌ಪೇಟೆ (ಡಿ.14): ಹೊಸನಗರ ತಾಲೂಕು ವ್ಯಾಪ್ತಿಯ ಹುಂಚ- ಕೆರೆಹಳ್ಳಿ- ಕಸಬ ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿನ ಮಲೆನಾಡು ಗಿಡ್ಡ ತಳಿಯಲ್ಲಿ ಚರ್ಮಗಂಟು ರೋಗ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು ರೈತ ಸಮೂಹ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಹೊಸನಗರ ತಾಲೂಕಿನಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಜಾನುವಾರುಗಳಿದ್ದು, ರೈತ ಕುಟುಂಬಗಳಿಗೆ ಕೃಷಿ, ಹೈನುಗಾರಿಕೆಯೆ ಪ್ರಮುಖ ಆದಾಯವಾಗಿದೆ. ಈಗಾಗಲೇ ತಾಲೂಕಿನ ವ್ಯಾಪ್ತಿಯಲ್ಲಿ ಪಶು ಆಸ್ಪತ್ರೆಯಲ್ಲಿ ವೈದ್ಯರು ಕೊರತೆ ಎದೆ.
ಇಂಥ ಸಂದರ್ಭದಲ್ಲಿ ಜಾನುವಾರುಗಳಿಗೆ ಈ ಕಾಯಿಲೆಯಿಂದ ರೈತರು ಚಿಂತೆಗೆ ಬಿದ್ದಿದ್ದರೆ, ಜಾನುವಾರುಗಳು ವೇದನೆ ಪಡುವಂತಾಗಿದೆ. ಈ ರೋಗದ ನಿಯಂತ್ರಣಕ್ಕಾಗಿ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೂ ತಾಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಿಗೆರಸು, ಹಿಂಡ್ಲೆಮನೆ ಹೀಗೆ ಹಲವು ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯಾಪಿಸುತ್ತಿದೆ.
ಸರ್ವ ಧರ್ಮದವರನ್ನು ಪ್ರೀತಿಸುವ ಗುಣ ವೀರಶೈವಕ್ಕಿದೆ: ಡಾ.ವೀರಸೋಮೇಶ್ವರ
ರೋಗ ಹರಡುವುದು ಹೇಗೆ?: ಸೊಳ್ಳೆ, ನೊಣ, ಉಣ್ಣೆ ಹಾಗೂ ರೋಗಪೀಡಿತ ಪ್ರಾಣಿಗಳ ನೇರ ಸಂಪರ್ಕದಿಂದ ಈ ರೋಗ ರಾಸುಗಳಿಗೆ ಹರಡುತ್ತದೆ. ರೋಗಪೀಡಿತ ರಾಸುಗಳು ತಿಂದುಬಿಟ್ಟಮೇವು ಮತ್ತು ಕುಡಿದು ಬಿಟ್ಟನೀರಿನ ಸೇವೆನೆಯಿಂದಲೂ ಬರುತ್ತದೆ. ಸೋಂಕಿತ ರಾಸುವಿನ ರಕ್ತ, ಕೀವು, ದೈಹಿಕ ಸ್ರಾವದ ನೇರ ಸಂಪರ್ಕದಿಂದಲೂ ಬರುತ್ತದೆ. ಕ್ಯಾಪ್ರೈನ್ ಪಾಕ್ಸ್ ವೈರಾಣುವಿನಿಂದ ಬರುವ ಈ ರೋಗವು ಕುರಿ ಮತ್ತು ಮೇಕೆಗಳಲ್ಲಿ ಸಿಡುಬಿನ ಮಾದರಿಯಲ್ಲಿ ಕಾಣಿಸಿಕೊಳ್ಳುತ್ತದೆ. ರಾಸುಗಳ ರಕ್ತ, ವೀರ್ಯ, ಜೊಲ್ಲು, ಕಣ್ಣು ಮತ್ತು ಮೂಗಿನ ಸ್ರವಿಕೆಯಲ್ಲಿ ಇರುವ ಈ ವೈರಾಣು 35 ದಿನಗಳ ಕಾಲ ಬದುಕಿರುತ್ತದೆ. ಅತಿಯಾದ ಜ್ವರ, ಮೂಗು ಮತ್ತು ಕಣ್ಣುಗಳಲ್ಲಿ ಸೋರುವಿಕೆ, ಜೊಲ್ಲು ಸುರಿಸುವುದು, ಮೈ ಮೇಲೆ ದೊಡ್ಡ ಗಂಟು ಬರುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ.
ಚಿಕಿತ್ಸೆ ಏನು?: ರೋಗಪೀಡಿತ ರಾಸುಗಳನ್ನು ಆರೋಗ್ಯವಂತ ರಾಸುಗಳಿಂದ ಪ್ರತ್ಯೇಕಿಸಬೇಕು. ರಾಸುಗಳಿಗೆ ಸೊಳ್ಳೆ, ನೊಣ, ಮತ್ತು ಉಣ್ಣೆ ನಿವಾರಕ ಮುಲಾಮು ಹಚ್ಚಬೇಕು. ರಾಸುಗಳಿಗೆ ಕಡ್ಡಾಯವಾಗಿ ಮೇಕೆ ಸಿಡುಬು (ಗೋಟ್ ಪಾಕ್ಸ್) ನಿರೋಧಕ ಲಸಿಕೆ ಹಾಕಿಸಬೇಕು. ಆರಂಭಿಕ ಹಂತದಲ್ಲೇ ರೋಗ ಪತ್ತೆ ಹಚ್ಚುವುದರಿಂದ ಸೋಂಕು ಹರಡುವಿಕೆಗೆ ಕಡಿವಾಣ ಹಾಕಬಹುದು. ಟೆಟ್ರಾ ಸೈಕ್ಲಿನ್, ಪೆನ್ಸಿಲಿನ್ನಂತಹ ಆ್ಯಂಟಿ ಬಯೋಟಿಕ್ ಚುಚ್ಚುಮದ್ದು ನೀಡಬಹುದು.
ರೋಗ ಹತೋಟಿಗಾಗಿ ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ರಾಸುಗಳಿಗೆ ಮೇಕೆ ಸಿಡುಬು ಲಸಿಕೆ ಹಾಕಲಾಗುತ್ತಿದೆ. ಈಗಾಗಲೇ ತಾಲೂಕಿನ ವ್ಯಾಪ್ತಿಯಲ್ಲಿ ಹರಡಿರುವ ಮಾರಕ ರೋಗದ ಹತೋಟಿಗೆ ಕ್ರಮ ಕೈಗೊಳ್ಳಲಾಗಿದ್ದರೂ ಕೂಡಾ ದಿಢೀರ್ ಉಲ್ಬಣದಿಂದಾಗಿ ರೈತರು ಸಾರ್ವಜನಿಕರನ್ನು ಚಿಂತಾಕ್ರಾಂತರನ್ನಾಗಿಸಿದೆ. ಇನ್ನಾದರೂ ಸರ್ಕಾರ ತುರ್ತು ಗಮನಹರಿಸಿ, ಈ ಮಾರಕ ರೋಗದ ನಿಯಂತ್ರಣಕ್ಕೆ ಮುಂದಾಗುವರೇ ಕಾದುನೋಡಬೇಕಿದೆ.
ಅತಿಥಿ ಉಪನ್ಯಾಸಕರ ವೇತನಕ್ಕೂ ಲಂಚದ ಬೇಡಿಕೆ!
ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾಗ್ರತೆಯಾಗಿ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಲಸಿಕೆ ನೀಡಲಾಗಿದೆ. ಅಲ್ಲದೆ ತಾಲೂಕಿನಲ್ಲಿ 1 ಲಕ್ಷಕ್ಕೂ ಅಧಿಕ ಸಂಖ್ಯೆಯ ಜಾನುವಾರುಗಳಿವೆ. ಈಗಾಗಲೇ ಚರ್ಮಗಂಟು ರೋಗದಿಂದಾಗಿ 45ಕ್ಕೂ ಅಧಿಕ ಸಂಖ್ಯೆಯಲ್ಲಿ ಜಾನುವಾರು ಈ ಮಾರಕ ರೋಗಕ್ಕೆ ಬಲಿಯಾಗಿವೆ
- ಡಾ. ಕೆ.ಎಂ. ನಾಗರಾಜ್, ಸಹಾಯಕ ನಿರ್ದೇಶಕ, ತಾಲೂಕು ಪಶು ಇಲಾಖೆ