Asianet Suvarna News Asianet Suvarna News

ಜು.30ಕ್ಕೆ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ : ಹಲವು ಮುಖಂಡರು ಕೈ ಪಾಳಯಕ್ಕೆ

  •  ಶಿವಮೊಗ್ಗ ಜಿಲ್ಲೆಯ ಪ್ರಭಾವಿ ಯುವ ರಾಜಕಾರಣಿ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ 
  • ಮಧು ಬಂಗಾರಪ್ಪ ಅವರ ಕಾಂಗ್ರೆಸ್ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿ
  • ಹುಬ್ಬಳ್ಳಿಯಲ್ಲಿ ಜು.30ರಂದು ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ ಅವರು ಪಕ್ಷ ಸೇರಲಿದ್ದಾರೆ
Madhu Bangarappa Will Join Congress on july 30 snr
Author
Bengaluru, First Published Jul 28, 2021, 9:02 AM IST

ಹುಬ್ಬಳ್ಳಿ (ಜು.28): ಶಿವಮೊಗ್ಗ ಜಿಲ್ಲೆಯ ಪ್ರಭಾವಿ ಯುವ ರಾಜಕಾರಣಿ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರ ಕಾಂಗ್ರೆಸ್ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. 

ಹುಬ್ಬಳ್ಳಿಯಲ್ಲಿ ಜು.30ರಂದು ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ ಅವರು ಪಕ್ಷ ಸೇರಲಿದ್ದಾರೆ. ಅಂದು ಬೆಳಗ್ಗೆ 9 ಗಂಟೆಗೆ ಪಕ್ಷದ ವಿಭಾಗಮಟ್ಟದ ಸಭೆ ನಡೆಯಲಿದ್ದು, ಈ ವೇಳೆ ಮಧು ಬಂಗಾರಪ್ಪ ಜತೆ ಅವರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

 ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ಯಾಕೆ? ಕಾರಣ ಕೊಟ್ಟ ಮಧು ಬಂಗಾರಪ್ಪ!

ಗೋಕುಲ ಗಾರ್ಡನ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಲೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಈ ಹಿಂದೆ ಶಿವಮೊಗ್ಗದಲ್ಲೇ  ಬೃಹತ್ ಸಮಾವೇಶ ನಡೆಸಿ  ಕಾಂಗ್ರೆಸ್ ಸೇರುವ ಉದ್ದೇಶವಿತ್ತು. ಆದರೆ ಕೋವಿಡ್‌ ಅಡ್ಡಿಯಾಗಿತ್ತು. 

ಒಬಿಸಿ ಘಟಕದ ಅಧ್ಯಕ್ಷ ಸ್ಥಾನ : ಯುವಕರನ್ನು ಜೆಡಿಎಸ್‌ಗೆ ಸೆಳೆಯುವ ಮೂಲಕ ಶಿವಮೊಗ್ಗದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಮಧು ಬಂಗಾರಪ್ಪ ಅವರಿಗೆ ಕಾಂಗ್ರೆಸ್‌ನಲ್ಲಿ ಪ್ರಮುಖ ಜವಾಬ್ದಾರಿ ನೀಡಲು ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈಡಿಗ ಸಮುದಾಯಕ್ಕೆ ಸೇರಿದವರಾದ ಅವರಿಗೆ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ. 

Follow Us:
Download App:
  • android
  • ios