Asianet Suvarna News Asianet Suvarna News

ಕೊರೋನಾ ಕನ್ಫರ್ಮ್ ಕೇಸ್: ಮಡಿಕೇರಿಯಲ್ಲಿ ಹೆಲ್ತ್ ಎಮರ್ಜೆನ್ಸಿ

ಮಡಿಕೇರಿಯಲ್ಲಿ ಕೊರೋನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಹೆಲ್ತ್‌ ಎಮರ್ಜೆನ್ಸಿ ಘೋಷಿಸಿದ್ದಾರೆ. 

 

Madikeri dc announces health emergency in kodagu as one confirm corona case found
Author
Bangalore, First Published Mar 19, 2020, 2:35 PM IST

ಮಡಿಕೇರಿ(ಮಾ.19): ಮಡಿಕೇರಿಯಲ್ಲಿ ಕೊರೋನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಹೆಲ್ತ್‌ ಎಮರ್ಜೆನ್ಸಿ ಘೋಷಿಸಿದ್ದಾರೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕೊಡಗು ಡಿಸಿ ಕೊಡಗಿನಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಿದ್ದಾರೆ.

ಕೊಡಗಿನಲ್ಲಿ 35 ವರ್ಷದ ವ್ಯಕ್ತಿಗೆ ಕೊರೋನ ಕನ್ಫರ್ಮ್ ಆದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಕೊಡಗು ಡಿಸಿ ಅನೀಸ್ ಕಣ್ಮನಿ ಜಾಯ್ ಸ್ಪಷ್ಟನೆ ನೀಡಿದ್ದಾರೆ. ದುಬೈನಿಂದ ಬಂದ ವ್ಯಕ್ತಿ ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದವರಾಗಿದ್ದಾರೆ.

ಕೊರೊನಾ ವಿರುದ್ಧ ಪವನ್ ಒಡೆಯರ್ ಓದಿನ ಮಂತ್ರ..!

ಮೈಸೂರಿನಿಂದ ಬಂದ ರಿಪೋರ್ಟ್ ಪಾಸಿಟಿವ್ ಇದೆ. ಕೊರೋನ ಎದುರಿಸಲು ಮತ್ತು ತಡೆಗೆ, ಜಾಗೃತಿ ಮೂಡಿಸಲು ಜಿಲ್ಲಾಡಳಿತ ಸಿದ್ಧವಾಗಿದೆ. 100 ಬೆಡ್ ಐಸೊಲೇಟೆಡ್ ವಾರ್ಡ್, ಕೋರೆಂಟಲ್ 150 ಬೆಡ್ ಮತ್ತೊಂದು ವಾರ್ಡ್ ರೆಡಿಯಾಗಿದೆ. ಕೊಡಗು ಮೆಡಿಕಲ್ ಕಾಲೇಜಿನಲ್ಲಿ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಪಾಸಿಟಿವ್ ಬಂದ ವ್ಯಕ್ತಿಯ ಆರೋಗ್ಯ ಸದ್ಯಕ್ಕೆ ಸ್ಟೇಬಲ್ ಇದೆ. ಮುಂಜಾಗ್ರತಾ ದೃಷ್ಠಿಯಿಂದ ಜಿಲ್ಲೆಯಲ್ಲಿ 144/3 ಸೆಕ್ಷನ್ ಕೂಡ ಜಾರಿ ಮಾಡಿದ್ದೇವೆ. ರೆಸಾರ್ಟ್, ಹೊಟೆಲ್, ಹೋಮ್ಸ್ ಸ್ಟೇ ಬುಕಿಂಗ್ ಕ್ಯಾನ್ಸಲ್ ಮಾಡಿ, ಹೊಸ ಬುಕ್ಕಿಂಗ್ ಮಾಡಬೇಡಿ. ಕರೋನ ಕಡೆಗೆ ಜಿಲ್ಲಾ ಮಟ್ಟದ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದಿದ್ದಾರೆ.

ಮಡಿಕೇರಿಯಲ್ಲಿ ಮೊತ್ತೊಬ್ಬ ವ್ಯಕ್ತಿಗೆ ಕೊರೋನಾ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ

ಧಾರ್ಮಿಕ ಕಾರ್ಯಕ್ರಮ ರುಟೀನ್ ಬಿಟ್ಟು ಬೇರೆ ಯಾವುದು ಮಾಡುವ ಹಾಗಿಲ್ಲ. ಇಂದು ಅಥವಾ ನಾಳೆ ಜಿಲ್ಲೆಯ ಎಲ್ಲಾ ಧಾರ್ಮಿಕ ಮುಖಂಡರ ಸಭೆ ನಡೆಯಲಿದೆ. ಶಾಲೆ ಕಾಲೇಜು ಅಂಗನವಾಡಿ, ಜಿಮ್, ಸ್ವಿಮ್ಮಿಂಗ್ ಪೂಲ್, ಮೈದಾನ, ಟ್ಯೂಷನ್ ಸೆಂಟರ್ ಬಂದ್ ಮಾಡಬೇಕು. ಸಂತೆ, ಜಾತ್ರೆ ಸೇರಿದಂತೆ ಜನ ಸೇರುವಂತಹವು ಕಂಪ್ಲೀಟ್ ಬಂದ್ ಮಾಡಿ ಎಂದಿದ್ದಾರೆ.

"

ಜಿಲ್ಲೆಯ ಗಡಿಗಳಲ್ಲಿ ಚೆಕ್ ಫೊಸ್ಟ್ ತೆರೆದು ಪರಿಶೀಲನೆ ಮಾಡಲಾಗುತ್ತಿದೆ. ಮೆಡಿಕಲ್, ದಿನಸಿ ತರಕಾರಿ ಬಿಟ್ಟು ಬೇರೆ ಎಲ್ಲವನ್ನೂ ಕ್ಲೋಸ್ ಮಾಡಿ ಸಹಕರಿಸಿ. ಪ್ರೈವೇಟ್ ಕಂಪೆನಿ ವರ್ಕ್ ಫ್ರಮ್ ಹೋಮ್ ಡಿಕ್ಲೇರ್ ಮಾಡಬೇಕು. ಸರ್ಕಾರಿ ಕಚೇರಿ ಕಾರ್ಯ ನಿರ್ವಹಿಸುತ್ತದೆ ರಜೆ ಇರುವುದಿಲ್ಲ. ಪ್ರಗ್ನೆಂಟ್ ಮತ್ತು ಆರೋಗ್ಯ ಸಮಸ್ಯೆ ಇರುವ ಸರ್ಕಾರಿ ಅಧಿಕಾರಿಗಳಿಗೆ ವಿನಾಯಿತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಮಾರ್ಚ್ 19ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios