ನರಗುಂದ[ಜ.25]: ತಾಲೂಕಿನ ರೈತರು 2018ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಮಾಡಿಕೊಂಡ ರೈತ ಸಮುದಾಯಕ್ಕೆ ಸರ್ಕಾರ ಸರಿಯಾಗಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಬೇಕು ಎಂದು ರೈತ ಸೇನೆ ಸದಸ್ಯ ಶಿವಪ್ಪ ಹುರಳಿ ಆಗ್ರಹಿಸಿದ್ದಾರೆ.

1653ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರ ನಿರಂತರ ಹೋರಾಟ ವೇದಿಕೆಯಲ್ಲಿ ಅವರು ಮಾತನಾಡಿದರು. ಸರಿಯಾಗಿ ಮಳೆಯಾಗದ ಕಾರಣ ಜಿಲ್ಲೆಯ ರೈತರು ಅಪಾರ ಹಾನಿ ಅನುಭವಿಸಿದ್ದಾರೆ. ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳು ರೈತರ ಜಮೀನಿಗೆ ಭೇಟಿ ನೀಡಿ, ಹಾನಿ ವರದಿ ತಯಾರಿಸಿ ಸರ್ಕಾರಕ್ಕೆ ಕಳುಹಿಸಿದ್ದಾರೆ. ಅದರಂತೆ ಸರ್ಕಾರ ರೈತರ ಬ್ಯಾಂಕ್‌ ಖಾತೆಗೆ ಪರಿಹಾರದ ಹಣ ಸಂದಾಯ ಮಾಡಿದೆ. ಆದರೆ, ಕೆಲವು ರೈತರಿಗೆ ಪರಿಹಾರ ನೀಡದೆ ತಾರತಮ್ಯ ಮಾಡಲಾಗಿದೆ. ಪರಿಹಾರ ಸಿಗದ ರೈತರಿಗೆ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ತಾಲೂಕಿನ ಚಿಕ್ಕನರಗುಂದ ಗ್ರಾಮದ ರೈತ ಸೇನಾ ಸದಸ್ಯ ಶಿವಪ್ಪ ಸಾತಣ್ಣವರ ಮಾತನಾಡಿ, ಮಹದಾಯಿ ಯೋಜನೆ ಜಾರಿ ಮಾಡದೆ ಸರ್ಕಾರ ಈ ಭಾಗದ ರೈತರಿಗೆ ಅನ್ಯಾಯ ಮಾಡಿದೆ. ಅತಿ ಶೀಘ್ರದಲ್ಲಿ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದರು.

ಮೃತ್ಯುಂಜಯ್ಯ ಹಿರೇಮಠ, ಅಡಿಯಪ್ಪ ಕೋರಿ, ಎಸ್‌.ಬಿ. ಜೋಗಣ್ಣವರ, ಎ.ಪಿ. ಪಾಟೀಲ, ಬಸವರಾಜ ಐನಾಪುರ, ಅರ್ಜುನ ಮಾನೆ, ಮಲ್ಲೇಶಪ್ಪ ಅಣ್ಣೆಗೇರಿ, ಸುಭಾಸ ಗಿರಿಯಣ್ಣವರ, ಸಂಗಪ್ಪ ಶಾನವಾಡ, ವೆಂಕಪ್ಪ ಹುಜರತ್ತಿ, ಹನುಮಂತ ಸರನಾಯ್ಕರ, ವಾಸು ಚವ್ಹಾಣ, ಯಲ್ಲಪ್ಪ ಗುಡದೇರಿ, ಮಾರುತಿ ಬಡಿಗೇರ, ಬಸವ್ವ ಪೂಜಾರ, ಮಹಾದೇವಪ್ಪ ಐನಾಪುರ, ಮಂಜುಳಾ ಸರನಾಯ್ಕರ, ಮಲ್ಲಪ್ಪ ಐನಾಪುರ, ಕೆ.ಎಚ್‌. ಮೊರಬದ, ನಾಗರತ್ನಾ ಸವಳಬಾವಿ, ಅನಸವ್ವ ಶಿಂದೆ, ಶಾಂತವ್ವ ಭೂಸರಡ್ಡಿ, ಈರಣ್ಣ ಗಡಗಿ, ಸೋಮಲಿಂಗಪ್ಪ ಆಯಿಟ್ಟಿಇದ್ದರು.