ನರಗುಂದ(ಜ.18): ರೈತರು ನಮ್ಮ ನೆಲದಲ್ಲಿ ಹರಿಯುವ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಜಾರಿ ಮಾಡಬೇಕೆಂದು ಮನವಿ ಮಾಡಿಕೊಂಡರೂ ಸಹ ಸರ್ಕಾರ ಈ ಯೋಜನೆ ಜಾರಿಗೆ ವಿಳಂಬ ಮಾಡುತ್ತಿರುವುದು ಖಂಡನೀಯ ಎಂದು ರೈತ ಸೇನಾ ಸದಸ್ಯ ಜಗನ್ನಾಥ ಮುಧೋಳೆ ಹೇಳಿದ್ದಾರೆ.

1646ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಶ್ರೀಗಳ ನೇತೃತ್ವದಲ್ಲಿ ಹೋರಾಟ ಪ್ರಾರಂಭ ಮಾಡಿದ ನಂತರ ಈ ಜಲ ವಿವಾದಕ್ಕೆ ನೇಮಕವಾದ ನ್ಯಾಯಾಧಿಕರಣದ ನ್ಯಾಯಾಧೀಶರು 2018ರಲ್ಲಿ ಕರ್ನಾಟಕ ರಾಜ್ಯಕ್ಕೆ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳಲ್ಲಿ ಹರಿಯುವ ನೀರಿನಲ್ಲಿ 13.42 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಿದರೂ ಸಹ ಈ ನೀರು ಬಳಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡದ್ದರಿಂದ ಕರ್ನಾಟಕ ರಾಜ್ಯಕ್ಕೆ ನೀರು ಬಳಕೆ ಮಾಡಿಕೊಳ್ಳಲು ತೊಂದರೆಯಾಗದೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕೇಂದ್ರ ಸರ್ಕಾರಕ್ಕೆ ಇನ್ನು ಕಾಲ ಮಿಂಚಿಲ್ಲ, ಬೇಗ ನ್ಯಾಯಾಧಿಕರಣದ ನೀಡಿರುವ ನೀರು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಬೇಕು. ಅದೇ ರೀತಿ ರಾಜ್ಯ ಸರ್ಕಾರ ಮತ್ತೊಮ್ಮೆ ಸರ್ವ ಪಕ್ಷ ಸಭೆ ಕರೆದು ಮಹದಾಯಿಯಲ್ಲಿ ಹರಿಯುವ ನೀರಿನಲ್ಲಿ ಹೆಚ್ಚುವರಿ ನೀರು ಪಡೆದುಕೊಳ್ಳಲು ಚರ್ಚೆ ಮಾಡಿ ಕಾನೂನು ಹೋರಾಟ ಮಾಡಿ ನಮ್ಮ ಪಾಲಿನ ನೀರು ಪಡೆದುಕೊಳ್ಳಲು ಮುಂದಾಗಬೇಕು. ಒಂದು ವೇಳೆ ಉಭಯ ಸರ್ಕಾರಗಳು ಈ ಪ್ರಯತ್ನ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಮಹದಾಯಿ ಹೋರಾಟಗಾರರು ಉಗ್ರ ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.

ಎ.ಪಿ. ಪಾಟೀಲ, ಅಡಿಯಪ್ಪ ಕೋರಿ, ಎಸ್‌.ಬಿ. ಜೋಗಣ್ಣವರ, ಯಲ್ಲಪ್ಪ ಚಲಬಣ್ಣವರ, ಬಸವರಾಜ ಐನಾಪುರ, ಅರ್ಜುನ ಮಾನೆ, ಮಲ್ಲೇಶಪ್ಪ ಅಣ್ಣೆಗೇರಿ, ಸುಭಾಸ ಗಿರಿಯಣ್ಣವರ, ಸಂಗಪ್ಪ ಶಾನವಾಡ, ವೆಂಕಪ್ಪ ಹುಜರತ್ತಿ, ಹನಮಂತ ಸರನಾಯ್ಕರ, ವಾಸು ಚವಾಣ, ಯಲ್ಲಪ್ಪ ಗುಡದೇರಿ, ಮಾರುತಿ ಬಡಿಗೇರ, ಬಸವ್ವ ಪೂಜಾರ, ಮಹಾದೇವಪ್ಪ ಐನಾಪುರ, ಮಂಜುಳಾ ಸರನಾಯ್ಕರ, ಮಲ್ಲಪ್ಪ ಐನಾಪುರ, ನಾಗರತ್ನ ಸವಳಭಾವಿ, ರಾಯವ್ವ ಕಟಿಗಿ, ಅನಸವ್ವ ಶಿಂದೆ, ಶಾಂತವ್ವ ಭೂಸರಡ್ಡಿ, ಈರಣ್ಣ ಗಡಗಿ, ಸೋಮಲಿಂಗಪ್ಪ ಆಯಿಟ್ಟಿ ಇದ್ದರು.