ಮಹದೇಶ್ವರ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ವೆಂಕಟೇಶ್‌

ಮಲೆಮಹದೇಶ್ವರ ಬೆಟ್ಟದ ಕ್ಷೇತ್ರದಲ್ಲಿ ಭಕ್ತಾಧಿಗಳ ಸೌಕರ್ಯಕ್ಕಾಗಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ತಿಳಿಸಿದರು.

Mahadeshwar development work should be completed soon Says Minister K Venkatesh gvd

ಚಾಮರಾಜನಗರ (ಜು.24): ಮಲೆಮಹದೇಶ್ವರ ಬೆಟ್ಟದ ಕ್ಷೇತ್ರದಲ್ಲಿ ಭಕ್ತಾಧಿಗಳ ಸೌಕರ್ಯಕ್ಕಾಗಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ತಿಳಿಸಿದರು. ಮಲೆಮಹದೇಶ್ವರ ಬೆಟ್ಟದ ನಾಗಮಲೆ ಸಭಾಂಗಣದಲ್ಲಿ ಭಾನುವಾರ ಮಲೆಮಹದೇಶ್ವರಸ್ವಾಮಿ ಬೆಟ್ಟಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಸಂಬಂಧ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು. ಕ್ಷೇತ್ರದಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಕಾಮಗಾರಿಗಳ ವಿವರ ಪಡೆಯಲಾಗಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಲಾಗಿದೆ. ವಿಳಂಬ ಮಾಡದೇ ತ್ವರಿತ ಕಾಮಗಾರಿ ಮುಗಿಸಲು ನಿರ್ದೆಶನ ನೀಡಲಾಗಿದೆ ಎಂದರು. 

ಮಲೆಮಹದೇಶ್ವರರ ಪ್ರತಿಮೆ ಬಳಿ ನಡೆಯುತ್ತಿರುವ ಕೆಲಸಗಳ ಬಗ್ಗೆ ಪರಿಶೀಲಿಸಿದ್ದು, ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಸ್ತೆ ಇತರೆ ಮೂಲ ಸೌಕರ್ಯಗಳ ಅಭಿವೃದ್ಧಿ ಕೆಲಸ ಕಾಲಮಿತಿಯೊಳಗೆ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು. ಮಲೆಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿಯವರು ಸಹ ಕ್ಷೇತ್ರದಲ್ಲಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಕ್ಷೇತ್ರದಲ್ಲಿ ಆಗಬೇಕಿರುವ ಬಾಕಿ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ತಿಳಿಸಲಾಗಿದೆ ಎಂದರು. 

ಔಟ್ ಆಫ್‌ ದಿ ವೇ ಯಾರೂ ಹೋಗಬೇಡಿ: ಅಧಿಕಾರಿಗಳಿಗೆ ಡಿಕೆಶಿ ಖಡಕ್‌ ವಾರ್ನಿಂಗ್‌!

ಕ್ಷೇತ್ರಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಅವರ ಅನುಕೂಲಕ್ಕೆ ತಕ್ಕಂತೆ ಮತ್ತಷ್ಟು ಸೌಲಭ್ಯಗಳು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ನಾನು, ಮೊದಲ ಸಭೆ ನಡೆಸಿದ್ದೇನೆ. ಇನ್ನಷ್ಟು ವಿವರವಾಗಿ ಚರ್ಚಿಸಿ ಅಗತ್ಯ ಸೌಕರ್ಯ ಒದಗಿಸಲಿದ್ದೇವೆ ಎಂದು ತಿಳಿಸಿದರು. ಶಾಂತಮಲ್ಲಿಕಾರ್ಜುನಸ್ವಾಮೀಜಿ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್‌.ಕೃಷ್ಣ ಮೂರ್ತಿ, ಎಂ.ಆರ್‌.ಮಂಜುನಾಥ್‌, ಎಚ್‌.ಎಂ.ಗಣೇಶ್‌ ಪ್ರಸಾದ್‌, ವಿಧಾನ ಪರಿಷತ್ತಿನ ಸದಸ್ಯರಾದ ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪನಾಗ್‌, ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಗೀತಾ ಹುಡೇದ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿಮಹೇಶ್‌, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮಹದೇಶ್ವರ ಬೆಟ್ಟದಲ್ಲಿ ನೂತನ ಬಸ್ಸುಗಳಿಗೆ ಚಾಲನೆ: ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭಕ್ತಾಧಿಗಳ ಸೌಲಭ್ಯಕ್ಕಾಗಿ ಖರೀದಿಸಲಾಗಿರುವ ನೂತನ ನಾಲ್ಕು ಬಸ್‌ಗಳಿಗೆ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಭಾನುವಾರ ಚಾಲನೆ ನೀಡಿದರು. ನಾಗಮಲೆ ಭವನದ ಹೊರ ಆವರಣದಲ್ಲಿ ನೂತನ ಬಸ್‌ಗಳ ಸೇವೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹಸಿರು ನಿಶಾನೆ ತೋರಿದರು. ಪ್ರಾಧಿಕಾರದಿಂದ ಭಕ್ತಾಧಿಗಳ ಸೌಲಭ್ಯಕ್ಕೆ ಒದಗಿಸಲಾಗುತ್ತಿರುವ ಬಸ್ಸುಗಳ ಸೇವೆ ಸಮರ್ಪಕವಾಗಿ ತಲುಪಬೇಕು ಎಂದು ತಿಳಿಸಿದರು. 

ಜನ​ಸ್ನೇಹಿ ಆಡ​ಳಿತ ನೀಡಿ, ಇಲ್ಲ ನಿಮ್ಮ ದಾರಿ ನೋಡಿ​ಕೊಳ್ಳಿ: ಸಂಸದ ಡಿ.ಕೆ.​ಸು​ರೇಶ್‌

ಶಾಂತಮಲ್ಲಿಕಾರ್ಜುನಸ್ವಾಮೀಜಿ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ,ಎಂ.ಆರ್‌.ಮಂಜುನಾಥ್‌, ಗಣೇಶ್‌ ಪ್ರಸಾದ್‌, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪನಾಗ್‌, ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಗೀತಾ ಹುಡೇದ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹು,ಮಾಜಿ ಶಾಸಕರಾದ ಆರ್‌.ನರೇಂದ್ರ, ಉಪವಿಭಾಗಾಧಿಕಾರಿ ಮಹೇಶ್‌ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios