ಉಚ್ಚಿಲ(ಜ.10): ಕರಾವಳಿ ಜಿಲ್ಲೆಗಳ ಆರ್ಥಿಕ ಅಭಿವೃದ್ಧಿಯಲ್ಲಿ ಸಕ್ರಿಯವಾಗಿರುವ ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕಿನ ಉಚ್ಚಿಲದ ನವೀಕೃತ ಶಾಖೆ ಮತ್ತು ನೂತನ ಎ.ಟಿ.ಎಂನ್ನು ಆರ್ ಬಿಐ ನಿರ್ದೇಶಕ ಸತೀಶ್ ಮರಾಠೆ ಉದ್ಘಾಟಿಸಿದ್ದಾರೆ.

ಸಮಾರಂಭವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಉದ್ಘಾಟಿಸಿ, ಬ್ಯಾಂಕಿನ ಬಡವರ ಬಂಧು ಯೋಜನೆಗೆ ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.‌ಎನ್.ರಾಜೇಂದ್ರ ಕುಮಾರ್ ಚಾಲನೆ ನೀಡಿದ್ದಾರೆ.

ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ 10ನೇ ಮತ್ತು ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಬ್ಯಾಂಕ್ ವತಿಯಿಂದ ಪುರಸ್ಕರಿಸಿ ಶುಭ ಹಾರೈಸಿದರು.

ಸಿಎಂಗೆ ಹೈಕಮಾಂಡ್ ದಿಢೀರ್ ಬುಲಾವ್: ರಾಜ್ಯ ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ

ಬ್ಯಾಂಕಿನ ತುಳು ನಾಮ ಫಲಕವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ರವರು ಅನಾವಣಗೊಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಬ್ಯಾಂಕಿನ ಅಧ್ಯಕ್ಷ ಯಶಪಾಲ್ ಎ.ಸುವರ್ಣ ಅವರು  ಬ್ಯಾಂಕ್‌ನ ಪ್ರಥಮ ಎಟಿಎಮ್ ಕಾರ್ಡ್‌ನ್ನು ನಾಡೋಜ ಜಿ.ಶಂಕರ್ ಅವರಿಗೆ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಸಂಸದೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಸಹಕಾರ ಸಂಘಗಳ ನಿಬಂಧಕ ಎಸ್. ಜಿಯಾವುಲ್ಲಾ, ಕ.ಅ.ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಅಧ್ಯಕ್ಷ ದಿನಕರ ಬಾಬು ಆಗಮಿಸಿದ್ದರು. ಇದೇ ಸಂದರ್ಬಧಲ್ಲಿ ಸಮಾಜದ ವಿವಿಧ ರಂಗಗಳ ಸಾಧಕರನ್ನು ಸನ್ಮಾನಿಸಲಾಯಿತು.