ಬೆಳಗಾವಿ(ಜ.17): ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಪೊಲೀಸರು ಬಂಧಿಸಿದ್ದಾರೆ. 

ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಆಯೋಜಿಸಲಾಗಿದ್ದ ಎಂಇಎಸ್‌ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವ ರಾಜೇಂದ್ರ ಪಾಟೀಲ ಅವರನ್ನ ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಡಿ ವಿವಾದ: 'ಕರ್ನಾಟಕ ಸರ್ಕಾರ ಮಹಾಜನ್‌ಗೆ ಲಂಚ ಕೊಟ್ಟು ವರದಿ ತಯಾರಿಸಿದೆ'

ಹುತಾತ್ಮ ವೃತ್ತದಲ್ಲಿಯೇ ರಾಜೇಂದ್ರ ಪಾಟೀಲ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಅವರನ್ನು ಮಹಾರಾಷ್ಟ್ರದ ಗಡಿಯಲ್ಲಿ ಬಿಟ್ಟು ಬರಲು ತೆರಳಿದ್ದಾರೆ. ಮಹಾರಾಷ್ಟ್ರದ ಸಚಿವ ಕಾರ್ಯಕ್ರಮದಲ್ಲಿ ಭಾಗವಹಿಸಿಲಿದ್ದಾರೆ ಎನ್ನುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಬೆಳಗಾವಿ ಪೊಲೀಸರು ಬೆಳಿಗ್ಗೆಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಮಹಾರಾಷ್ಟ್ರದಿಂದ ಬರುವ ವಾಹನಗಳನ್ನು ತಪಾಸಣೆ ನಡೆಸಿದ್ದರು.