ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ: ಹಿಂಡಲಗಾ ಕಾರಾಗೃಹಕ್ಕೆ ಮಹಾರಾಷ್ಟ್ರ ಪೊಲೀಸರು ಭೇಟಿ

ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಮಂಗಳೂರು ಮೂಲಕ ಜಯೇಶ ಪೂಜಾರಿ ಎಂಬ ಕೈದಿ, ಜೈಲಿನಲ್ಲಿಯೇ ಇದ್ದುಕೊಂಡು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ಕಚೇರಿಗೆ ಜ.14ರಂದು ಕರೆ ಮಾಡಿ 100 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಒಂದು ವೇಳೆ ಕೊಡದಿದ್ದರೆ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. 

Maharashtra Police visit to Hindalaga Jail in Belagavi on Nitin Gadkari Threatened Case grg

ಬೆಳಗಾವಿ(ಜು.13): ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಗೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮಹಾರಾಷ್ಟ್ರದ ನಾಗ್ಪುರ ಎಟಿಎಸ್‌ ಪೊಲೀಸರು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಮಂಗಳೂರು ಮೂಲಕ ಜಯೇಶ ಪೂಜಾರಿ ಎಂಬ ಕೈದಿ, ಜೈಲಿನಲ್ಲಿಯೇ ಇದ್ದುಕೊಂಡು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ಕಚೇರಿಗೆ ಜ.14ರಂದು ಕರೆ ಮಾಡಿ 100 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಒಂದು ವೇಳೆ ಕೊಡದಿದ್ದರೆ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಈ ಕುರಿತು ಮಹಾರಾಷ್ಟ್ರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿದ್ದರಿಂದ ಈ ಕರೆ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬಂದಿರುವುದು ಎಂದು ಖಚಿತಪಡಿಸಿಕೊಂಡು ಪರಿಶೀಲನೆ ನಡೆಸಿದ್ದರು.

BELGUM CRIME: ಚಾಕೊಲೇಟ್‌ ಆಮಿಷವೊಡ್ಡಿ ಬಾಲಕಿ ಕಿಡ್ನಾಪ್‌ ಯತ್ನ

ಆದರೆ ಈ ಘಟನೆ ಮಾಸುವ ಮುನ್ನವೇ ಮಾ.21ರಂದು ಎರಡನೇ ಬಾರಿಗೆ ಜಯೇಶ್‌ ಕಾಂತಾ ಅಲಿಯಾಸ್‌ ಜಯೇಶ್‌ ಪೂಜಾರಿ ಎಂಬಾತನ ಹೆಸರಿನಲ್ಲಿ ಮಹಾರಾಷ್ಟ್ರದ ನಾಗ್ಪುರದ ನಿತಿನ್‌ ಗಡ್ಕರಿ ಜನಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್‌ಗೆ ಕರೆ ಮಾಡಿ .10 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿರುವ ಗಡ್ಕರಿ ಕಚೇರಿಗೆ ಬಿಗಿ ಭದ್ರತೆ ಕಲ್ಪಿಸಿದ್ದ ಪೊಲೀಸರು ಜೀವ ಬೆದರಿಕೆ ಕರೆ ಎಲ್ಲಿಂದ ಬಂದಿತ್ತು ಎಂಬ ಬಗ್ಗೆ ಮಹಾರಾಷ್ಟ್ರ ಎಟಿಎಸ್‌ ಪೊಲೀಸರು ತನಿಖೆ ಕೈಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಮಾ.28ರಂದು ಬಂಧಿತ ಜಯೇಶ ಪೂಜಾರಿಯನ್ನು ನಾಗ್ಪುರ ಪೊಲೀಸರು ವಶಕ್ಕೆ ಪಡೆದುಕೊಂಡು ತಮ್ಮೊಂದಿಗೆ ಕರದೊಯ್ದಿದ್ದರು.

ಇದೀಗ ಮಹಾರಾಷ್ಟ್ರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಸಲ್ಲಿಕೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಜಯೇಶ್‌ ಪೂಜಾರಿ ಇರುವ ಹಿಂಡಲಗಾ ಕಾರಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಲ್ಲಿನ ಸಿಬ್ಬಂದಿ ಹಾಗೂ ಆತನೊಂದಿಗೆ ಸಂಪರ್ಕದಲ್ಲಿರುವ ಬೇರೆ ಕೈದಿಗಳಿಂದ ಆತನ ಕುರಿತು ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಮತ್ತೆ ಮಹಾರಾಷ್ಟ್ರದ ನಾಗ್ಪರಕ್ಕೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.

Latest Videos
Follow Us:
Download App:
  • android
  • ios