ಶಿವಮೊಗ್ಗ (ನ.05) : ಫೇಸ್‌ಬುಕ್‌ ಮೆಸೆಂಜರ್‌ ಮೂಲಕ ಮಕ್ಕಳ ಅಶ್ಲೀಲ ವೀಡಿಯೋ ಫಾರ್ವರ್ಡ್‌ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿ.ರಘು ಬಂಧಿತ ಆರೋಪಿ. ಸೈಬರ್‌ ಟಿಪ್‌ಲೈನ್‌ನಿಂದ ಬಂದ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ ಮೊಬೈಲ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಪಕ್ಕದ ಮನೆಯಲ್ಲಿ ಪ್ರೇಮಾಂಕುರ : 14ರ ಬಾಲಕನಿಂದ 12ರ ಬಾಲಕಿ ಗರ್ಭಿ​ಣಿ! ...

ಮಕ್ಕಳ ಅಶ್ಲೀಲ ವೀಡಿಯೋ ಅಥವಾ ಚಿತ್ರಗಳನ್ನು ಅಂತರ್ಜಾಲದ ಮೂಲಕ ಹುಡುಕುವುದು, ಶೇಖರಿಸುವುದು ಫಾರ್ವರ್ಡ್‌ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67 (ಆ) ಪ್ರಕಾರ ಅಪರಾಧ ಎಂದು ಎಸ್ಪಿ ಕೆ.ಎಂ.ಶಾಂತರಾಜು ಇದೇ ವೇಳೆ ತಿಳಿಸಿದ್ದಾರೆ.