ಯುವತಿ ಮನೆಯಲ್ಲಿ ಒಬ್ಬಳೆ ಇದ್ದಾಗ ನುಗ್ಗಿದ್ದ ದುಷ್ಕರ್ಮಿ ಆಕೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು ಸಿಕ್ಕಿ ಬಿದ್ದಿದ್ದಾನೆ. ಇದೀಗ ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರು (ಫೆ.02): ಕೊಣಾಜೆ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಕಿವುಡ ಮತ್ತು ಮೂಗ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
18ರ ಹರೆಯದ ಈ ಯುವತಿಯ ತಾಯಿ ಟೈಲರಿಂಗ್ ಅಂಗಡಿ ಇಟ್ಟುಕೊಂಡಿದ್ದು, ಈ ಯುವತಿ ಕೂಡ ಅಲ್ಲೇ ಇರುತ್ತಿದ್ದಳು. ಆದರೆ ಭಾನುವಾರ ಒಬ್ಬಳೇ ಮನೆಯಲ್ಲಿದ್ದಾಗ ಮಧ್ಯಾಹ್ನ ಹೊತ್ತಿಗೆ ಮನೆಗೆ ನುಗ್ಗಿದ ಆರೋಪಿ ಹಲ್ಲೆ ಮಾಡಿದ್ದಲ್ಲದೆ, ಅತ್ಯಾಚಾರಕ್ಕೂ ಯತ್ನಿಸಿದ್ದ. ಆದರೆ ಯುವತಿ ತಪ್ಪಿಸಿಕೊಂಡಿದ್ದಳು.
ಶೃಂಗೇರಿ ಬಾಲಕಿ ಮೇಲೆ 15 ಮಂದಿಯಿಂದ ರೇಪ್ : ಸಿಕ್ಕಿಬಿದ್ದರು 8 ಆರೋಪಿಗಳು .
ಆರೋಪಿ ಪಕ್ಕದ ಊರಿನ ನಿವಾಸಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದುದನ್ನು ನೋಡಿ ದುಷ್ಕೃತ್ಯ ಎಸಗಲು ಮುಂದಾಗಿದ್ದ ಎನ್ನಲಾಗಿದೆ.
ಇದೀಗ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 2, 2021, 3:16 PM IST