ಮಂಡ್ಯ (ಮಾ.10): ಅನ್ಯಕೋಮಿನ ಪ್ರೇಮಿಗಳಿಗೆ ಸಹಾಯ ಮಾಡಿದ್ದ ಎಂಬ ಕಾರಣಕ್ಕೆ ಯುವಕನೊಬ್ಬನ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ನಡೆದಿದೆ.

ಚೇತನ್‌ ಮಾರಣಾಂತಿಕ ಹಲ್ಲೆಗೊಳಗಾಗಿರುವ ಯುವಕ. ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಗೊಂಡಿರುವ ಚೇತನ್‌ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕೆಜಿಗೆ 60 ರೂಪಾಯಿಗಿಳಿದ ಕೋಳಿ ಬೆಲೆ, ಕುರಿ ಮಾಂಸಕ್ಕೆ ಭಾರೀ ಬೇಡಿಕೆ

ಬೆಳ್ಳೂರು ಪಟ್ಟಣದ ದಲಿತ ಸಮುದಾಯಕ್ಕೆ ಸೇರಿದ ಯುವಕ ಮತ್ತು ಅದೇ ಪಟ್ಟಣದ ಮುಸ್ಲಿಂ ಸಮುದಾಯದ ಯುವತಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅಲ್ಲದೇ ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪ್ರೇಮಿಗಳಿಗೆ ಚೇತನ್‌ ಸಹಾಯ ಮಾಡಿದ್ದಾನೆ ಎಂಬ ಆರೋಪ ಇತ್ತು. ನಾಪತ್ತೆಯಾದ ಜೋಡಿಯನ್ನು ಕರೆಸಿ ನ್ಯಾಯ ಪಂಚಾಯಿತಿ ನಡೆಸಿ ಇಬ್ಬರನ್ನೂ ಬೇರ್ಪಡಿಸಲಾಗಿತ್ತು. ಆದರೆ, ಪ್ರೇಮಿಗಳು ನಾಪತ್ತೆಯಾಗಲು ಚೇತನ್‌ ಸಹಾಯ ಮಾಡಿದ್ದ ಎಂಬ ಆರೋಪದ ಹಿನ್ನೆಲೆ ಮುಸ್ಲಿಂ ಮುಖಂಡರ ಕುಮ್ಮಕ್ಕಿನಿಂದಲೇ ದಲಿತ ಯುವಕನ ಸಂಬಂಧಿಕರು ಚೇತನ್‌ ಮಾಲೀಕತ್ವದ ಮೊಬೈಲ… ಅಂಗಡಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಕೋಳಿಗೆ 60 ರಿಂದ 65 ರೂಪಾಯಿ ಇಳಿತ..!

ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಲ್ಲೆ ನಡೆಸಿದ ಗುಂಪು ಮತ್ತು ಹಲ್ಲೆಗೊಳಗಾದ ಚೇತನ್‌ ವಿರುದ್ಧ ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"